ವಿಶ್ವಕಪ್‌ನ 29ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಅದ್ಭುತ ಬೌಲಿಂಗ್ ದಾಳಿಗೆ ಭಾರತ ಪದರಾಟ ನಡೆಸಿದ್ದು ಸಾಧಾರಣ ಮೊತ್ತವನ್ನಷ್ಟೇ ಗಳಿಸಲು ಸಾಧ್ಯವಾಗಿದೆ. ನಾಯಕ ರೋಹಿತ್ ಶರ್ಮಾ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡದ್ದು ಟೀಮ್ ಇಂಡಿಯಾ 229 ರನ್‌ಗಳನ್ನು ಕಲೆಹಾಕಲು ಕಾರಣವಾದರು.
ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸುವ ಸವಾಲು ಪಡೆದ ಭಾರತ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಶುಬ್ಮನ್ ಗಿಲ್ 9 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ವಿರಾಟ್ ಕೊಹ್ಲಿ ಶೂನ್ಯಕ್ಕೆ ಔಟಾದರು. ಅದಾದ ಬಳಿಕ ಬಂದ ಶ್ರೇಯಸ್ ಐಯ್ಯರ್ ಕೂಡ ನಾಲ್ಕೇ ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಅಲ್ಲಿಗೆ ಟೀಮ್ ಇಂಡಿಯಾ 40 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಆದರೆ ಅದಾದ ಬಳಿಕ ನಾಯಕ ರೋಹಿತ್ ಶರ್ಮಾ ಜೊತೆಗೆ ಕೆಎಲ್ ರಾಹುಲ್ ಉತ್ತಮ ಜೊತೆಯಾಟವೊಂದರಲ್ಲಿ ಭಾಗಿಯಾದರು. 91 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದ ಈ ಜೋಡಿಯನ್ನು ವಿಲ್ಲಿ ರಾಹುಲ್ ಅವರನ್ನು ಔಟ್ ಮಾಡುವ ಊಲಕ ಬೇರ್ಪಡಿಸಿದರು. 39 ರನ್‌ಗಳ ಗಮನಾರ್ಹ ಕೊಡುಗೆ ನೀಡಿದ ರಾಹುಲ್ ದೊಡ್ಡ ಮೊತ್ತ ಗಳಿಸಲು ವಿಫಲವಾದರು.
ಇನ್ನು ರಾಹುಲ್ ವಿಕೆಟ್ ಕಳೆದುಕೊಂಡ ಬಳಿಕ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಕೂಡ ಅದ್ಭುತ ಪ್ರದರ್ಶನ ನೀಡಿ ತಂಡಕ್ಕೆ ಆಸರೆಯಾದರು. ಈ ಮಧ್ಯೆ ರೋಹಿತ್ ಶರ್ಮಾ 87 ರನ್‌ಗಳನ್ನು ಗಳಿಸಿ ಶತಕದಂಚಿನಲ್ಲಿ ಎಡವಿದರು. 101 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 10 ಬೌಂಡರಿ ಹಾಗೂ 3 ಸಿಕ್ಸರ್ ಬಾರಿಸಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ 49 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು. ಅಂತಿಮವಾಗಿ ಟೀಮ್ ಇಂಡಿಯಾ 229 ರನ್‌ಗಳಿಗೆ ಇನ್ನಿಂಗ್ಸ್ ಅಂತ್ಯಗೊಳಿಸಿದೆ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಸ್ಯಾಮ್ ಕುರ್ರಾನ್, ಬ್ರೈಡನ್ ಕಾರ್ಸೆ, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್