ನೆದರ್ಲೆಂಡ್ಸ್ vs ಶ್ರೀಲಂಕಾ: ಮೊದಲ ಗೆಲುವಿನ ಹುಡುಕಾಟದಲ್ಲಿ ಲಂಕಾ ಪಡೆ: Live ಸ್ಕೋರ್
ಈ ಬಾರಿಯ ವಿಶ್ವಕಪ್ ಟೂರ್ನಿಯ 19ನೇ ಪಂದ್ಯ ಇಂದು ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದ್ದು ಶ್ರೀಲಂಕಾ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ನೆದರ್ಲೆಂಡ್ಸ್ ತಂಡ ಟಾಸ್ ಗೆದ್ದುಕೊಂಡು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಘಿ ಶ್ರೀಲಂಕಾ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಕಳೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ನೆದರ್ಲೆಂಡ್ಸ್ ತಂಡ ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದೆ. ಆದರೆ ಶ್ರೀಲಂಕಾಗೆ ಸತತ ಸೋಲಿನ ಜೊತೆಗೆ ಗಾಯದ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು ಈ ಪಂದ್ಯದಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ದುನಿತ್ ವೆಲ್ಲಲಾಗೆ ಮತ್ತು ಲಹಿರು ಕುಮಾರ ಆಡುವ ಬಳಗದಿಂದ ಹೊರಬಿದ್ದಿದ್ದು ಲೆಗ್‌ಸ್ಪಿನ್ನರ್ ದುಶನ್ ಹೇಮಂತ ಮತ್ತು ಅಸಿತಾ ಫೆರ್ನಾಂಡೋ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ಇನ್ನು ಶ್ರೀಲಂಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಅತ್ಯಂತ ಕಳಪೆ ಆರಂಭವನ್ನು ಪಡೆದುಕೊಂಡಿದ್ದು ಮೊದಲ ಮೂರು ಪಂದ್ಯಗಳ ಪೈಕಿ ಮೂರರಲ್ಲಿಯೂ ಸೋಲು ಅನುಭವಿಸಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ ಲಂಕಾ ಪಡೆ. ಹೀಗಾಗಿ ಈ ವಿಶ್ವಕಪ್ ಟೂರ್ನಿಯಲ್ಲಿ ಲಂಕಾ ತಂಡಕ್ಕೆ ಕಮ್‌ಬ್ಯಾಕ್ ಮಾಡಲು ಇದು ಅತ್ಯುತ್ತಮ ಅವಕಾಶವೆನಿಸಿಕೊಂಡಿದೆ. ಮತ್ತೊಂದೆಡೆ ನೆದರ್ಲೆಂಡ್ಸ್ ತಂಡ ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದರೂ ತಮ್ಮ ಮೂರನೇ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಸಾಧಿಸಿದ ಗೆಲುವು ವಿಶೇಷ ಆತ್ಮವಿಶ್ವಾಸ ತುಂಬಿದೆ. ಶಿಸ್ತಿನ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದ ನೆದರ್ಲೆಂಡ್ಸ್ ತಂಡ ಮತ್ತೊಮ್ಮೆ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.
ಏಕಾನ ಕ್ರೀಡಾಂಗಣದ ಪಿಚ್ ಐಪಿಎಲ್ ಸಂದರ್ಭದಲ್ಲಿ ನಿಧಾನಗತಿಯ ಪಿಚ್ ಆಗಿದ್ದು ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ದೊರೆಯುತ್ತಿತ್ತು. ಆದರೆ ವಿಶ್ವಕಪ್‌ಗಾಗಿ ಸಿದ್ದಪಡಿಸಲಾದ ನೂತನ ಪಿಚ್ ತೀವ್ರ ಪೈಪೋಟಿಯ ಪಿಚ್ ಆಗಿದೆ. ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯದ ಸ್ಪಿನ್ನರ್‌ಗಳು ತಮ್ಮ ಪ್ರಾಬಲ್ಯ ಮೆರೆದಿದ್ದರಿಂದ ಶ್ರೀಲಂಕಾ ಇಲ್ಲಿ ಪರದಾಟ ನಡೆಸುತ್ತಾ ಕೇವಲ 209 ರನ್ ಗಳಿಸಲು ಮಾತ್ರವೇ ಸಾಧ್ಯವಾಯಿತಿ. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನಿಡಿದ್ದು 14 ಓವರ್‌ಗಳು ಬಾಕಿ ಇರುವಂತೆಯೇ ಗುರಿ ತಲುಪಿದೆ.
ನೆದರ್ಲೆಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ಸಿ & ಡಬ್ಲ್ಯೂಕೆ), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್
ಬೆಂಚ್: ವೆಸ್ಲಿ ಬ್ಯಾರೆಸಿ, ರಿಯಾನ್ ಕ್ಲೈನ್, ಶರೀಜ್ ಅಹ್ಮದ್, ಸಾಕಿಬ್ ಜುಲ್ಫಿಕರ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶನ್ ಹೇಮಂತ, ಚಾಮಿಕಾ ಕರುಣಾರತ್ನ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಮತೀಶ ಪತಿರಣ, ದಿಮುತ್ ಕರುಣಾರತ್ನ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications