ವಿಶ್ವಕಪ್: ಮೊದಲ ಪಂದ್ಯದಲ್ಲಿ ಆಡಲು ಭಾರತ ಸಂಪೂರ್ಣ ಸಿದ್ದ; ಭಾರತ ತಂಡದೊಳಗಿನ ಇತ್ತೀಚಿನ ಸುದ್ದಿ
ಟೀಮ್ ಇಂಡಿಯಾ 2023ರ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯವನ್ನಾಡಲು ಸಜ್ಜಾಗಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಎದುರಾಳಿಯಾಗಿರುವುದು ಬಲಿಷ್ಠ ಆಸ್ಟ್ರೇಲಿಯಾ ತಂಡ. ಈ ಬಾರಿಯ ವಿಶ್ವಕಪ್ ಟೂರ್ನಿ ಗೆಲ್ಲುವ ಎರಡು ನೆಚ್ಚಿನ ತಂಡಗಳು ಮುಖಾಮುಖಿಯಾಗುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಭಾನುವಾರ ಈ ಎರಡು ತಮಡಗಳ ಮೆಗಾ ಹಣಾಹಣಿಗೆ ಚೆನ್ನೈನ ಚೆಪಾಕ್ ಕ್ರೀಡಾಂಗಣ ಸಂಪೂರ್ಣ ಸನ್ನಧವಾಗಿದೆ.
ರೋಹಿತ್ ಶರ್ಮಾ ನೇತೃತ್ವದಲ್ಲಿ ಟೀಮ್ ಇಂಡಿಯಾ ಭಾನುವಾರ ನಡೆಯಲಿರುವ ಈ ಪಂದ್ಯಕ್ಕೆ ಶನಿವಾರ ಕೊನೆಯ ತಯಾರಿಯನ್ನು ನಡೆಸಿದೆ. ಇತ್ತೀಚೆಗ ಈ ಎರಡು ತಂಡಗಳು ಭಾರತದಲ್ಲಿಯೇ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದಾಗ ಭಾರತ ತಡ 2-1 ಅಂತರದಿಂದ ಭರ್ಜರಿಯಾಗಿ ಸರಣಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿಶ್ವಕಪ್ ವೇದಿಕೆಯಲ್ಲಿ ಪೂರ್ಣ ಸಾಮರ್ಥ್ಯದೊಂದಿಗೆ ಆಸಿಸ್ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ನೋಡಲು ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿಯಿದೆ.

ಇನ್ನು ಈ ಮಾಹಾ ಮುಖಾಮುಖಿಗೂ ಮುನ್ನ ಭಾರತ ತಂಡದ ಕೆಲ ಪ್ರಮುಖ ಸುದ್ದಿಗಳು ಇಲ್ಲಿದೆ..
ಶನಿವಾರವೂ ಅಭ್ಯಾಸಕ್ಕೆ ಇಳಿದಿಲ್ಲ ಶುಬ್ಮನ್ ಗಿಲ್
ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಶುಬ್ಮನ್ ಗಿಲ್ ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯಕ್ಕೂ ಮುನ್ನ ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಅವರು ಸದ್ಯ ವಿಶ್ರಾಂತಿಯಲ್ಲಿದ್ದಾರೆ. ಶನಿವಾರವೂ ಅವರು ಭಾರತ ತಂಡದ ಜೊತೆಗೆ ಅಭ್ಯಾಸದಲ್ಲಿ ಭಾಗಿಯಾಗಿರಲಿಲ್ಲ. ಹೀಗಾಗಿ ಭಾನುವಾರದ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ ಬಹುತೇಕ ಕ್ಷೀಣಿಸಿದೆ. ಆದರೆ ಈ ವಿಚಾರವಾಗಿ ಕೋಚ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದು ಗಿಲ್ ಇನ್ನು ಕೂಡ ಪಂದ್ಯದಿಂದ ಹೊರಬಿದ್ದಿಲ್ಲ ಎಂದಿದ್ದಾರೆ.
ಆರಂಭಿಕನಾಗಿ ಇಶಾನ್ ಕಿಶನ್
ಇನ್ನು ಶುಬ್ಮನ್ ಗಿಲ್ ಅನಾರೋಗ್ಯಕ್ಕೆ ತುತ್ತಾಗಿರುವ ಹಿನ್ನೆಲೆಯಲ್ಲಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ರೋಹಿತ್ ಶರ್ಮಾಗೆ ಆರಂಭಿಕನಾಗಿ ಇಶಾನ್ ಕಿಶನ್ ಸಾಥ್ ನೀಡುವ ಸಾಧ್ಯತೆ ಹೆಚ್ಚಿದೆ. ಇಶಾನ್ ಕಿಶನ್ ಬ್ಯಾಕಪ ವಿಕೆಟ್ ಕೀಪರ್ ಆಗಿರುವ ಜೊತೆಗೆ ಬ್ಯಾಕಪ್ ಆರಂಭಿಕ ಆಟಗಾರನಾಗಿಯೂ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ
ಇನ್ನು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸಿಸ್ ಬಲಿಷ್ಠ ಬ್ಯಾಟಿಂಗ್ ವಿಭಾಗಕ್ಕೆ ಆಘಾತ ನೀಡಲು ದೊಡ್ಡ ರಣತಂತ್ರವನ್ನು ಸಿದ್ಧಪಡಿಸಿದೆ. ಈ ಪಂದ್ಯಕ್ಕೆ ಬಾರತ ಮೂವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ರವಿಂದ್ರ ಜಡೇಜಾ, ಕುಲ್‌ದೀಪ್ ಯಾದವ್ ಜೊತೆಗೆ ಈ ಪಂದ್ಯದಲ್ಲಿ ಆರ್ ಅಶ್ವಿನ್ ಕೂಡ ಕಣಕ್ಕಿಳಿಯುವುದು ಬಹುತೇಕ ನಿಚ್ಚಳವಾಗಿದೆ.
ವೇಗದ ಬೌಲಿಂಗ್ ವಿಭಾಗ
ಇನ್ನು ಈ ಪಂದ್ಯದಲ್ಲಿ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿರುವ ಕಾರಣ ಭಾರತದ ವೇಗದ ಬೌಲಿಂಗ್‌ನಲ್ಲಿ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪ್ರಮುಖವಾಗಿ ಕಾಣಿಸಿಕೊಳ್ಳುವುದು ಸ್ಪಷ್ಟ. ಅನುಭವಿ ಮೊಹಮ್ಮದ್ ಶಮಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿಲ್ಲ. ಇನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್ ವಿಭಾಗಕ್ಕೆ ಬೆಂಬಲ ನೀಡಲಿದ್ದಾರೆ.
ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ
ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಕುಲ್‌ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications