ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಎರಡು ಬಲಾಢ್ಯ ತಂಡಗಳ ನಡುವೆ ಕಾದಾಟ ನಡೆಯಲಿದೆ. ಟೂರ್ನಿಯಲ್ಲಿ ಈವರೆಗೆ ಅಜೇಯವಾಗಿ ಉಳಿದುಕೊಂಡಿರುವ ಎರಡು ತಂಡಗಳಾದ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ.
ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಭರ್ಜರಿ ಗೆಲುವಿನೊಂದಿಗೆ ಈ ಟೂರ್ನಿಯನ್ನು ಆರಂಭಿಸಿತು. ಅದಾದ ಬಳಿಕ 99 ರನ್‌ಗಳ ಅಂತರದಿಂದ ನೆದರ್ಲೆಂಡ್ಸ್ ತಂಡವನ್ನು ಮಣಿಸಿದರೆ ಬಾಂಗ್ಲಾದೇಶ ವಿರುದ್ಧ 8 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಇನ್ನು ಅಫ್ಘಾನಿಸ್ತಾನದ ವಿರುದ್ಧ 149 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಎಲ್ಲಾ ಪಂದ್ಯಗಳಲ್ಲಿಯೂ ಬೃಹತ್ ಗೆಲುವು ಸಾಧಿಸಿ ಅತ್ಯಂತ ಸುಸ್ಥಿತಿಯಲ್ಲಿ ಗೋಚರಿಸುತ್ತಿದೆ.

ಹೀಗಾಗಿ ಟೀಮ್ ಇಂಡಿಯಾ ಮುಂದಿನ ಪಂದ್ಯದಲ್ಲಿ ಕಿವೀಸ್ ತಂಡದಿಂದ ದೊಡ್ಡ ಸವಾಲು ಎದುರಾಗುವುದರಲ್ಲಿ ಅನುಮಾನವಿಲ್ಲ. ಭಾರತ ತಂಡ ಕೂಡ ನಾಲ್ಕು ಗೆಲುವು ಸಾಧಿಸಿದ್ದು ನಾಲ್ಕರಲ್ಲಿ ಕೂಡ ರನ್ ಬೆನ್ನಟ್ಟಿ ಗೆದ್ದುಕೊಂಡಿದ್ದು ಕಿವೀಸ್ ವಿರುದ್ಧದ ಹಕದನದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:00 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಹಗಳ ಸಂಪೂರ್ಣ ಸ್ಕ್ವಾಡ್
ಟೀಮ್ ಇಂಡಿಯಾ; ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್(ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಇಶ್ ಸೋಧಿ, ಜೇಮ್ಸ್ ನೀಶಮ್
ಪಿಚ್ ರಿಪೋರ್ಟ್
ಧರ್ಮಶಾಲಾದ ಪಿಚ್ ಬೌಲರ್‌ಗಳಿಗೆ ಹೆಚ್ಚಯ ನೆರವು ನೀಡುವಂಥಾ ಪಿಚ್ ಆಗಿದ್ದು ಅದರಲ್ಲೂ ವೇಗಿಗಳು ಇಲ್ಲಿ ಹೆಚ್ಚಿನ ಯಶಸ್ಸು ಸಾಧಿಸಲಿದ್ದಾರೆ. ಆರಂಭದಲ್ಲಿ ಇಲ್ಲಿ ಬ್ಯಾಟರ್‌ಗಳು ಬಹಳ ಸವಾಲನ್ನು ಎದುರಿಸುವುದು ನಿಶ್ಚಿತ. ಇನ್ನು ಇಲ್ಲಿ ಟಾಸ್ ಗೆದ್ದ ತಂಡ ಮೊದಲಿಗೆ ಬೌಲಿಂಗ್ ನಡೆಸಿ ರನ್ ಬೆನ್ನಟ್ಟುವ ನಿರ್ಧಾರ ಮಾಡುವುದು ಉತ್ತಮ ನಿರ್ಧಾರ ಎನಿಸಿಕೊಳ್ಳಲಿದೆ.
ಸಂಭಾವ್ಯ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ವಿಲ್ ಯಂಗ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ)( ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್