Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಕಡೆಗೂ ವಿಶ್ವಕಪ್ 2023ರಲ್ಲಿ ಮೊದಲ ಗೆಲುವು ಸಾಧಿಸಿದ ಶ್ರೀಲಂಕಾ!!

ಶ್ರೀಲಂಕಾ ತಂಡ 2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ. ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಲಂಕಾ ಪಡೆ ತೀವ್ರ ಪೈಪೊಟಿಯನ್ನು ಎದುರಿಸಿದರೂ 5 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಖಾತೆ ತೆರೆದಿದೆ. 263 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ 10 ಎಸೆತಗಳು ಬಾಕಿಯಿರುವಂತೆ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.

ಪಾತುಮ್ ನಿಸ್ಸಾಂಕ 54 ರನ್‌ಗಳ ಕೊಡುಗೆ ನೀಡುವ ಮೂಲಕ ಲಂಕಾ ಹೋರಾಟಕ್ಕೆ ಬಲ ನೀಡಿದರು. ಇನ್ನು ಸದೀರ ಸಮರವಿಕ್ರಮ ಕೊನೆಯವರೆಗೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಅಜೇಯ 91 ರನ್‌ಗಳ ಕೊಡುಗೆ ನೀಡಿದ್ದು ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದೆ. ಅವರಿಗೆ ಚರಿತ ಅಸಲಂಕ, ಹಾಗೂ ಧನಂಜಯ ಡಿಸಿಲ್ವ ಉತ್ತಮ ಸಾಥ್ ನೀಡಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶ್ರೀಲಂಕಾ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಗೆಲುವು ಸಾಧಿಸಿದೆ.

World cup, match 19 Sri Lanka won by 5 wickets against Netherlands, Highlights

ಇನ್ನು ಇದಕ್ಕೂ ಮುನ್ನ ಬ್ಯಾಟಿಂಗ್ ನಡೆಸಿದ ನೆದರ್ಲೆಂಡ್ಸ್ ತಂಡ ಕಳಪೆ ಆರಂಭವನ್ನು ಪಡೆದುಕೊಂಡಿತು. ತಂಡದ ಮೊತ್ತ 91 ರನ್ ಆಗುವಷ್ಟರಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದು ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಮುನ್ಸೂಚನೆ ನೀಡಿತ್ತು. ಆದರೆ ಬಳಿಕ ಲಂಕಾ ಬೌಲರ್‌ಗಳಿಗೆ ಆಘಾತ ನೀಡಿದ್ದು ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಹಾಗೂ ವಾನ್ ಬೀಕ್ ಜೋಡಿ 7ನೇ ವಿಕೆಟ್‌ಗೆ 130 ರನ್‌ಗಳ ಅಮೋಘ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಬಲ ನೀಡಿದರು.

ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಹಾಗೂ ವಾನ್ ಬೀಕ್ ಜೋಡಿಯ ಅದ್ಭುತ ಪ್ರದರ್ಶನದಿಂದಾಗಿ ನೆದರ್ಲೆಂಡ್ಸ್ ತಂಡ ಈ ಪಂದ್ಯದಲ್ಲಿ 262 ರನ್‌ಗಳ ಸವಾಲಿನ ಗುರಿ ನೀಡುವಲ್ಲಿ ಯಶಸ್ವಿಯಾಗಿತ್ತು. ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ 70 ರನ್‌ಗಳನ್ನು ಗಳಿಸಿದರೆ ವಾನ್ ಬೀಕ್ 59 ರನ್‌ಗಳ ಕೊಡುಗೆ ನೀಡಿದರು.

ನೆದರ್ಲೆಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ಸಿ & ಡಬ್ಲ್ಯೂಕೆ), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್
ಬೆಂಚ್: ವೆಸ್ಲಿ ಬ್ಯಾರೆಸಿ, ರಿಯಾನ್ ಕ್ಲೈನ್, ಶರೀಜ್ ಅಹ್ಮದ್, ಸಾಕಿಬ್ ಜುಲ್ಫಿಕರ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದುಶನ್ ಹೇಮಂತ, ಚಾಮಿಕಾ ಕರುಣಾರತ್ನ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ
ಬೆಂಚ್: ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಮತೀಶ ಪತಿರಣ, ದಿಮುತ್ ಕರುಣಾರತ್ನ

Story first published: Saturday, October 21, 2023, 19:07 [IST]
Other articles published on Oct 21, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+