For Quick Alerts
ALLOW NOTIFICATIONS  
For Daily Alerts
 

ಬಲಿಷ್ಠ ದ. ಆಫ್ರಿಕಾಗೆ ನೆದರ್ಲೆಂಡ್ಸ್ ಸವಾಲು: ಪಂದ್ಯದ ಸಮಯ, ಸಂಭಾವ್ಯ XI ಹಾಗೂ ಪಿಚ್ ರಿಪೋರ್ಟ್

ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿಯೂ ಭರ್ಜರಿಯಾಗಿ ಗೆಲುವು ಸಾಧಿಸಿ ಅದ್ಭುತ ಲಯದಲ್ಲಿ ಕಾಣಿಸುತ್ತಿರುವ ದಕ್ಷಿಣ ಆಪ್ರಿಕಾ ತಂಡ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ನೆದರ್ಲೆಂಡ್ಸ್ ವಿರುದ್ಧ ದ. ಆಫ್ರಿಕಾ ಪಡೆ ಮೂರನೇ ಪಂದ್ಯವನ್ನಾಡಲಿದ್ದು ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

ದಕ್ಷಿಣ ಆಫ್ರಿಕಾ ತಂಡ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 102 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 134 ರನ್‌ಗಳ ಅಂತರದ ಬೃಹತ್ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ನೆದರ್ಲೆಂಡ್ಸ್ ತಂಡ ಮೊದಲ ಎರಡು ಪಂದ್ಯಗಳಲ್ಲಿಯೂ ಹೀನಾಯ ಸೋಲು ಕಂಡಿದ್ದು ದಕ್ಷಿಣ ಆಫ್ರಿಕಾಗೆ ಶಾಕ್ ನೀಡುವ ಲೆಕ್ಕಾಚಾರದಲ್ಲಿದೆ. ಎಲ್ಲಾ ವಿಭಾಗದಲ್ಲಿಯೂ ಅದ್ಭುತ ಲಯದಲ್ಲಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ ನೆದರ್ಲೆಂಡ್ಸ್ ತಂಡ ಯಾವ ರೀತಿಯ ಹೋರಾಟ ನೀಡಲಿದೆ ಎನ್ನುವುದಷ್ಟೇ ಈಗ ಕುತೂಹಲ ಕೆರಳಿಸಿದೆ.

World cup, match 15th: South Africa vs Netherlands; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಇನ್ನು ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ಸ್ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಪಿಚ್ ರಿಪೋರ್ಟ್

ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿನ ಬ್ಯಾಟರ್‌ಗಳಿಗೆ ಹೆಚ್ಚಿನ ನೆರವು ನೀಡುವ ಗುಣ ಹೊಂದಿದೆ. ಆದರೆ ವೇಗಿಗಳಿಗೆ ಇಲ್ಲಿ ಸೀಮ್ ಮತ್ತು ಸ್ವಿಂಗ್ ಚಲನೆಯಿಂದಾಗಿ ನೆರವು ದೊರೆಯುವ ಸಾಧ್ಯತೆಯೂ ಇದೆ. ಹಾಗಾಗಿ ಆರಂಭದಲ್ಲಿ ಬ್ಯಾಟರ್‌ಗಳಿಗೆ ನೆಲೆಯೂರುವುದು ಕಠಿಣವೆನಿಸಬಹುದು. ಆದರೆ ಕ್ರೀಸ್‌ನಲ್ಲಿ ನೆಲೆಯೂರಲು ಸಾಧ್ಯವಾದರೆ ಬಳಿಕ ರನ್‌ ಸರಾಗವಾಗಿ ಹರಿಸುವ ಅವಕಾಶವಿದೆ. ಇನ್ನು ಇಲ್ಲಿ ಟಾಸ್ ಗೆದ್ದ ತಂಡಗಳು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಲಿದೆ. ಇಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 266 ರನ್.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡಸ್ಸೆನ್, ಲಿಜಾದ್ ವಿಲಿಯಮ್ಸ್.

ನೆದರ್ಲ್ಯಾಂಡ್ಸ್: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡ್, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಾಕಿಬ್ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ದಕ್ಷಿಣ ಆಫ್ರಿಕಾ ಸಂಭಾವ್ಯ ಬಳಗ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ

ನೆದರ್ಲೆಂಡ್ಸ್ XI: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ವೆಸ್ಲಿ ಬ್ಯಾರೆಸಿ, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗೆಲ್‌ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ರಯಾನ್ ಕ್ಲೈನ್, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

Story first published: Monday, October 16, 2023, 21:07 [IST]
Other articles published on Oct 16, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+