Ind vs Pak: ಆಡುವ ಬಳಗದಲ್ಲಿ ಗಿಲ್‌ಗೆ ಸ್ಥಾನ: ಮತ್ತೊಮ್ಮೆ ಅವಕಾಶ ಕಳೆದುಕೊಂಡ ಸ್ಟಾರ್ ಕ್ರಿಕೆಟಿಗ
ಭಾರತ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯ ಆರಂಭವಾಗಿದ್ದು ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಒಂದು ಬದಲಾವಣೆಯನ್ನು ಮಾತ್ರವೇ ಮಾಡಿಕೊಂಡಿದ್ದು ಪಾಕಿಸ್ತಾನ ವಿರುದ್ಧ ರಂತಂತ್ರವನ್ನು ಸಿದ್ಧಪಡಿಸಿಕೊಂಡಿದೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಶುಬ್ಮನ್ ಗಿಲ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಡೆಂಗ್ಯೂ ಜ್ವರದಿಮದ ಬಳಲುತ್ತಿದ್ದ ಶುಬ್ಮನ್ ಗಿಲ್ ವಿ೯ಶ್ವಕಪ್ ಟೂರ್ನಿಯ ಮೊದಲ ಎರಡು ಪಂದ್ಯಗಳಿಗೆ ಅಲಭ್ಯವಾಗಿದ್ದರು. ಆಸ್ಪತ್ರೆಗೂ ದಾಖಲಾಗಿದ್ದ ಶುಬ್ಮನ್ ಗಿಲ್ ಈ ಮಹತ್ವದ ಪಂದ್ಯಕ್ಕೆ ಲಭ್ಯವಾಗುವ ಬಗ್ಗೆ ಅನುಮಾನಗಳು ಎದ್ದಿದ್ದವು. ಇದೀಗ ಗಿಲ್ ಸಂಪೂರ್ಣವಾಗಿ ಫಿಟ್ ಆಗಿದ್ದು ಪಾಕ್ ವಿರುದ್ಧ ಕಣಕ್ಕಿಳಿಯುತ್ತಿದ್ದಾರೆ.

ಶುಬ್ಮನ್ ಗಿಲ್ ಇಂದಿನ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಳ್ಳುವ ಕಾರಣದಿಂದಾಗಿ ಇಶಾನ್ ಕಿಶನ್ ಬೆಂಚ್ ಕಾಯಬೇಕಾಗಿದೆ. ಉಳಿದಂತೆ ಭಾರತ ತಂಡ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಶಾರ್ದೂಲ್ ಠಾಕೂರ್ ಈ ಪಂದ್ಯದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರ್ ಅಶ್ವಿನ್ ಈ ಪಂದ್ಯದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಅಹ್ಮದಾಬಾದ್‌ನ ಪಿಚ್ ಸ್ಪಿನ್ನರ್‌ಗಳಿಗೆ ನೆರವು ನೀಡುವ ಸಾಧ್ಯತೆಯಿರುವ ಕಾರಣ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿತ್ತು. ಆದರೆ ಮ್ಯಾನೇಜ್‌ಮೆಂಟ್ ಬೇರೆಯದೇ ಲೆಕ್ಕಾಚಾರವನ್ನು ಹಾಕೊಂಡಿದ್ದು ಅಶ್ವಿನ್ ಬದಲಿಗೆ ಶಾರ್ದೂಲ್ ಠಾಕೂರ್ ಅವರನ್ನೇ ಉಳಿಸಿಕೊಳ್ಳಲು ನಿರ್ಧರಿಸಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್
ಪಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಶದಬ್ ಖಾನ್, ಮೊಹಮ್ಮದ್ ನವಾಜ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್
ಬೆಂಚ್: ಆಘಾ ಸಲ್ಮಾನ್, ಫಖರ್ ಜಮಾನ್, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications