ಶನಿವಾರ ನಡೆಯಲಿರುವ ಎರಡನೇ ಪಂದ್ಯ ಬಲಿಷ್ಠ ತಂಡಗಳ ಕದನವಾಗಿರಲಿದೆ. ಈ ಬಾರಿಯ ವಿಶ್ವಕಪ್ ಟೂರ್ನಿಯ ಎರಡು ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಶನಿವಾರ ಮುಖಾಮುಖಿಯಾಗಲಿದ್ದು ಈ ಮುಖಾಮುಖಿಯಲ್ಲಿ ಯಾರಿಗೆ ಗೆಲುವು ದೊರೆಯಲಿದೆ ಎನ್ನುವುದು ತೋವ್ರ ಕುತೂಹಲ ಮೂಡಿಸಿದೆ.
ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಆರಂಭವನ್ನು ಪಡೆಯಲು ವಿಫಲವಾಗಿದೆ. ಆಡಿರುವ ಮೊದಲ ಮೂರು ಪಂದ್ಯಗಳಲ್ಲಿ ಇಂಗ್ಲೆಂಡ್ ಎರಡಿ ಸೋಲು ಅನುಭವಿಸಿದ್ದು ಒಂದು ಪಂದ್ಯದಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭಾರೀ ಅಂತರದ ಸೋಲು ಅನುಭವಿಸಿ ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಪ್ರಸ್ತುತ ಇಂಗ್ಲೆಂಡ್ ಐದನೇ ಸ್ಥಾನದಲ್ಲಿದೆ.

ಮತ್ತೊಂದೆಡೆ ದಕ್ಷಿಣ ಆಪ್ರಿಕಾ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ ದಕ್ಷಿಣ ಆಫ್ರಿಕಾ ತಂಡ ಕೊನೆಯ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ 38 ರನ್‌ಗಳ ಅಂತರದ ಸೋಲು ಅನುಭವಿಸಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿರುವುದು ಸುಳ್ಳಲ್ಲ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧ ಭಾರೀ ಅಂತರದಿಂದ ಗೆಲುವು ಸಾಧಿಸಿತ್ತು.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋ, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(w/c), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟಾಪ್ಲೆ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್
ದಕ್ಷಿಣ ಅಫ್ರಿಕಾ: ಟೆಂಬಾ ಬವುಮಾ (ಸಿ), ಕ್ವಿಂಟನ್ ಡಿ ಕಾಕ್ (ಡಬ್ಲ್ಯೂ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ಆಂಡಿಲೆ ಫೆಹ್ಲುಕ್ವಾಯೊ, ರೀಜಾ ಹೆಂಡ್ರಿಕ್ಸ್, ಲಿಜಾದ್ ವಿಲಿಯಮ್ಸ್
ಪಿಚ್ ರಿಪೋರ್ಟ್
ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇಲ್ಲಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಸ್ನೇಹಿ ಪಿಚ್ ಆಗಿದ್ದು ಉತ್ತಮವಾಗಿ ರನ್ ಹರಿದು ಬರುವ ನಿರೀಕ್ಷೆಯಿದೆ. 23 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಆತಿಥ್ಯವಹಿಸಿಕೊಂಡಿರುವ ಈ ಮೈದಾನದ ಮೊದಲ ಇನ್ನಿಂಗ್ಸ್‌ನ ಸರಾಸರಿ 245 ರನ್.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ಲುಂಗಿ ಎನ್ಗಿಡಿ
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ