ಇಂಗ್ಲೆಂಡ್ vs ದಕ್ಷಿಣ ಆಫ್ರಿಕಾ: ಗೆಲುವಿಗಾಗಿ ಪೈಪೋಟಿಯ ಕಾದಾಟ: Live score
ವಿಶ್ವಕಪ್‌ನಲ್ಲಿ ಇಂದು ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಆರಂಭವನ್ನು ಪಡೆಯಲು ವಿಫಲವಾಗಿದೆ. ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ಎರಡಿ ಸೋಲು ಅನುಭವಿಸಿದ್ದು ಒಂದು ಪಂದ್ಯದಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭಾರೀ ಅಂತರದ ಸೋಲು ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಪ್ರಸ್ತುತ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ದಕ್ಷಿಣ ಆಪ್ರಿಕಾ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ ದಕ್ಷಿಣ ಆಫ್ರಿಕಾ ತಂಡ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ 38 ರನ್‌ಗಳ ಅಂತರದ ಸೋಲು ಅನುಭವಿಸಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿರುವುದು ಸುಳ್ಳಲ್ಲ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿತ್ತು.
ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇಲ್ಲಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಸ್ನೇಹಿ ಪಿಚ್ ಆಗಿದ್ದು ಉತ್ತಮವಾಗಿ ರನ್ ಹರಿದು ಬರುವ ನಿರೀಕ್ಷೆಯಿದೆ. 23 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಆತಿಥ್ಯವಹಿಸಿಕೊಂಡಿರುವ ಈ ಮೈದಾನದ ಮೊದಲ ಇನ್ನಿಂಗ್ಸ್‌ನ ಸರಾಸರಿ 245 ರನ್.
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ಆದಿಲ್ ರಶೀದ್, ಗಸ್ ಅಟ್ಕಿನ್ಸನ್, ಮಾರ್ಕ್ ವುಡ್, ರೀಸ್ ಟೋಪ್ಲಿ
ಬೆಂಚ್: ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್ಸ್ಟೋನ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ
ಬೆಂಚ್: ತೆಂಬಾ ಬವುಮಾ, ತಬ್ರೈಜ್ ಶಮ್ಸಿ, ಆಂಡಿಲೆ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications