World cup: ಅಫ್ಘಾನ್ ವಿರುದ್ಧ ಆಡಲ್ಲ; ಪಾಕ್ ವಿರುದ್ಧವೂ ಕಣಕ್ಕಿಳಿಯುವುದು ಅನುಮಾನ ಭಾರತ ಸ್ಟಾರ್ ಆಟಗಾರ
ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಅಭಿಯಾನ ಯಶಸ್ವಿಯಾಗಿ ಆರಂಭವಾಗಿದೆ. ಆಸ್ಟ್ರೇಲಿಯಾ ತಂಡದ ವಿರುದ್ಧ ಚೆನ್ನೈನಲ್ಲಿ ಅದ್ಭುತ ಗೆಲುವು ಸಾಧಿಸಿರುವ ಭಾರತ ತಂಡ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಇದೀಗ ತನ್ನ ಎರಡನೇ ಪಂದ್ಯದ ಮೇಲೆ ಭಾರತ ಚಿತ್ತ ನೆಟ್ಟಿದ್ದು ಅಫ್ಘಾನಿಸ್ತಾನ ತಂಡವನ್ನು ಬುಧವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಎದುರಿಸಲಿದೆ.
ಆದರೆ ಈ ಪಂದ್ಯದಲ್ಲಿಯೂ ಭಾರತಕ್ಕೆ ನಿರೀಕ್ಷಿಸಿದ ಆಡುವ ಬಳಗವನ್ನು ಕಣಕ್ಕಿಳಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಈಗ ಖಚಿತವಾಗಿದೆ. ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯದಲ್ಲಿಯೂ ಭಾರತ ತಂಡದ ಪ್ರಮುಖ ಆಟಗಾರ ಕಣಕ್ಕಿಳಿಯುವುದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಪಾಕ್ ವಿರುದ್ಧದ ಪಂದ್ಯಕ್ಕೆ ಕೂಡ ಈ ಆಟಗಾರನ ಲಭ್ಯತೆ ಸ್ಪಷ್ಟವಾಗಿಲ್ಲ.

ಅಂದಹಾಗೆ ಟೀಮ್ ಇಂಡಿಯಾದ ಮುಂದಿನ ಎರಡು ಪಂದ್ಯಗಳಿಗೆ ಅಲಭ್ಯವಾಗುವ ಸಾಧ್ಯತೆಯಿರುವ ಆಟಗಾರ ಬೇರೆ ಯಾರೂ ಅಲ್ಲ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಬ್ಮನ್ ಗಿಲ್. ಈಗಾಗಲೇ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಹೊರಗುಳಿದಿರುವ ಶುಬ್ಮನ್ ಗಿಲ್ ಮುಂದಿನ ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ ಎನ್ನಲಾಗಿತ್ತು.
ಆದರೆ ಈಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಶುಬ್ಮನ್ ಗಿಲ್ ಅಫ್ಘಾನಿಸ್ತಾನ ವಿರುದ್ಧ ಬುಧವಾರ ದೆಹಲಿಯಲ್ಲಿ ನಡೆಯಲಿರುವ ಪಂದ್ಯಕ್ಕೆ ಅಲಭ್ಯವಾಗುವುದು ಬಹುತೇಕ ನಿಶ್ಚಿತ. ಅಲ್ಲದೆ ಶನಿವಾರ ಭಾರತ ಪಾಕಿಸ್ತಾನ ತಂಡವನ್ನು ಅಹ್ಮದಾಬಾದ್‌ನಲ್ಲಿ ಎದುರಿಸಲಿದ್ದು ಈ ಪಂದ್ಯದಕ್ಕೂ ಗಿಲ್ ಆಡುವ ಸಾಧ್ಯತೆಯ ಬಗ್ಗೆ ಅನುಮಾನಗಳು ಉಂಟಾಗಿದೆ.
ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವ ಶುಬ್ಮನ್ ಗಿಲ್
ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಶುಬ್ಮನ್ ಗಿಲ್ ಡೆಂಗ್ಯೂ ಜ್ವರಕ್ಕೆ ತುತ್ತಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಅವರು ಹೊರಗುಳಿದಿದ್ದರು. ಪಂದ್ಯಕ್ಕೂ ಮುನ್ನ ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನೀಡಿದ ಮಾಹಿತಿಯ ಪ್ರಕಾರ ಶುಬ್ಮನ್ ಗಿಲ್ ಬಹುತೇಕ ಚೇತರಿಸಿಕೊಂಡಿದ್ದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊನೆಯ ಕ್ಷಣದವರೆಗೂ ಅವರ ಲಭ್ಯತೆಯನ್ನು ನಿರೀಕ್ಷಿಸಲಾಗಿತ್ತು. ಅಂತಿಮವಾಗಿ ಗಿಲ್ ಬದಲಿಗೆ ಇಶಾನ್ ಕಿಶನ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದರು.
ಇನ್ನು ಶುಬ್ಮನ್ ಗಿಲ್ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜೊತೆಗೆ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಆದರೆ ಈ ಪಂದ್ಯದಲ್ಲಿ ಆರಂಭಿಕ ಆಟಗಾರರಿಬ್ಬರು ಕೂಡ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಇಶಾನ್ ಕಿಶನ್ ಹಾಗೂ ರೋಹಿತ್ ಶರ್ಮಾ ಇಬ್ಬರು ಕೂಡ ಶೂನ್ಯಕ್ಕೆ ವಿಕೆಟ್ ಕಳೆದುಕೊಂಡಿದ್ದರು. ಇವರ ನಂತರ ಶ್ರೇಯಸ್ ಐಯ್ಯರ್ ಕೂಡ ಶೂನ್ಯ ಸುತ್ತಿದ್ದಾಗ ತಂಡದ ಸ್ಥಿತಿ ಹೀನಾಯವಾಗಿತ್ತು. ಆದರೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಜೋಡಿ ಈ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತದ ಗೆಲುವಿಗೆ ಕಾರಣವಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications