Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಬಾಂಗ್ಲಾದೇಶ: ರೋಹಿತ್ ಪಡೆಗೆ ಬಾಂಗ್ಲಾ ಸವಾಲು: Live ಸ್ಕೋರ್

ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಇಂದು ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಪುಣೆಯಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಆರಂಭದಲ್ಲಿ ಬೌಲಿಂಗ್ ದಾಳಿ ನಡೆಸಲಿದೆ.

ಪುಣೆಯ ಎಂಸಿಎ ಕ್ರೀಡಾಂಗಣ ಬ್ಯಾಟಿಂಗ್ ಸ್ನೇಗಿ ಪಿಚ್ ಎನಿಸಿಕೊಂಡಿದೆ. ಪಂದ್ಯದುದ್ದಕ್ಕೂ ಬ್ಯಾಟರ್‌ಗಳು ಬೌಲರ್‌ಗಳ ಮೇಲೆ ಮೇಲುಗೈ ಸಾಧಿಸುವ ನಿರೀಕ್ಷಿಯಿದ್ದು ಮೈದಾನದ ಎಲ್ಲಾ ಭಾಗಕ್ಕೂ ಚೆಂಡನ್ನು ಅಟ್ಟುವ ಅವಕಾಶವಿದೆ. ಹಾಗಾಗಿ ಹೈಸ್ಕೋರಿಂಗ್ ಪಂದ್ಯವಾಗುವುದರಲ್ಲಿ ಅನುಮಾನವಿಲ್ಲ. ಇಲ್ಲಿ ಏಳು ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನಾಡಿದ್ದು ಇವುಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 307 ರನ್ ಆಗಿದೆ. ಅಲ್ಲದೆ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಇಲ್ಲಿ 4 ಬಾರಿ ಗೆದ್ದುಕೊಂಡಿರುವುದು ಮತ್ತೊಂದು ಗಮನಾರ್ಹ ಅಂಶ.

World cup, match 17 India vs Bangladesh, Toss report, playing XI and Live score

ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್

ಬಾಂಗ್ಲಾದೇಶ ಆಡುವ ಬಳಗ: ಲಿಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದಯೋಯ್, ಮಹಮ್ಮದುಲ್ಲಾ, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರಹಮಾನ್, ನಸುಮ್ ಅಹಮದ್
ಬೆಂಚ್: ಹಸನ್ ಮಹಮೂದ್, ತಂಜಿಮ್ ಹಸನ್ ಸಾಕಿಬ್, ಶಾಕಿಬ್ ಅಲ್ ಹಸನ್, ಮಹೇದಿ ಹಸನ್

1
1-2023

Story first published: Thursday, October 19, 2023, 13:35 [IST]
Other articles published on Oct 19, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+