For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ vs ಪಾಕಿಸ್ತಾನ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ವಿಶ್ವಕಪ್‌ನ ಪ್ರಪ್ರಥಮ ಸೆಣೆಸಾಟ: Live ಸ್ಕೋರ್

ವಿಶ್ವಕಪ್ ಟೂರ್ನಿಯ 18ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ಈಡಾಂಗಣದಲ್ಲಿ ಈ ಬಾರಿಯ ವಿಶ್ವಕಪ್‌ನ ಮೊದಲ ಪಂದ್ಯ ಇದಾಗಿದ್ದು ಎರಡು ಬಲಿಷ್ಠ ತಂಡಗಳ ನಡುವಿನ ಕಾದಾಟ ನಡೆಯಲಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಾಗಿ ಆಸ್ಟ್ರೇಲಿಯಾ ತಮಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಆಲ್‌ರೌಂಡರ್ ಶದಬ್ ಖಾನ್ ಈ ಪಂದ್ಯದಲ್ಲಿ ಆಡುವ ಬಳಗದಿಂದ ಸ್ಥಾನವನ್ನು ಕಳೆದುಕೊಂಡಿದ್ದು ಅವರ ಬದಲಿಗೆ ಉಸಮ ಮಿರ್‌ಗೆ ಅವಕಾಶ ದೊರೆತಿದೆ. ಇನ್ನು ಆಸ್ಟ್ರೇಲಿಯಾ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದೆ.

World cup, match 18 Australia vs Pakistan, Toss report, playing XI and Live score

ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಆಡಿವ ಮೂರು ಪಂದ್ಯಗಳ ಪೈಕಿ ಒಂದು ಗೆಲುವು ಮಾತ್ರವೇ ಸಾಧಿಸಿದ್ದು ಭಾರೀ ಹಿನ್ನಡೆಯಲ್ಲಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ಗೆಲುವು ಸಾಧಿಸಿ ಉಳಿದ ತಂಡಗಳ ಜೊತೆಗೆ ಪೈಪೋಟಿ ನೀಡುವ ನಿರೀಕ್ಷೆಯಲ್ಲಿದೆ. ಇತ್ತ ಪಾಕಿಸ್ತಾನ ತಂಡ ಮೂರು ಪಂದ್ಯಗಳ ಪೈಕಿ ಎರಡು ಗೆಲುವು ಹಾಗೂ ಒಂದು ಸೋಲು ಅನುಭವಿಸಿದ್ದು ಆಸ್ಟ್ರೇಲಿಯಾ ವಿರುದ್ಧ ಮೇಲುಗೈ ಸಾಧಿಸುವ ಲೆಕ್ಕಾಚಾರದಲ್ಲಿದೆ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಶಾನ್ ಅಬಾಟ್, ಟ್ರಾವಿಸ್ ಹೆಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಹಾರಿಸ್ ರೌಫ್
ಬೆಂಚ್: ಅಘಾ ಸಲ್ಮಾನ್, ಫಖರ್ ಜಮಾನ್, ಮೊಹಮ್ಮದ್ ವಾಸಿಂ ಜೂನಿಯರ್, ಶಾದಾಬ್ ಖಾನ್

Story first published: Friday, October 20, 2023, 13:53 [IST]
Other articles published on Oct 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+