ವಿಶ್ವಕಪ್ 2023: ಮಳೆಯ ಮಧ್ಯೆಯೂ ನೆದರ್ಲೆಂಡ್ಸ್ ಮಿಂಚಿನ ಆಟ: ದಕ್ಷಿಣ ಆಪ್ರಿಕಾಗೆ ಸವಾಲಿನ ಗುರಿ
ಈ ಬಾರಿಯ ವಿಶ್ವಕಪ್ ಟೂರ್ನಿಯ 15ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಧರ್ಮಶಾಲಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಮಳೆಯಿಂದಾಗಿ 43 ಓವರ್‌ಗಳಿಗೆ ಸೀಮಿತವಾಗಿರುವ ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ದಕ್ಷಿಣ ಆಫ್ರಿಕಾಗೆ ಗೆಲ್ಲಲು 246 ರನ್‌ಗಳ ಸವಾಲಿನ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ನೆದರ್ಲೆಂಡ್ಸ್ ವಿರುದ್ಧ ಮೇಲುಗೈ ಸಾಧಿಸಿತು. ನೆದರ್ಲೆಂಡ್ಸ್ ತಂಡದ ಮೊತ್ತ 100 ರನ್‌ಗಳಿಸುವಷ್ಟರಲ್ಲಿ ಪ್ರಮುಖ ಐದು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕ ಸ್ಕಾಟ್ ಎಡ್ವರ್ಡ್ಸ್ ದಕ್ಷಿಣ ಆಫ್ರಿಕಾ ತಂಡದ ಲೆಕ್ಕಾಚಾರ ಬುಡಮೇಲು ಮಾಡಿದರು. ರೋಯ್ಲಫ್ ವಾನ್‌ಡರ್ ಮರ್ವ್ ಅವರೊಂದಿಗೆ ಸೇರಿಕೊಂಡು ಅದ್ಭುತ ಜೊತೆಯಾಟವೊಂದನ್ನು ನೀಡಿದರು. ಅಲ್ಲದೆ ಅಂತಿಮ ಹಂತದಲ್ಲಿ ಆರ್ಯನ್ ದತ್ ಕೂಡ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ನೀಡುವ ಮೂಲಕ ತಂಡದ ಮೊತ್ತವನ್ನು 245/8ಕ್ಕೆ ಏರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಸ್ಕಾಟ್ ಎಡ್ವರ್ಡ್ಸ್ 69 ಎಸೆತಗಳಲ್ಲಿ 78 ರನ್‌ಗಳನ್ನು ಬಾರಿಸಿದರೆ ರೋಯ್ಲಫ್ ವಾನ್‌ಡರ್ ಮರ್ವ್ 19 ಎಸೆತಗಳಲ್ಲಿ 29 ರನ್ ಬಾರಿಸಿದ್ದಲ್ಲದೆ ದೊಡ್ಡ ನಾಯಕನ ಜೊತೆಗೆ ಮಹತ್ವದ ಜೊತೆಯಾಟದಲ್ಲಿ ಭಾಗಿಯಾದರು. ಇನ್ನು ಆರ್ಯನ್ ದತ್ ಅಂತಿಮ ಹಂತದಲ್ಲಿ ಕೇವಲ 9 ಎಸೆತಗಳಲ್ಲಿ 23 ರನ್‌ಗಳನ್ನು ಬಾರಿಸಿ ಅಬ್ಬರಿಸಿದರು. ಇನ್ನು ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಲುಂಗಿ ಎನ್‌ಗಿಡಿ, ಮಾರ್ಕೋ ಜಾನ್ಸನ್, ಕಗಿಸೋ ರಬಡಾ ತಲಾ ಎರಡು ವಿಕೆಟ್ ಕಬಳಿಸಿದರಾದರೂ ಎನ್‌ಗಿಡಿ ಹಾಗೂ ರಬಡಾ ದುಬಾರಿಯಾದರು.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡಸ್ಸೆನ್, ಲಿಜಾದ್ ವಿಲಿಯಮ್ಸ್.
ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications