ಆಸ್ಟ್ರೇಲಿಯಾ vs ಶ್ರೀಲಂಕಾ: ಗೆಲುವಿನ ರುಚಿಗಾಗಿ ಹಪಹಪಿಸುತ್ತಿರುವ ದಿಗ್ಗಜ ತಂಡಗಳು: Live ಸ್ಕೋರ್
ಈ ಬಾರಿಯ ವಿಶ್ವಕಪ್ ಟೂರ್ನಿಯ 14ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸುವ ಸವಾಲು ಪಡೆದುಕೊಂಡಿದೆ.
ಈ ಪಂದ್ಯದಲ್ಲಿ ಶ್ರೀಲಂಕಾ ತಂಡದಲ್ಲಿ ಎರಡು ಬದಲಾವಣೆಗಳು ಆಗಿದೆ. ತಂಡದ ನಾಯಕನಾಗಿದ್ದ ದಾಸುನ್ ಶನಕ ಗಾಯದಿಂದಾಗಿ ಟೂರ್ನಿಯಿಮದ ಹೊರಬಿದ್ದಿದ್ದು ನಾಯಕನಾಗಿ ಕುಸಾಲ್ ಮೆಂಡಿಸ್ ತಂಡವನ್ನು ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಮಥೀಶ ಪತಿರಣ ಕೂಡ ಈ ಪಂದ್ಯದಲ್ಲಿ ಆಡುವ ಬಳಗದಿಂದ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಚಾಮಿಕ ಕರುಣರತ್ನೆ ಹಾಗೂ ಲಹಿರು ಕುಮಾರ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ಈ ಬಾರಿಯ ವಿಶ್ವಕಪ್‌ನಲ್ಲಿ ಯಾರೂ ನಿರೀಕ್ಷಿಸದ ಸನ್ನಿವೇಶಗಳು ಟೂರ್ನಿಯ ಆರಂಭಿಕ ಹಂತದಲ್ಲಿ ಸೃಷ್ಟಿಯಾಗಿದೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳಲ್ಲಿಯೂ ಸತತವಾಗಿ ಸೋಲು ಕಂಡು ಅತ್ಯಂಕ ಹೀನಾಯವಾದ ಆರಂಭ ಪಡೆದುಕೊಂಡಿದೆ. ಹೀಗಾಗಿ ಈ ಪಂದ್ಯದಲ್ಲಿ ಆಸಿಸ್ ತಂಡಕ್ಕೆ ಗೆಲುವು ಅನಿವಾರ್ಯ ಎನಿಸಿಕೊಂಡಿದೆ.
ಮತ್ತೊಂದೆಡೆ ಶ್ರೀಲಂಕಾ ಸ್ಥಿತಿ ಕೂಡ ಇದೇ ರೀತಿಯಾಗಿದ್ದು ಮೊದಲ ಎರಡು ಪಂದ್ಯಗಳಲ್ಲಿಯೂ ಲಂಕಾ ತಮಡ ಸೋಲು ಅನುಭವಿಸಿದೆ. ಹೀಗಾಗಿ ಶ್ರೀಲಂಕಾ ತಂಡಕ್ಕೂ ಗೆಲುವು ಅಗತ್ಯ. ಇದರ ಬೆನ್ನಿಗೆ ತಂಡದ ನಾಯಕ ದಾಸುನ್ ಶನಕ ಗಾಯದಿಂದ ತಂಡದಿಂದ ಹೊರಬಿದ್ದಿರುವುದು ತಂಡಕ್ಕೆ ಮತ್ತೊಂದು ಆಘಾತ. ಈ ಹಿನ್ನಡೆಯ ಹೊರತಾಗಿಯೂ ಮೊದಲ ಗೆಲುವಿಗಾಗಿ ನಡೆಸುವ ಹೋರಾಟದಲ್ಲಿ ಲಂಕಾ ಪಡೆ ಯಶಸ್ಸು ಸಾಧಿಸುತ್ತಾ ಎನ್ನುವುದು ಕುತೂಹಲ ಮೂಡಿಸಿದೆ.
ಆಸ್ಟ್ರೇಲಿಯಾ ಆಡುವ ಬಳಗ: ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಸೀನ್ ಅಬಾಟ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಗೆ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶಾನ್ ಮಧುಶಂಕ
ಬೆಂಚ್: ದುಶನ್ ಹೇಮಂತ, ಮಥೀಶ ಪತಿರಣ, ಕಸುನ್ ರಜಿತ, ದಿಮುತ್ ಕರುಣಾರತ್ನೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications