For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌ನಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ: ದ. ಆಫ್ರಿಕಾಗೆ ದೊಡ್ಡ ಶಾಕ್ ನೀಡಿದ ನೆದರ್ಲೆಂಡ್ಸ್

ಈ ಬಾರಿಯ ವಿಶ್ವಕಪ್‌ನಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶಕ್ಕೆ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ. ಟೂರ್ನಿಯಲ್ಲಿ ಮೊದಲ ಮೂರು ಪಂದ್ಯಗಳಲ್ಲಿ ಅಬ್ಬರದ ಪ್ರದರ್ಶನ ನೀಡಿ ಬಲಿಷ್ಠ ತಂಡವಾಗಿ ಹೊರಹೊಮ್ಮಿದ್ದ ದಕ್ಷಿಣ ಆಫ್ರಿಕಾ ಟೂರ್ನಿಯಲ್ಲಿ ದುರ್ಬಲ ತಂಡ ಎನಿಸಿಕೊಂಡಿರುವ ನೆದರ್ಲೆಂಡ್ಸ್ ತಂಡದ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಟಾಸ್ ಗೆದ್ದು ಮೊದಲಿಗೆ ನೆದರ್ಲೆಂಡ್ಸ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ನೆದರ್ಲೆಂಡ್ಸ್ ತಂಡ ದಕ್ಷಿಣ ಆಫ್ರಿಕಾಗೆ ಸವಾಲಿನ ಗುರಿ ನಿಗದಿಪಡಿಸಿತು. ಮಳೆಯಿಂದಾಗಿ ಅಡ್ಡಿಯಾದ ಪಂದ್ಯದಲ್ಲಿ 43 ಓವರ್‌ಗಳಲ್ಲಿ 246 ರನ್‌ಗಳನ್ನು ಗಳಿಸುವ ಗುರಿ ಪಡೆದುಕೊಂಡಿತ್ತು. ಆದರೆ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನ ಹೊಂದಿರುವ ದಕ್ಷಿಣ ಆಫ್ರಿಕಾ ತಂಡ ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿದ್ದು 38 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.

World cup, match 15 SA vs Ned: Netherlands won against South Africa by 38 runs

ನೆದರ್ಲೆಂಡ್ಸ್ ತಂಡ ನೀಡಿದ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿಯೇ ಆಘಾತಕ್ಕೆ ಒಳಗಾಯಿತು. ಕ್ವಿಂಟನ್ ಡಿಕಾಕ್, ಟೆಂಬಾ ಬವುಮಾ, ಐಡೆನ್ ಮಾರ್ಕ್ರಮ್ ರಾಸ್ಸಿ =ವಾನ್‌ಡರ್ ಡುಸೆನ್ ಒಬ್ಬರಾದ ಬಳಿಕ ಒಬ್ಬರಂತೆ ಫೆವಿಲಿಯನ್‌ಗೆ ಸಾಗಿದರು. ಹೀಗಾಗಿ 44 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ದಕ್ಷಿಣ ಆಫ್ರಿಕಾ ಭಾರೀ ಸಂಕಷ್ಟಕ್ಕೆ ಸಿಲುಕಿತ್ತು. ಹೆನ್ರಿಕ್ ಕ್ಲಾಸೆನ್ ಹಾಗೂ ಡೇವಿಡ್ ಮಿಲ್ಲರ್ ಚೇತರಿಕೆಯ ಸೂಚನೆ ನೀಡುತ್ತಿದ್ದಂತೆಯೇ ಕ್ಲಾಸೆನ್ ಅವರನ್ನು ಔಟ್ ಮಾಡುವ ಮೂಲಕ ಈ ಜೋಡಿಯನ್ನು ಕೂಡ ಬೇರ್ಪಡಿಸುವಲ್ಲಿ ನೆದರ್ಲೆಂಡ್ಸ್ ತಂಡ ಯಶಸ್ಸವಿಯಾಯಿತು.

ಡೇಚಿಡ್ ಮಿಲ್ಲರ್ ಹಾಗೂ ಕೇಶವ್ ಮಹಾರಾಜ್ ಕೆಲ ಕಾಲ ಹೋರಾಟ ನಡೆಸಿದ ಪರಿಣಾಮವಾಗಿ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯದಲ್ಲಿ 42.5 ಓವರ್‌ಗಳಲ್ಲಿ 207 ರನ್‌ಗಳನ್ನು ಗಳಿಸಲು ಶಕ್ತವಾಗಿದೆ. ಈ ಮೂಲಕ 38 ರನ್‌ಗಳ ಅಂತರದಿಂದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್‌ಗೆ ಶರಣಾಗಿದೆ.

ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ನೆದರ್ಲೆಂಡ್ಸ್ ವಿರುದ್ಧ ಮೇಲುಗೈ ಸಾಧಿಸಿತು. ನೆದರ್ಲೆಂಡ್ಸ್ ತಂಡದ ಮೊತ್ತ 100 ರನ್‌ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ಸ್ಕಾಟ್ ಎಡ್ವರ್ಡ್ಸ್ ದಕ್ಷಿಣ ಆಫ್ರಿಕಾ ತಂಡದ ಲೆಕ್ಕಾಚಾರ ಬುಡಮೇಲು ಮಾಡಿದರು. ರೋಯ್ಲಫ್ ವಾನ್‌ಡರ್‌ ಮರ್ವ್ ಅವರೊಂದಿಗೆ ಸೇರಿಕೊಂಡು ಅದ್ಭುತ ಜೊತೆಯಾಟವೊಂದನ್ನು ನೀಡಿದರು. ಅಲ್ಲದೆ ಅಂತಿಮ ಹಂತದಲ್ಲಿ ಆರ್ಯನ್ ದತ್ ಕೂಡ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡದ ಮೊತ್ತವನ್ನು 245/8ಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಸ್ಕಾಟ್ ಎಡ್ವರ್ಡ್ಸ್ 69 ಎಸೆತಗಳಲ್ಲಿ 78 ರನ್‌ಗಳನ್ನು ಬಾರಿಸಿದರೆ ರೋಯ್ಲಫ್ ವಾನ್‌ಡರ್‌ ಮರ್ವ್ 19 ಎಸೆತಗಳಲ್ಲಿ 29 ರನ್ ಬಾರಿಸಿದ್ದಲ್ಲದೆ ದೊಡ್ಡ ನಾಯಕನ ಜೊತೆಗೆ ಮಹತ್ವದ ಜೊತೆಯಾಟದಲ್ಲಿ ಭಾಗಿಯಾದರು. ಇನ್ನು ಆರ್ಯನ್ ದತ್ ಅಂತಿಮ ಹಂತದಲ್ಲಿ ಕೇವಲ 9 ಎಸೆತಗಳಲ್ಲಿ 23 ರನ್‌ಗಳನ್ನು ಬಾರಿಸಿ ಅಬ್ಬರಿಸಿದರು. ಇನ್ನು ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಲುಂಗಿ ಎನ್‌ಗಿಡಿ, ಮಾರ್ಕೋ ಜಾನ್ಸನ್, ಕಗಿಸೋ ರಬಡಾ ತಲಾ ಎರಡು ವಿಕೆಟ್ ಕಬಳಿಸಿದರಾದರೂ ಎನ್‌ಗಿಡಿ ಹಾಗೂ ರಬಡಾ ದುಬಾರಿಯಾದರು.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡಸ್ಸೆನ್, ಲಿಜಾದ್ ವಿಲಿಯಮ್ಸ್.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

Story first published: Tuesday, October 17, 2023, 23:02 [IST]
Other articles published on Oct 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+