SA vs Pak: ಹರಿಣಗಳಿಗೆ ಠಕ್ಕರ್ ಕೊಡುತ್ತಾ ಬಾಬರ್ ಪಡೆ: Live ಸ್ಕೋರ್
ವಿಶ್ವಕಪ್‌ನಲ್ಲಿ ಇಂದು 26ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯದಲ್ಲಿ ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಎರಡು ತಂಡಗಳಲ್ಲಿಯೂ ಪ್ರಮುಖ ಬದಲಾವಣೆಗಳು ಆಗಿದೆ. ಪಾಕಿಸ್ತಾನ ತಂಡದಲ್ಲಿ ಎರಡು ಬದಲಾವಣೆ ಮಾಡಿಕೊಳ್ಳಲಾಗಿದ್ದು ಹಸನ್ ಅಲಿ ಅನಾರೋಗ್ಯಕ್ಕೆ ತುತ್ತಾಗಿದ್ದು ವಾಸಿಮ್ ಜೂನಿಯರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಈ ಪಂದ್ಯಕ್ಕಾಗಿ ಮೂರು ಬದಲಾವಣೆ ಮಾಡಿಕೊಳ್ಳಲಾಗಿದೆ. ನಾಯಕ ಟೆಂಬಾ ಬವುಮಾ ಆಡುವ ಬಳಗಕ್ಕೆ ವಾಪಸಾಗಿದ್ದು ಟಬ್ರೇಸ್ ಶಂಸಿ ಹಾಗೂ ಎನ್‌ಗಿಡಿ ಕೂಡ ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರೀಸ್ ಹೆಂಡ್ರಿಕ್ಸ್, ರಬಾಡ ಹಾಗೂ ಲಿಜಾಡ್ ವಿಲಿಯಮ್ಸ್ ಆಡುವ ಬಳಗದಿಂದ ಹೊರಬಿದ್ದ ಮೂವರು ಆಟಗಾರರಾಗಿದ್ದಾರೆ.
Live ಸ್ಕೋರ್ ಹೀಗಿದೆ:
ಚೆನ್ನೈನ ಚೆಪಾಕ್ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿ ಪಿಚ್ ಎನ್ನುವುದು ಹೊಸ ವಿಚಾರವೇನಲ್ಲ. ಈ ವಿಶ್ವಕಪ್‌ನಲ್ಲಿಯೂ ಸಾಂಪ್ರದಾಯಿಕ ಚೆನ್ನೈ ಪಿಚ್ ಸ್ಪಿನ್ನರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಇದೇ ಪಂದ್ಯದಲ್ಲಿ ನಡೆದಿದ್ದಾಗಲೂ ಅದು ಸಾಬೀತಾಗಿತ್ತು.
ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಅಮೋಘ ಗೆಲುವು ಸಾಧಿಸಿದೆ. ನೆದರ್ಲೆಂಡ್ಸ್ ವಿರುದ್ಧದ ಒಂದು ಪಂದ್ಯದಲ್ಲಿ ಆಘಾತಕಾರಿಯಾಗಿ ಸೋಲು ಅನುಭವಿಸಿದ್ದು ಹೊರತುಪಡಿಸಿದರೆ ತಂಡ ಅತ್ಯಂತ ಬಲಿಷ್ಠವಾಗಿ ತೋರುತ್ತಿದೆ. ಇತ್ತ ಪಾಕಿಸ್ತಾನ ತಂಡದ ಸ್ಥಿತಿ ಭಿನ್ನವಾಗಿದ್ದು ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಬಳಿಕ ಸೋಲಿನ ಸರಪಳಿಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿದೆ.
ಫಾಕಿಸ್ತಾನ ಆಡುವ ಬಳಗ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಮ್ ಜೂನಿಯರ್, ಹಾರಿಸ್ ರೌಫ್
ಬೆಂಚ್: ಉಸಾಮಾ ಮಿರ್, ಹಸನ್ ಅಲಿ, ಫಖರ್ ಜಮಾನ್, ಅಘಾ ಸಲ್ಮಾನ್
ಕ್ವಿಂಟನ್ ಡಿ ಕಾಕ್ (ವಾಕ್), ಟೆಂಬಾ ಬವುಮಾ (ಸಿ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಲುಂಗಿ ಎನ್ಗಿಡಿ
ಬೆಂಚ್: ರೀಜಾ ಹೆಂಡ್ರಿಕ್ಸ್, ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್, ಆಂಡಿಲೆ ಫೆಹ್ಲುಕ್ವಾಯೊ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications