ನ್ಯೂಜಿಲೆಂಡ್ vs ಅಫ್ಘಾನಿಸ್ತಾನ: ಕಿವೀಸ್ ಪಡೆಗೆ ಶಾಕ್ ನೀಡುತ್ತಾ ಅಫ್ಘಾನಿಸ್ತಾನ: LIVE ಸ್ಕೋರ್
ವಿಶ್ವಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗುತ್ತಿದ್ದು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದೆ.
ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆಯಾಹಿದ್ದು ನಾಯಕ ಕೇನ್ ವಿಲಿಯಮ್ಸನ್ ಗಾಯದಿಂದಾಗಿ ಹೊರಗುಳಿದಿದ್ದು ಅವರ ಬದಲಿಗೆ ವಿಲ್ ಯಂಗ್ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇನ್ನು ನ್ಯೂಜಿಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿಕೊಂಡು ಬರುತ್ತಿದೆ. ಮೊದಲ ಮೂರು ಪಂದ್ಯಗಳಲ್ಲಿಯೂ ಭರ್ಜರಿ ಪ್ರದರ್ಶನ ನೀಡಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡಕ್ಕೆ ಅಫ್ಘಾನಿಸ್ತಾನ ತಂಡ ಯಾವ ರೀತಿಯ ಸವಾಲು ನೀಡಲಿದೆ ಎನ್ನುವುದು ಈಗಿರುವ ಕುತೂಹಲ. ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ ಅಪ್ಘಾನಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಸಾಧಿಸಿದ್ದು ಪ್ರಸ್ತುತ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಈ ಎರಡು ತಂಡಗಳ ಕಾದಾಟ ಈಗ ಸಾಕಷ್ಟು ಕುತೂಹಲ ಕೆರಳಿಸಿರುವುದು ಸುಳ್ಳಲ್ಲ.
ಚೆನ್ನೈನ ಚೆಪಾಕ್ ಕ್ರೀಡಾಂಗಣ ನಿಧಾನಗತಿಯ ಪಿಚ್ ಆಗಿದ್ದು ಸ್ಪಿನ್ನರ್‌ಗಳಿಗೆ ಇಲ್ಲಿ ಹೆಚ್ಚಿನ ನೆರವು ನೀಡುವ ನಿರೀಕ್ಷೆಯಿದೆ. ಕೆಂಪು ಮಣ್ಣಿನ ಪಿಚ್ ಆಗಿರುವ ಕಾರಣ ಸ್ಪಿನ್ನರ್‌ಗಳು ಇಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 232 ರನ್‌ಗಳಾಗಿದ್ದು 300ರ ಸನಿಹದಲ್ಲಿ ರನ್‌ಗಳಿಸಲು ಸಾಧ್ಯವಾದರೆ ಮೊದಲು ಬ್ಯಾಟಿಂಗ್ ನಡೆಸಿದ ತಂಡಕ್ಕೆ ಮೇಲುಗೈ ಸಾಧ್ಯತೆ ಹೆಚ್ಚಿದೆ.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಬೆಂಚ್: ಇಶ್ ಸೋಧಿ, ಜೇಮ್ಸ್ ನೀಶಮ್, ಟಿಮ್ ಸೌಥಿ
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ನಜೀಬುಲ್ಲಾ ಜದ್ರಾನ್, ಅಬ್ದುಲ್ ರೆಹಮಾನ್, ರಿಯಾಜ್ ಹಸನ್, ನೂರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications