Afghanistan vs Sri Lanka: ಅಫ್ಘಾನಿಸ್ತಾನಕ್ಕೆ ಗೆಲ್ಲಲು 242 ರನ್‌ಗಳ ಗುರಿ ನೀಡಿದ ಶ್ರೀಲಂಕಾ
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ 30ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ಸಾಧಾರಣ ಗುರಿಯನ್ನು ನಿಗದಿಪಡಿಸುವಲ್ಲಿ ಯಶಸ್ವಿಯಾಗಿದೆ. 49.3 ಓವರ್‌ಗಳಲ್ಲಿ ಆಲೌಟ್ ಆದ ಶ್ರೀಲಂಕಾ ತಂಡ 241 ರನ್‌ಗಳನ್ನು ಮಾತ್ರವೇ ಗಳಿಸಲು ಶಕ್ತವಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ಮೊದಲಿಗೆ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿತು. ಆರಂಭಿಕ ವಿಕೆಟ್ ಬೇಗೆ ಕಳೆದುಕೊಂಡರೆ ಎರಡನೇ ವಿಕೆಟ್‌ಗೆ ಅರ್ಧ ಶತಕದ ಜೊತೆಯಾಟ ಲಂಕಾ ತಂಡಕ್ಕೆ ದೊರೆಯಿತು. ಫಾತುಮ್ ನಿಸ್ಸಾಂಕ 46 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರೆ ಕುಸಾಲ್ ಮೆಂಡಿಸ್ 39 ರನ್‌ಗಳನ್ನು ಗಳಿಸ ಔಟಾದರು. ಸದೀರ ಸಮರವಿಕ್ರಮ 36 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು.

ಉಳಿದಂತೆ ಆಟಗಾರರಿಂದ ಉತ್ತಮ ಪ್ರದರ್ಶನ ಬಾರಲಿಲ್ಲ. ಶ್ರೀಲಂಕಾ ತಂಡ ಈ ಪಂದ್ಯದಲ್ಲಿ ಕೇವಲ 49.3 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದ್ದು 241 ರನ್‌ಗಳಿಗೆ ತನ್ನ ಆಟವನ್ನು ಅಂತ್ಯಗೊಳಿಸಿದೆ.
ಇನ್ನು ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ಪರವಾಗಿ ಫಜಲ್ಲಾಕ್ ಫಾರೂಕಿ 4 ವಿಕೆಟ್ ಕಬಳಿಸಿದ್ದು ಮುಜೀಬ್ ಎರಡು ವಿಕೆಟ್ ಪಡೆದುಕೊಂಡರು. ಅಜ್ಮತುಲ್ಲಾ ಹಾಗೂ ರಶೀದ್ ಖಾನ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.
ಅಫ್ಘಾನಿಸ್ತಾನ ಆಡುವ ಬಳಗ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಷಾ, ಹಶ್ಮತುಲ್ಲಾ ಶಾಹಿದಿ (ಸಿ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (wk), ಮೊಹಮ್ಮದ್ ನಬಿ, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ
ಬೆಂಚ್: ನೂರ್ ಅಹ್ಮದ್, ರಿಯಾಜ್ ಹಸನ್, ಅಬ್ದುಲ್ ರೆಹಮಾನ್, ನಜೀಬುಲ್ಲಾ ಜದ್ರಾನ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (c & wk), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್, ಮಹೀಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ
ಬೆಂಚ್: ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ, ಕುಸಾಲ್ ಪೆರೇರಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications