Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ದಕ್ಷಿಣ ಆಫ್ರಿಕಾ vs ಬಾಂಗ್ಲಾದೇಶ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ವಿಶ್ವಕಪ್ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಆಘಾತಕಾರಿ ಸೋಲಿನ ಬಳಿಕ ಮತ್ತೊಮ್ಮೆ ತಿರುಗಿ ಬಿದ್ದಿರುವುದು ಸ್ಪಷ್ಟವಾಗಿದೆ. ಇಂಗ್ಲೆಂಡ್ ವಿರುದ್ಧ ಭರ್ಜರಿ 229 ರನ್‌ಗಳನ್ನು ಬಾರಿಸುವ ಮೂಲಕ ಮತ್ತೆ ತನ್ನ ಗೆಲುವಿನ ಲಯಕ್ಕೆ ಮರಳಿದೆ. ಇದೀಗ ಟೂರ್ನಿಯಲ್ಲಿ ತನ್ನ ಐದನೇ ಪಂದ್ಯವನ್ನಾಡಲು ದಕ್ಷಿಣ ಆಫ್ರಿಕಾ ತಂಡ ಸಜ್ಜಾಗಿದ್ದು ಈ ಸಂದರ್ಭದಲ್ಲಿ ಬಾಂಗ್ಲಾದೇಶ ಎದುರಾಳಿಯಾಗಿ ಕಣಕ್ಕಿಳಿಯಲಿದೆ.

ಮತ್ತೊಂದೆಡೆ ಬಾಂಗ್ಲಾದೇಶ ಆಡಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರವೇ ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾಗೆ ಆಘಾತ ನೀಡುವತ್ತ ಬಾಂಗ್ಲಾ ಪಡೆ ಚಿತ್ತ ನೆಟ್ಟಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಈ ಪಂದ್ಯ ನಡೆಯಲಿದ್ದು ತೀವ್ರ ಕುತೂಹಲ ಕೆರಳಿಸಿದೆ.

World cup, match 23rd: South Africa vs Bangladesh; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ದಕ್ಷಿಣ ಆಫ್ರಿಕಾ vs ಬಾಂಗ್ಲಾದೇಶ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:00 ಗಂಟೆಗೆ ಪಂದ್ಯ ಆರಂಭವಾಗಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದೆ. ಇನ್ನು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡಾ, ತಬ್ರೈಜ್ ಶಮ್ಸಿ, ರಾಸ್ಸಿ ವಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್.

ಬಾಂಗ್ಲಾದೇಶ: ಶಕೀಬ್ ಅಲ್ ಹಸನ್ (ನಾಯಕ), ಲಿಟ್ಟನ್ ಕುಮರ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ (ವಿಸಿ), ತೌಹಿದ್ ಹೃದಯೊಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೇದಿ ಹಸನ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ತಂಝಿಮ್ ಹಸನ್ ಸಾಕಿಬ್.

ಪಿಚ್ ರಿಪೋರ್ಟ್

ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇಲ್ಲಿನ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಸ್ನೇಹಿ ಪಿಚ್ ಆಗಿದ್ದು ಉತ್ತಮವಾಗಿ ರನ್ ಹರಿದು ಬರುವ ನಿರೀಕ್ಷೆಯಿದೆ. 24 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳ ಆತಿಥ್ಯವಹಿಸಿಕೊಂಡಿರುವ ಈ ಮೈದಾನದ ಮೊದಲ ಇನ್ನಿಂಗ್ಸ್‌ನ ಸರಾಸರಿ 245 ರನ್.

ಸಂಭಾವ್ಯ ಆಡುವ ಬಳಗ

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ

ಬಾಂಗ್ಲಾದೇಶ : ಲಿಟ್ಟನ್ ದಾಸ್, ತಂಝಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೋ, ಮೆಹಿದಿ ಹಸನ್ ಮಿರಾಜ್, ತೌಹಿದ್ ಹೃದಯೋಯ್, ಶಾಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್, ಮಹಮ್ಮದುಲ್ಲಾ, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹಮಾನ್

Story first published: Monday, October 23, 2023, 20:47 [IST]
Other articles published on Oct 23, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+