ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಭ್ಯಾಸ ಪಂದ್ಯ: ಕಿವೀಸ್ ವಿರುದ್ಧ ಭಾರತದ 4ನೇ ಕ್ರಮಾಂಕಕ್ಕೆ ಯಾರು?

World Cup, India vs New Zealand warm-up: With Shankar injured?

ಲಂಡನ್, ಮೇ 25: ಭಾರತ ವಿಶ್ವಕಪ್ ತಂಡದಕ್ಕೆ ನಂ.1 ಆಯ್ಕೆಯ ಬ್ಯಾಟ್ಸ್ಮನ್ ಆಗಿದ್ದ ಆಲ್ ರೌಂಡರ್ ವಿಜಯ್ ಶಂಕರ್ ಬಲಗೈಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಶನಿವಾರ (ಮೇ 25) ನ್ಯೂಜಿಲ್ಯಾಂಡ್ ವಿರುದ್ಧದ ವಾರ್ಮ್ ಅಪ್ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಯಾರು ಬರಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಒಂದು ವೇಳೆ ವಿಜಯ್ ಚೇತರಿಸಿಕೊಳ್ಳದಿದ್ದರೆ 4ನೇ ಕ್ರಮಾಂಕದಲ್ಲಿ ಕೇದಾರ್ ಜಾಧವ್ ಅವರನ್ನು ನಿರೀಕ್ಷಿಸಬಹುದು.

ವಿಶ್ವಕಪ್: ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ತುಟಿ ಬಿಚ್ಚಿದ ರೋಹಿತ್ ಶರ್ಮಾವಿಶ್ವಕಪ್: ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ತುಟಿ ಬಿಚ್ಚಿದ ರೋಹಿತ್ ಶರ್ಮಾ

ಲಂಡನ್‌ನ ಕಿಂಗ್ಸ್‌ಟನ್ ಓವಲ್‌ನಲ್ಲಿ ವಿಶ್ವಕಪ್ 4ನೇ ವಾರ್ಮ್‌ಅಪ್ ಪಂದ್ಯದಲ್ಲಿ ಭಾರತ, ನ್ಯೂಜಿಲ್ಯಾಂಡ್ ತಂಡವನ್ನು ಎದುರುಗೊಳ್ಳುತ್ತಿದೆ. ಗುರುವಾರ (ಮೇ 23) ಅಭ್ಯಾಸ ಪಂದ್ಯದ ವೇಳೆ ವಿಜಯ್ ಶಂಕರ್ ಬಲ ಗೈ ಮುಂದೋಳಿಗೆ ಗಾಯ ಮಾಡಿಕೊಂಡಿದ್ದರು. ಅವರ ಚೇತರಿಕೆ ಬಗ್ಗೆ ಬಿಸಿಸಿಐ ಯಾವುದೇ ಮಾಹಿತಿ ನೀಡಿಲ್ಲ.

ವಿಶ್ವಕಪ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಹರಿಸಿದ ರನ್‌ ಹೊಳೆಯ ದಾಖಲೆಗಳಿವುವಿಶ್ವಕಪ್‌ನಲ್ಲಿ ಬ್ಯಾಟ್ಸ್‌ಮನ್‌ಗಳು ಹರಿಸಿದ ರನ್‌ ಹೊಳೆಯ ದಾಖಲೆಗಳಿವು

ಮೇ 24ರಿಂದಲೇ ವಾರ್ಮ್ ಅಪ್ ಪಂದ್ಯಗಳು ಶುರುವಾಗಿವೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಫ್ಘಾನಿಸ್ತಾನ ತಂಡ, ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಜಯ ಸಾಧಿಸಿದೆ. ಮೇ 25ರಂದು ಇಂಗ್ಲೆಂಡ್ vs ಆಸ್ಟ್ರೇಲಿಯಾ ಮತ್ತು ಭಾರತ ಮತ್ತು ಕಿವೀಸ್ ತಂಡಗಳು ಅಭ್ಯಾಸ ನಡೆಸಲಿವೆ. ಪಂದ್ಯ ಭಾರತೀಯ ಕಾಲಮಾನ 3 pmಗೆ ಶುರುವಾಗಲಿದೆ.

ಭಾರತ ತಂಡ: ವಿರಾಟ್ ಕೊಹ್ಲಿ (ಸಿ), ಎಂಎಸ್ ಧೋನಿ (ವಿಕೆ), ರೋಹಿತ್ ಶರ್ಮಾ, ಶಿಖರ್ ಧವನ್, ವಿಜಯ್ ಶಂಕರ್, ಕೇದಾರ್‌ ಜಾಧವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ಭುವನೇಶ್ವರ ಕುಮಾರ್, ಲೋಕೇಶ್ ರಾಹುಲ್, ದಿನೇಶ್ ಕಾರ್ತಿಕ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್.

ಐಸಿಸಿ ವಿಶ್ವಕಪ್ ಹೊಸ್ತಿಲಲ್ಲೇ 'ಮಂಡೆಬಿಸಿ'ಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ!ಐಸಿಸಿ ವಿಶ್ವಕಪ್ ಹೊಸ್ತಿಲಲ್ಲೇ 'ಮಂಡೆಬಿಸಿ'ಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ!

ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ (ಸಿ), ಟಾಮ್ ಬ್ಲಂಡೆಲ್ (ವಿಕೆ), ಕಾಲಿನ್ ಮುನ್ರೋ, ಮಾರ್ಟಿನ್ ಗಪ್ಟಿಲ್, ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಜೇಮ್ಸ್ ನೀಶಾಂ, ಮಿಚೆಲ್ ಸ್ಯಾಂಟ್ನರ್, ಲಾಕೀ ಫರ್ಗುಸನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಕಾಲಿನ್ ಡಿ ಗ್ರಾಂಡ್ಹೋಮ್, ಟಾಮ್ ಲ್ಯಾಥಮ್, ಇಶ್ ಸೋಧಿ.

Story first published: Saturday, May 25, 2019, 11:58 [IST]
Other articles published on May 25, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X