NZ vs AFG: ಅಫ್ಘಾನಿಸ್ತಾನ ತಂಡಕ್ಕೆ ಗೆಲ್ಲಲು 289 ರನ್‌ಗಳ ಗುರಿ ನೀಡಿದ ನ್ಯೂಜಿಲೆಂಡ್
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್ ತಂಡ ಆರಂಭಿಕ ಹಿನ್ನಡೆಯ ಹೊರತಾಗಿಯೂ ಅದ್ಭುತ ಪ್ರದರ್ಶನ ನೀಡಿದ್ದು ಉತ್ತಮ ಮೊತ್ತದ ಗುರಿ ನಿಗದಿಪಡಿಸಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿ 288 ರನ್‌ಗಳನ್ನು ಗಳಿಸಲು ಯಶಸ್ವಿಯಾಗಿದೆ. ಈ ಮೊತ್ತವನ್ನು ಬೆನ್ನಟ್ಟುವಲ್ಲಿ ಬಾಂಗ್ಲಾದೇಶ ತಂಡ ಎಷ್ಟರಮಟ್ಟಿಗೆ ಯಶಸ್ವಿಯಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡ ನ್ಯೂಜಿಲೆಂಡ್ ತಂಡ ಡೆವೋನ್ ಕಾನ್ವೆ ಅವರನ್ನು ಅಲ್ಪ ಮೊತ್ತಕ್ಕೆ ಕಳೆದುಕೊಂಡಿತು. ಆದರೆ ಎರಡನೇ ವಿಕೆಟ್‌ಗೆ ವಿಲ್ ಯಂಗ್ ಹಾಗೂ ರಚಿನ್ ರವೀಂದ್ರ ಅರ್ಧ ಶತಕದ ಜೊತೆಯಾಟವನ್ನಾಡುವ ಮೂಲಕ ಚೇತರಿಕೆ ನಿಡಿದರು. ಆದರೆ ತಂಡದ ಮೊತ್ತ 109 ರನ್‌ಗಳಾಗಿದ್ದಾಗ ರಚಿನ್ ರವೀಂದ್ರ ವಿಕೆಟ್ ಕಳೆದುಕೊಳ್ಳುವ ಜೊತೆಗೆ ಕಿವೀಸ್ ತಮಡ ಹಠಾತ್ ಕುಸಿತಕ್ಕೆ ಒಳಗಾಯಿತು.

ಅಜ್ಮತುಲ್ಲಾ ಅವರ ಒಂದೇ ಓವರ್‌ನಲ್ಲಿ ರಚಿನ್ ರವೀಂದ್ರ ವಿಕೆಟ್ ಪಡೆದ ಬಳಿಕ ವಿಲ್ ಯಂಗ್ ಕೂಡ ವಿಕೆಟ್ ಕಳೆದುಕೊಂಡರು. ನಂತರ ಡ್ಯಾರೆನ್ ಮಿಚೆಲ್ ಕೂಡ ವಿಕೆಟ್ ಕಳೆದುಕೊಂಡಾಗ 110 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ನ್ಯೂಜಿಲೆಂಡ್ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಿಂದ ಕಿವೀಸ್ ಪಡೆಯನ್ನುಮೇಲಕ್ಕೆತ್ತಿದ್ದು ನಾಯಕ ಟಾಮ್ ಲ್ಯಾಥಮ್ ಹಾಗೂ ಗ್ಲೆನ್ ಫಿಲಿಪ್ಸ್.
ಲ್ಯಾಥಮ್ ಹಾಗೂ ಫಿಲಿಪ್ಸ್ ಜೋಡಿ 144 ರನ್‌ಗಳ ಅಮೋಘ ಜೊತೆಯಾಟವನ್ನು ಆಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದ್ದಲ್ಲದೆ ಉತ್ತಮ ಮೊತ್ತದತ್ತ ಮುನ್ನಡೆಸಿದರು. 254 ರನ್‌ಗಳಿಸಿದ್ದಾಗ 71 ರನ್‌ಗಳಿಸಿದ ಗ್ಲೆನ್ ಫಿಲಿಪ್ಸ್ ನವೀನ್ ಉಲ್ ಹಕ್‌ಗೆ ವಿಕೆಟ್ ಒಪ್ಪಿಸುವ ಮೂಲಕ ಈ ಜೋಡಿ ಬೇರ್ಪಟ್ಟಿತು. ನಂತರ ಅದೇ ಓವರ್‌ನಲ್ಲಿ ಟಾಮ್ ಲಾಥಮ್ ಕೂಡ ಬೌಲ್ಡ್ ಆಗಿ ವಿಕೆಟ್ ಕಳೆದುಕೊಂಡರು. ನಂತರ ಮಾರ್ಕ್ ಚಾಪ್ಮನ್ ಹಾಗೂ ಸ್ಯಾಂಟ್ನರ್ ತಂಡದ ಮೊತ್ತವನ್ನು 288 ರನ್‌ಗಳಿಗ ತಲುಪಿಸುವಲ್ಲಿ ಯಶಸ್ವಿಯಾದರು.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ನಜೀಬುಲ್ಲಾ ಜದ್ರಾನ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications