India vs England: ಭಾರತಕ್ಕೆ ಇಂಗ್ಲೆಂಡ್ ಸವಾಲು: Live ಸ್ಕೋರ್
ವಿಶ್ವಕಪ್‌ನಲ್ಲಿ ಇಂದು 29ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಮ್ ಇಂಡಿಯಾ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿಯುತ್ತಿದೆ. ಕಳೆದ ನ್ಯೂಜಿಲೆಂಡ್ ವಿರುದ್ಧ ಆಡಿದ ಪಂದ್ಯದಲ್ಲಿ ಆಡಿದ ಆಡುವ ಬಳಗ ಇಂದು ಕಣಕ್ಕೀಳಿಯುತ್ತಿದೆ. ಇನ್ನು ಇಂಗ್ಲೆಂಡ್ ತಂಡ ಸೋಲಿನ ಹೊರತಾಗಿಯೂ ಯಾವುದೇ ಬದಲಾವಣೆ ಮಾಡಕೊಳ್ಳದೆ ಕಣಕ್ಕಿಳಿಯುತ್ತಿರುವುದು ಗಮನಾರ್ಹ.

ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸತತ ಐದು ಗೆಲುವು ಸಾಧಿಸಿದ್ದು ಅದ್ಬುತ ಲಯದಲ್ಲಿದೆ. ಟೂರ್ನಿಯಲ್ಲಿ ಅಜೇಯವಾಗಿ ಉಳಿದುಕೊಂಡಿರುವ ಏಕೈಕ ತಂಡವಾಗಿದೆ ಭಾರತ. ಈ ಗೆಲುವಿನ ಓಟವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿರುವ ರೋಹಿತ್ ಬಳಗಕ್ಕೆ ಮುಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಎದುರಾಳಿಯಾಗಿ ಕಣಕ್ಕಿಳಿದಿದೆ.
Live ಸ್ಕೋರ್ ಹೀಗಿದೆ
ಮತ್ತೊಂದೆಡೆ ಸತತ ಸೋಲಿನ ಸುಳಿಗೆ ಸಿಲುಕಿ ಟೀವ್ರ ಟೀಕೆಗೆ ಗುರಿಯಾಗಿರುವ ಹಾಲಿ ಚಾಂಪಿಯನ್ ಇಂಗ್ಲೆಂಡ್ ಸ್ಥಿತಿ ಅತ್ಯಂತ ಹೀನಾಯವಾಗಿದೆ. ಆಡಿರುವ ಐದು ಪಂದ್ಯಗಳಲ್ಲಿನಾಲ್ಕು ಪಂದ್ಯಗಳನ್ನು ಸೋತಿರುವ ಇಂಗ್ಲೆಂಡ್ ತಂಡ ಬಹುತೇಕ ಟೂರ್ನಿಯಿಂದ ಹೊರಬೀಳುವ ಹಂತದಲ್ಲಿದೆ. ಇಂಥಾ ಸಂದರ್ಭದಲ್ಲಿ ಟೀಮ್ ಇಂಡಿಯಾ ಎದುರಾಳಿಯಾಗಿರುವುದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಸವಾಲಾಗಿರುವುದರಲ್ಲಿ ಅನುಮಾನವಿಲ್ಲ.
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಸ್ಯಾಮ್ ಕರ್ರಾನ್, ಬ್ರೈಡನ್ ಕಾರ್ಸೆ, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications