Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಮುಖಾಮುಖಿ: ಪಂದ್ಯದ ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ಆಡುವ ಬಳಗ

ವಿಶ್ವಕಪ್ ಟೂರ್ನಿಯ 27ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೊಸಿಯೇಶನ್ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಪೈಪೋಟಿಯ ಪ್ರದರ್ಶನವನ್ನು ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಆರಂಭಿಕ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಆಸ್ಟ್ರೇಲಿಯಾ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿದ ಆತ್ಮವಿಶ್ವಾಸದಲ್ಲಿದೆ. ಅಂಕಪಟ್ಟಿಯಲ್ಲಿ ಈಗಾಗಲೇ ನಾಲ್ಕನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ತನ್ನ ಸ್ಥಾನವನ್ನು ಉತ್ತಮ ಪಡಿಸಿಕೊಳ್ಳುವ ಅದ್ಭುತ ಅವಕಾಶ ದೊರೆಯಲಿದೆ. ಈ ಮೂಲಕ ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ.

World cup, match 27th: Australia vs New Zealand; Probable XIs Pitch Report and Live details

ನ್ಯೂಜಿಲೆಂಡ್ ತಂಡ ಆಡಿರುವ ಐದು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರವೇ ಸೋಲು ಸಾಧಿಸಿದ್ದು ಆಸಿಸ್ ಪಡೆಯ ವಿರುದ್ಧವೂ ಗೆಲ್ಲುವ ವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲಿ ಇತ್ತಂಡಗಳ ನಡುವಿನ ಕದನ ಸಾಕಷ್ಟು ಕುತೂಹಲ ಕೆರಳಿಸಿದೆ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ಧದ ಪಂದ್ಯ ಶನಿವಾರ ಭಾರತೀಯ ಕಾಲಮಾನ ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದ್ದು 10:00ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಆಸ್ಟ್ರೇಲಿಯಾ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೇನ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೋಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್

ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ಆಡಮ್ ಝಂಪಾ

ನ್ಯೂಜಿಲೆಂಡ್: ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಟಾಮ್ ಲ್ಯಾಥಮ್ (ನಾಯಕ), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

Story first published: Friday, October 27, 2023, 20:28 [IST]
Other articles published on Oct 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+