ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಟ್ರೋಫಿ ಗೆಲ್ಲುವ ನೆಚ್ಚಿನ ಎರಡು ತಂಡಗಳು ಎನಿಸಿಕೊಂಡಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಟೂರ್ನಿಯಲ್ಲಿ ಟೀಮ್ ಇಂಡಿಯಾ ಆರಂಭದಿಂದಲೂ ಎಲ್ಲಾ ವಿಭಾಗಗಳಲ್ಲಿಯೂ ಮೇಲುಗೈ ಸಾಧಿಸಿ ಸಂಪೂರ್ಣ ತಂಡವಾಗಿ ಆಟ ಪ್ರದರ್ಶನ ನೀಡಿ ಗಮನ ಸೆಳೆದಿತ್ತು. ಆದರೆ ಆಸ್ಟ್ರೇಲಿಯಾ ತಂಡ ಆರಂಭದಲ್ಲಿ ಸತತ ಎರಡು ಸೋಲಿನ ಬಳಿಕ ಅದ್ಭುತ ರೀತಿಯಲ್ಲಿ ತಿರುಗಿಬಿದ್ದು ಇದೀಗ ಫೈನಲ್‌ವರೆಗೂ ಪ್ರಯಾಣ ಬೆಳೆಸುವಲ್ಲಿ ಯಶಸ್ವಿಯಾಗಿದೆ.
ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ವಿಶ್ವಕಪ್ ಟೂರ್ನಿಯ ಫೈನಲ್‌ಗೆ ಪ್ರವೇಶ ಪಡೆದಿದ್ದರೆ ಆಸ್ಟ್ರೇಲಿಯಾ ತಂಡ 8ನೇ ಬಾರಿಗೆ ಈ ಸಾಧನೆ ಮಾಡಿದೆ. ಇನ್ನು ಭಾರತ ಈವರೆಗೆ ಎರಡು ಬಾರಿ ಹಾಗೂ ಆಸ್ಟ್ರೇಲಿಯಾ ಐದು ಬಾರಿ ವಿಶ್ವಕಪ್ ಗೆದ್ದು ಬೀಗಿದೆ. ಹೀಗಾಗಿ ಭಾನುವಾಋ ನಡೆಯಲಿರುವ ವಿಶ್ವಕಪ್ ಫೈನಲ್ ಸೆಣೆಸಾಟದಲ್ಲಿ ಈ ಎರಡು ಬಲಿಷ್ಠ ತಂಡಗಳ ಮಧ್ಯೆ ಯಾವುದು ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುವುದು ತೀವ್ರ ಕುತೂಹಲಕ ಮೂಡಿಸಿದೆ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧದ ಈ ವಿಶ್ವಕಪ್‌ನ ಅಂತಿಮ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ಆರಂಭಕ್ಕೂ ಮುನ್ನ ಅದ್ದೂರಿ ಸಮಾರೋಪ ಸಮಾರಂಭ ಆಯೋಜನೆಯಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್
ಹೆಡ್ ಟು ಹೆಡ್
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಅಂತಾರಾಷ್ಟ್ರೀಯ ಏಕದಿನ ಮಾದರಿಯಲ್ಲಿ 150 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ ತಂಡ 57 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಆಸ್ಟ್ರೇಲಿಯಾ ತಂಡ 83 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 10 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಕಂಡಿದೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ(ನಾಯಕ) ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್