Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕ್ರಿಕೆಟ್ ಜನಕರಿಗೂ 'ಶಮಿ' ಕಾಟ: ಮುಂದುವರಿದ ಟೀಮ್ ಇಂಡಿಯಾದ ಅಜೇಯ ಗೆಲುವಿನ ಓಟ

ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಜೈತಯಾತ್ರೆಗೆ ಮುಂದುವರಿದಿದೆ. ಏಕಾನ ಕ್ರೀಡಾಂಗಣದಲ್ಲಿ ನಡದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಅಬ್ಬರಿಸಿದೆ. ಈ ಮೂಲಕ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ 100 ರನ್‌ಗಳ ಅಂತರದ ಗೆಲುವು ಸಾಧಿಸಿದೆ.

ಟೀಮ್ ಇಂಡಿಯಾ ನೀಡಿದ 230 ರನ್‌ಗಳ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಇಂಗ್ಲೆಂಡ್ ತಂಡ ಉತ್ತಮ ಆರಂಭ ನೀಡುವ ಮುನ್ಸೂಚನೆ ನೀಡಿತ್ತು. ಆದರೆ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಅದಕ್ಕೆ ಅವಕಾಶ ನೀಡಲಿಲ್ಲ. ಅದಾದ ಬಳಿಕ ಮೊಹಮ್ಮದ್ ಶನಿ ಅಖಾಡಕ್ಕೆ ಇಳಿದು ಮತ್ತಷ್ಟು ಆಘಾತ ನೀಡಿದರು. ಇದರಿಂದ ಚೇತರಿಸಿಕೊಳ್ಳಲು ಇಂಗ್ಲೆಂಡ್ ತಂಡಕ್ಕೆ ಸಾಧ್ಯವಾಗಲೇ ಇಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡ 129 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿದೆ.

World cup: Ind vs Eng, Team India won against England by 100 runs

ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಯಾವೊಬ್ಬ ಆಟಗಾರನಿಂದಲೂ ದೊಡ್ಡ ಮೊತ್ತದ ಪ್ರದರ್ಶನ ಬಾರಲೇ ಇಲ್ಲ. ಲಿಯಾನ್ ಲಿಂಗ್‌ಸ್ಟನ್ ಅವರ 27 ರನ್ ತಂಡದ ಪರವಾಗಿ ಬಂದ ಅತಿ ಹೆಚ್ಚಿನ ಸ್ಕೋರ್ ಎ ಇನಿಸಿಕೊಂಡಿದೆ. ಇನ್ನು ತಂಡದ ಇಬ್ಬರು ಸ್ಟಾರ್ ಆಟಗಾರರಾದ ಜೋ ರೂಟ್ ಹಾಗೂ ಬೆನ್ ಸ್ಟೋಕ್ಸ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ನಾಲ್ಕು ವಿಕೆಟ್ ಪಡೆದು ಅಬ್ಬರಿಸಿದ್ದಾರೆ. ಇನ್ನು ಜಸ್ಪ್ರೀತ್ ಬೂಮ್ರಾ ಮೂರು ವಿಕೆಟ್ ಕಬಳಿಸಿದ್ದಾರೆ. ಕುಲ್‌ದೀಪ್ ಯಾದವ್ ಎರಡು ವಿಕೆಟ್ ಪಡೆದರೆ ರವೀಂದ್ರ ಜಡೇಜಾ ಒಂದು ವಿಕೆಟ್ ಕಬಳಿಸಿದ್ದಾರೆ.

ಇನ್ನು ಇದಕ್ಕೂ ಮುನ್ನ ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದ ಭಾರತ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಶುಬ್ಮನ್ ಗಿಲ್ 9 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರು. ಅದಾದ ಬಳಿಕ ಬಂದ ಶ್ರೇಯಸ್ ಐಯ್ಯರ್ ಕೂಡ ನಾಲ್ಕೇ ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಅಲ್ಲಿಗೆ ಟೀಮ್ ಇಂಡಿಯಾ 40 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ ಅದಾದ ಬಳಿಕ ನಾಯಕ ರೋಹಿತ್ ಶರ್ಮಾ ಜೊತೆಗೆ ಕೆಎಲ್ ರಾಹುಲ್ ಉತ್ತಮ ಜೊತೆಯಾಟವೊಂದರಲ್ಲಿ ಭಾಗಿಯಾದರು. 91 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದ ಈ ಜೋಡಿಯನ್ನು ವಿಲ್ಲಿ ರಾಹುಲ್ ಅವರನ್ನು ಔಟ್ ಮಾಡುವ ಊಲಕ ಬೇರ್ಪಡಿಸಿದರು. 39 ರನ್‌ಗಳ ಗಮನಾರ್ಹ ಕೊಡುಗೆ ನೀಡಿದ ರಾಹುಲ್ ದೊಡ್ಡ ಮೊತ್ತ ಗಳಿಸಲು ವಿಫಲವಾದರು.

ಇನ್ನು ರಾಹುಲ್ ವಿಕೆಟ್ ಕಳೆದುಕೊಂಡ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಕೂಡ ಅದ್ಭುತ ಪ್ರದರ್ಶನ ನೀಡಿ ತಂಡಕ್ಕೆ ಆಸರೆಯಾದರು. ಈ ಮಧ್ಯೆ ರೋಹಿತ್ ಶರ್ಮಾ 87 ರನ್‌ಗಳನ್ನು ಗಳಿಸಿ ಶತಕದಂಚಿನಲ್ಲಿ ಎಡವಿದರು. 101 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 10 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ 49 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಟೀಮ್ ಇಂಡಿಯಾ 229 ರನ್‌ಗಳಿಗೆ ಇನ್ನಿಂಗ್ಸ್ ಅಂತ್ಯಗೊಳಿಸಿತ್ತು.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಬೆಂಚ್: ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್

ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಸ್ಯಾಮ್ ಕುರ್ರಾನ್, ಬ್ರೈಡನ್ ಕಾರ್ಸೆ, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್

Story first published: Sunday, October 29, 2023, 21:29 [IST]
Other articles published on Oct 29, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+