Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಪಾಕಿಸ್ತಾನ vs ದ. ಆಫ್ರಿಕಾ ಮುಖಾಮುಖಿ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ವಿಶ್ವಕಪ್ ಟೂರ್ನಿಯ 26ನೇ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ಸೋಲಿನ ಸುಳಿಯಲ್ಲಿ ಸಿಲುಕಿರುವ ಪಾಕ್ ಪಡೆ ಯಾವ ರೀತಿಯ ಪ್ರದರ್ಶನ ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಆಡಿರುವ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಅಮೋಘ ಗೆಲುವು ಸಾಧಿಸಿದೆ. ನೆದರ್ಲೆಂಡ್ಸ್ ವಿರುದ್ಧದ ಒಂದು ಪಂದ್ಯದಲ್ಲಿ ಆಘಾತಕಾರಿಯಾಗಿ ಸೋಲು ಅನುಭವಿಸಿದ್ದು ಹೊರತುಪಡಿಸಿದರೆ ತಂಡ ಅತ್ಯಂತ ಬಲಿಷ್ಠವಾಗಿ ತೋರುತ್ತಿದೆ. ಇತ್ತ ಪಾಕಿಸ್ತಾನ ತಂಡದ ಸ್ಥಿತಿ ಭಿನ್ನವಾಗಿದ್ದು ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಬಳಿಕ ಸೋಲಿನ ಸರಪಳಿಯಿಂದ ತಪ್ಪಿಸಿಕೊಳ್ಳಲು ಪರದಾಡುತ್ತಿದೆ.

World cup, match 26th: Pakistan vs South Africa; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಶುಕ್ರವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲಿಜಾಡ್ ವಿಲಿಯಮ್ಸ್, ಟೆಂಬಾ ಬಾವುಮಾ, ಆಂಡಿಲೆ ಲ್ಯುಂಗ್‌ವೇ, , ತಬ್ರೈಜ್ ಶಮ್ಸಿ

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಸೌದ್ ಶಕೀಲ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್, ಫಖರ್ ಜಮಾನ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್

ಪಿಚ್ ರಿಪೋರ್ಟ್

ಚೆನ್ನೈನ ಚೆಪಾಕ್ ಕ್ರೀಡಾಂಗಣದ ಪಿಚ್ ಸ್ಪಿನ್ ಸ್ನೇಹಿ ಪಿಚ್ ಎನ್ನುವುದು ಹೊಸ ವಿಚಾರವೇನಲ್ಲ. ಈ ವಿಶ್ವಕಪ್‌ನಲ್ಲಿಯೂ ಸಾಂಪ್ರದಾಯಿಕ ಚೆನ್ನೈ ಪಿಚ್ ಸ್ಪಿನ್ನರ್‌ಗಳಿಗೆ ಉತ್ತಮವಾಗಿ ನೆರವು ನೀಡಲಿದೆ. ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿ ಇದೇ ಪಂದ್ಯದಲ್ಲಿ ನಡೆದಿದ್ದಾಗಲೂ ಅದು ಸಾಬೀತಾಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀಳುವ ಕಾರಣ ಟಾಸ್ ಗೆದ್ದ ತಂಡ ಇಲ್ಲಿ ಮೊದಲಿಗೆ ಫೀಲ್ಡಿಂಗ್ ಆಯ್ದುಕೊಳ್ಳುವುದು ನಿಸ್ಸಂಶಯ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ಹಸನ್ ಅಲಿ, ಹಾರಿಸ್ ರೌಫ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ

Story first published: Thursday, October 26, 2023, 18:49 [IST]
Other articles published on Oct 26, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+