For Quick Alerts
ALLOW NOTIFICATIONS  
For Daily Alerts
 

ಭಾರತ vs ಬಾಂಗ್ಲಾದೇಶ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿಕೊಂಡು ಮುನ್ನುಗ್ಗುತ್ತಿರುವ ಟೀಮ್ ಇಂಡಿಯಾ ಮತ್ತೊಂದು ಪಂದ್ಯಕ್ಕೆ ಸಿದ್ಧವಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಅಮೋಘ ಜಯ ಸಾಧಿಸಿರುವ ಭಾರತ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲು ಸಜ್ಜಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು ತೀವ್ರ ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಕೂಡ ಅದ್ಭುತ ಲಯದಲ್ಲಿದ್ದು ಟೂರ್ನಿಯಲ್ಲಿ ಆತ್ಮವಿಶ್ವಾಸದಿಂದ ಮುನ್ನುಗ್ಗಲು ಕಾರಣವಾಗಿದೆ. ಇನ್ನು ಟೂರ್ನಿಯಲ್ಲಿ ಈಗಾಗಲೇ ಎರಡು ಅಚ್ಚರಿಯ ಫಲಿತಾಂಶಗಳು ಕುಡ ಬಂದಿದ್ದು ಈ ಪಂದ್ಯವನ್ನು ಭಾರತ ಲಘುವಾಗಿ ಪರಿಗಣಿಸುವಂತಿಲ್ಲ ಎನ್ನುವ ಎಚ್ಚರಿಕೆ ಪಡೆದುಕೊಂಡಿದೆ. ಹೀಗಾಗಿ ಗುರುವಾರದ ಪಂದ್ಯ ತೀವ್ರ ಕುತೂಹಲ ಮೂಡಿಸಿರುವುದು ಸುಳ್ಳಲ್ಲ.

World cup, match 16th: Team India vs Bangladesh; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಸಂಪೂರ್ಣ ಸ್ಕ್ವಾಡ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್

ಬಾಂಗ್ಲಾದೇಶ ತಂಡ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತನ್ಜಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ಉಪನಾಯಕ), ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್

ಪಿಚ್ ರಿಪೋರ್ಟ್ ಹೇಳೋದೇನು?

ಪುಣೆಯ ಎಂಸಿಎ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಗಿ ಪಿಚ್ ಎನಿಸಿಕೊಂಡಿದೆ. ಪಂದ್ಯದುದ್ದಕ್ಕೂ ಬ್ಯಾಟರ್‌ಗಳು ಬೌಲರ್‌ಗಳ ಮೇಲೆ ಮೇಲುಗೈ ಸಾಧಿಸುವ ನಿರೀಕ್ಷಿಯಿದ್ದು ಮೈದಾನದ ಎಲ್ಲಾ ಭಾಗಕ್ಕೂ ಚೆಂಡನ್ನು ಅಟ್ಟುವ ಅವಕಾಶವಿದೆ. ಹಾಗಾಗಿ ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಇಲ್ಲಿ ಏಳು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು ಇವುಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 307 ರನ್ ಆಗಿದೆ. ಅಲ್ಲದೆ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಇಲ್ಲಿ 4 ಬಾರಿ ಗೆದ್ದುಕೊಂಡಿರುವುದು ಮತ್ತೊಂದು ಗಮನಾರ್ಹ ಅಂಶ.

ಸಂಭಾವ್ಯ ಆಡುವ ಬಳಗ:

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಆರ್ ಅಶ್ವಿನ್ , ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಬಾಂಗ್ಲಾದೇಶ: ತಂಝಿದ್ ಹಸನ್, ಲಿಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

Story first published: Wednesday, October 18, 2023, 15:40 [IST]
Other articles published on Oct 18, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+