For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್ 2023; ನ್ಯೂಜಿಲೆಂಡ್ ಗೆಲುವಿನ ಓಟಕ್ಕೆ ತಡೆ ನೀಡುತ್ತಾ ಬಾಂಗ್ಲಾ: ಪಂದ್ಯದ ಸಮಯ, ಸಂಭಾವ್ಯ ಪ್ಲೇಯಿಂಗ್ XI

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿಯೂ ಭರ್ಜರಿಯಾಗಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಬಾಂಗ್ಲಾದೇಶದ ವಿರುದ್ಧ ಕಿವೀಸ್ ಪಡೆ ಮೂರನೇ ಪಂದ್ಯವನ್ನಾಡಲಿದ್ದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಬಾಂಗ್ಲಾದೇಶ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಗೆಲುವು ಸಾಧಿಸಿದ್ದರೆ ನಂತರ ಇಂಗ್ಲೆಂಡ್ ವಿರುದ್ಧ ಸೋಲಿನ ರುಚಿ ಕಂಡಿದೆ. ಹೀಗಾಗಿ ಚೆನ್ನೈನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಮೇಲುಗೈ ಸಾಧಿಸುವ ನಿರೀಕ್ಷೆಯಲ್ಲಿದೆ.

World cup, match 11: New Zealand vs Bangladesh; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಇನ್ನು ನ್ಯೂಜಿಲೆಂಡ್ ಹಾಗೂ ಬಾಂಗ್ಲಾದೇಶ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್

ಚೆನ್ನೈನ ಚೆಪಾಕ್ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿ ಪಿಚ್ ಎನ್ನುವುದು ಹೊಸ ವಿಚಾರವೇನಲ್ಲ. ಈ ವಿಶ್ವಕಪ್‌ನಲ್ಲಿಯೂ ಸಾಂಪ್ರದಾಯಿಕ ಚೆನ್ನೈ ಪಿಚ್ ಸ್ಪಿನ್ನರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಇದೇ ಪಂದ್ಯದಲ್ಲಿ ನಡೆದಿದ್ದಾಗಲೂ ಅದು ಸಾಬೀತಾಗಿತ್ತು. ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಇದೇ ಪಂದ್ಯದಲ್ಲಿ ನಡೆದಿದ್ದಾಗಲೂ ಅದು ಸಾಬೀತಾಗಿತ್ತು. ಇಲ್ಲಿ ಶಕೀಬ್ ಅಲ್ ಹಸನ್ ಹಾಗೂ ಮಿಚೆಲ್ ಸ್ಯಾಂಟ್ನರ್ ಅದ್ಭುತ ಯಶಸ್ಸು ಪಡೆಯುವ ಸಾಧ್ಯತೆಯಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಫೀಲ್ಡಿಂಗ್ ಆಯ್ದುಕೊಳ್ಳುವುದು ನಿಸ್ಸಂಶಯ.

ಬಾಂಗ್ಲಾದೇಶ ಸಂಭಾವ್ಯ ಆಡುವ ಬಳಗ: ತಂಝಿದ್ ಹಸನ್, ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮೆಹಿದಿ ಹಸನ್ ಮಿರಾಜ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ 'ಕ್ರಿಕೆಟ್‌ನ ಧ್ವನಿ'; ಏನಾಯ್ತು ಹರ್ಷಾ ಭೋಗ್ಲೆಗೆ?

ನ್ಯೂಜಿಲೆಂಡ್ ಸಂಭಾವ್ಯ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್(ನಾಯಕ), ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ವಿಲ್ ಯಂಗ್, ಟಿಮ್ ಸೌಥಿ, ಇಶ್ ಸೋಧಿ, ಜೇಮ್ಸ್ ನೀಶಮ್

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಾಕಿಬ್ ಅಲ್ ಹಸನ್(ನಾಯಕ), ಮುಶ್ಫಿಕರ್ ರಹೀಮ್, ತೌಹಿದ್ ಹೃದಯ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ

Story first published: Thursday, October 12, 2023, 18:41 [IST]
Other articles published on Oct 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+