Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂದು ಆಸ್ಟ್ರೇಲಿಯಾಗೆ ನೆದರ್ಲೆಂಡ್ಸ್ ಸವಾಲು: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ವಿಶ್ವಕಪ್ ಟೂರ್ನಿಯ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಹಾಗೂ ನೆದರ್ಲೆಂಡ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ನೆದರ್ಲೆಂಡ್ಸ್ ಯಾವ ರೀತಿಯ ಪ್ರತ್ಯುತ್ತರ ನೀಡಲಿದೆ ಎನ್ನುವ ಕುತೂಹಲ ಮೂಡಿಸಿದೆ. ಈಗಾಗಲೇ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿರುವ ನೆದರ್ಲೆಂಡ್ಸ್ ತಂಡ ಅದೇ ಆತ್ಮವಿಶ್ವಾಸದೊಂದಿಗೆ ಈ ಪಂದ್ಯದಲ್ಲಿಯೂ ಕಣಕ್ಕಿಳಿಯಲಿದೆ.

ಆಸ್ಟ್ರೇಲಿಯಾ ತಂಡ ಈವರೆಗೆ ನಾಲ್ಕು ಪಂದ್ಯಗಳಲ್ಲಿ ಆಡಿದ್ದು ಎರಡು ಗೆಲುವು ಹಾಗೂ ಎರಡು ಸೋಲು ಅನುಭವಿಸಿದೆ. ಆರಂಭಿಕ ಎರಡು ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಂಡಿದ್ದ ಆಸ್ಟ್ರೇಲಿಯಾ ತಂಡ ಬಳಿಕ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದು ಅದೇ ಲಯದಲ್ಲಿ ಮುಂದುವರಿಯುವ ವಿಶ್ವಾಸ ಮೂಡಿಸಿದೆ. ಇನ್ನು ನೆದರ್ಲೆಂಡ್ಸ್ ತಂಡ ಈ ವಿಶ್ವಕಪ್‌ನಲ್ಲಿ ನಾಲ್ಕು ಪಂದ್ಯಗಳನ್ನು ಆಡಿದ್ದು ಒಂದು ಗೆಲುವು ಮಾತ್ರ ಸಾಧಿಸಿದೆ. ಆದರೆ ಆ ಗೆಲುವು ಬಲಿಷ್ಠ ದ. ಆಫ್ರಿಕಾ ವಿರುದ್ಧ ಬಂದಿರುವುದು ಸ್ಪೂರ್ತಿ ನೀಡಲಿದೆ.

World cup, match 24th: Australia vs Netherlands; Probable XIs Pitch Report and Live details


ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಆಸ್ಟ್ರೇಲಿಯಾ vs ನೆದರ್ಲೆಂಡ್ಸ್ ತಂಡಗಳ ವಿರುದ್ಧದ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ . ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಒಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

ಪಿಚ್ ರಿಪೋರ್ಟ್
ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇಲ್ಲಿನ ಪಿಚ್ ಸಾಮಾನ್ಯವಾಗಿ ನಿಧಾನಗತಿಯಾಗಿದ್ದ ಸ್ಪಿನ್ನರ್‌ಗಳಿಗೆ ಹೆಚ್ಚಿನ ನೆರವು ದೊರೆಯಲಿದೆ. ಆದರೆ ಈ ವಿಶ್ವಕಪ್‌ನಲ್ಲಿ ಬ್ಯಾಟರ್‌ಗಳಿಗೂ ಇಲ್ಲಿ ಅದ್ಭುತವಾದ ನೆರವು ದೊರೆಯುತ್ತಿದ್ದು ಉತ್ತಮವಾಗಿ ರನ್ ಹರಿದು ಬರುವ ನಿರೀಕ್ಷೆಯಿದೆ.

ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (c), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ತೇಜಾ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ & ವಿಕೆಟ್ ಕೀಪರ್), ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಪೌಲೆನ್ ವಾನ್ ಮೀಕ್ಟರ್, ಪೌಲೆನ್ ದತ್ತ್,

Story first published: Wednesday, October 25, 2023, 8:57 [IST]
Other articles published on Oct 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+