ಫೈನಲ್‌ಗೆ ಮುನ್ನ ಆಸ್ಟ್ರೇಲಿಯಾಗೆ ಕಾಡುತ್ತಿದೆ ಶಮಿ, ಜಡೇಜಾ ದುಃಸ್ವಪ್ನ!
2023ರ ವಿಶ್ವಕಪ್ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಭಾನುವಾರ ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಪ್ರಸಕ್ತ ವಿಶ್ವಕಪ್ ನಲ್ಲಿ ಭಾರತ ತಂಡ ಅತ್ಯಂತ ಬಲಿಷ್ಠ ಸ್ಥಿತಿಯಲ್ಲಿದೆ. ಟೀಮ್ ಇಂಡಿಯಾ 10 ಪಂದ್ಯಗಳನ್ನು ಆಡಿದ್ದು ಎಲ್ಲ ಪಂದ್ಯದಲ್ಲಿ ಜಯ ಸಾಧಿಸಿದೆ. ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧವೂ ಅವರ ದಾಖಲೆ ಉತ್ತಮವಾಗಿದೆ. ಶಮಿ ಜೊತೆಗೆ ರವೀಂದ್ರ ಜಡೇಜಾ ಕೂಡ ಸಾಕಷ್ಟು ವಿಕೆಟ್ ಕಬಳಿಸಿದ್ದಾರೆ.
ಆಸ್ಟ್ರೇಲಿಯ ವಿರುದ್ಧ ಭಾರತೀಯ ಬೌಲರ್ ಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ ಕಾಣಿಸಿಕೊಳ್ಳುತ್ತಾರೆ. ಎರಡನೇ ಸ್ಥಾನದಲ್ಲಿ ಸ್ವಿಂಗ್ ಬೌಲರ್ ಮೊಹಮ್ಮದ್ ಶಮಿ ಇದ್ದಾರೆ. ಶಮಿ 24 ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ.

ಆದರೆ ಜಡೇಜಾ 43 ಪಂದ್ಯಗಳಲ್ಲಿ 37 ವಿಕೆಟ್ ಪಡೆದಿದ್ದಾರೆ. ಒಟ್ಟಾರೆ ಪಟ್ಟಿಯಲ್ಲಿ ಜಡೇಜಾ ಮೂರನೇ ಸ್ಥಾನದಲ್ಲಿದ್ದಾರೆ. ಜಸ್ಪ್ರೀತ್ ಬುಮ್ರಾ ಕೂಡ ಉತ್ತಮ ಬೌಲಿಂಗ್ ಮಾಡಿದ್ದಾರೆ. ಇವರು 20 ಪಂದ್ಯಗಳಲ್ಲಿ 28 ವಿಕೆಟ್ ಪಡೆದಿದ್ದಾರೆ. ಬುಮ್ರಾ ಒಂದು ಪಂದ್ಯದಲ್ಲಿ 61 ರನ್‌ಗಳಿಗೆ 3 ವಿಕೆಟ್‌ಗಳನ್ನು ಕಬಳಿಸಿರುವುದು ಇವರ ಅತ್ಯುತ್ತಮ ಪ್ರದರ್ಶನವಾಗಿದೆ.
ಆಸ್ಟ್ರೇಲಿಯಾದ ವಿರುದ್ಧ ಭಾರತವು ಈ ವಿಶ್ವಕಪ್ ನ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳಿಂದ ಸೋಲಿಸಿತ್ತು. ಇದಾದ ನಂತರ ಆಸೀಸ್ ದಕ್ಷಿಣ ಆಫ್ರಿಕಾ ವಿರುದ್ಧ 134 ರನ್ಗಳ ಸೋಲನ್ನು ಎದುರಿಸಿತು. ಆಸ್ಟ್ರೇಲಿಯ ಮೊದಲ ಎರಡು ಪಂದ್ಯಗಳಲ್ಲಿ ಸೋತ ನಂತರ ಸತತ ಗೆಲುವು ದಾಖಲಿಸಿತು. ಸೆಮಿಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ಗಳಿಂದ ಸೋಲಿಸಿ ಫೈನಲ್ಗೆ ಲಗ್ಗೆ ಇಟ್ಟಿತು. ಆದರೆ ಭಾರತ ಆರಂಭದಲ್ಲಿ 9 ಪಂದ್ಯಗಳನ್ನು ಆಡಿದ್ದು ಎಲ್ಲವನ್ನು ಗೆದ್ದಿದೆ. ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟಿದೆ.
ವಿಶ್ವಕಪ್ 2023 ರ ಅಂತಿಮ ಪಂದ್ಯವು ಭಾನುವಾರ ಅಹಮದಾಬಾದ್ನಲ್ಲಿ ನಡೆಯಲಿದೆ ಇದಕ್ಕಾಗಿ ಟೀಂ ಇಂಡಿಯಾ ಸಂಪೂರ್ಣ ಸಿದ್ಧವಾಗಿದೆ. ಭಾರತ ತಂಡ ಅಭ್ಯಾಸ ಆರಂಭಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications