World cup 2023: ಕಿವೀಸ್ ಕಿವಿ ಹಿಂಡುತ್ತಾರಾ ಅಫ್ಘನ್ ಪಡೆ: ಪಂದ್ಯದ ಸಮಯ ಹಾಗೂ ಇತರ ಮಾಹಿತಿ
ವಿಶ್ವಕಪ್ ಟೂರ್ನಿಯ 16ನೇ ಪಂದ್ಯ ಬುಧವಾರ ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳ ವಿರುದ್ಧ ನಡೆಯಲಿದ್ದು ಚೆನ್ನೈನ ಚೆಪಾಕ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಅಫ್ಘಾನಿಸ್ತಾನ ತಂಡ ಕಳೆದ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ಆಘಾತಕಾರಿ ಸೋಲುಣಿಸಿದ್ದು ಅದೇ ಫಲಿತಾಂಶವನ್ನು ಮತ್ತೆ ಪುನರಾವರ್ತಿಸುವ ಆತ್ಮವಿಶ್ವಾಸದಲ್ಲಿದೆ. ಚೆನ್ನೈನ ಸ್ಪಿನ್ ಸ್ನೇಹಿ ಪಿಚ್ ಅಫ್ಘನ್ ಪಡೆಗೆ ಮತ್ತಷ್ಟು ನೆರವು ನೀಡುವ ನಿರೀಕ್ಷೆಯೂ ಇದೆ ಎನ್ನುವುದು ಗಮನಾರ್ಹ ಅಂಶ.
ಇನ್ನು ನ್ಯೂಜಿಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿಕೊಂಡು ಬರುತ್ತಿದೆ. ಮೊದಲ ಮೂರು ಪಂದ್ಯಗಳಲ್ಲಿಯೂ ಭರ್ಜರಿ ಪ್ರದರ್ಶನ ನೀಡಿ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ತಂಡಕ್ಕೆ ಅಫ್ಘಾನಿಸ್ತಾನ ತಂಡ ಯಾವ ರೀತಿಯ ಸವಾಲು ನೀಡಲಿದೆ ಎನ್ನುವುದು ಈಗಿರುವ ಕುತೂಹಲ. ನ್ಯೂಜಿಲೆಂಡ್ ತಂಡ ಮೂರು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ ಅಪ್ಘಾನಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಸಾಧಿಸಿದ್ದು ಪ್ರಸ್ತುತ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಈ ಎರಡು ತಂಡಗಳ ಕಾದಾಟ ಈಗ ಸಾಕಷ್ಟು ಕುತೂಹಲ ಕೆರಳಿಸಿರುವುದು ಸುಳ್ಳಲ್ಲ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ನ್ಯೂಜಿಲೆಂಡ್ ಹಾಗೂ ಅಫ್ಘಾನಿಸ್ತಾನ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಪಿಚ್ ರಿಪೋರ್ಟ್
ಚೆನ್ನೈನ ಚೆಪಾಕ್ ಕ್ರೀಡಾಂಗಣ ನಿಧಾನಗತಿಯ ಪಿಚ್ ಆಗಿದ್ದು ಸ್ಪಿನ್ನರ್‌ಗಳಿಗೆ ಇಲ್ಲಿ ಹೆಚ್ಚಿನ ನೆರವು ನೀಡುವ ನಿರೀಕ್ಷೆಯಿದೆ. ಕೆಂಪು ಮಣ್ಣಿನ ಪಿಚ್ ಆಗಿರುವ ಕಾರಣ ಸ್ಪಿನ್ನರ್‌ಗಳು ಇಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 232 ರನ್‌ಗಳಾಗಿದ್ದು 300ರ ಸನಿಹದಲ್ಲಿ ರನ್‌ಗಳಿಸಲು ಸಾಧ್ಯವಾದರೆ ಮೊದಲು ಬ್ಯಾಟಿಂಗ್ ನಡೆಸಿದ ತಂಡಕ್ಕೆ ಮೇಲುಗೈ ಸಾಧ್ಯತೆ ಹೆಚ್ಚಿದೆ.
ಸಂಭಾವ್ಯ ಆಡುವ ಬಳಗ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications