World cup 2023: ಪಾಕಿಸ್ತಾನಕ್ಕೆ ಗೆಲ್ಲಲು ಸುಲಭ ಗುರಿ ನೀಡಿದ ಬಾಂಗ್ಲಾದೇಶ
ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ 31ನೇ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ತಮಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುವಲ್ಲಿ ವಿಫಲವಾಗಿದ್ದು ಸುಲಭ ಗುರಿಯನ್ನು ನಿಗದಿಪಡಿಸಿದೆ. 45.1 ಓವರ್‌ಗಳಲ್ಲಿ 204 ರನ್‌ಗಳನ್ನು ಗಳಿಸಿದ ಬಾಂಗ್ಲಾದೇಶ ತಂಡ ಬ್ಯಾಟಿಂಗ್‌ನಲ್ಲಿ ತನ್ನ ವೈಫಲ್ಯವನ್ನು ಮುಂದುವರಿಸಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಆರಂಭದಲ್ಲಿ ಬ್ಯಾಟಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಆದರೆ ಈ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂಥಾ ಪ್ರದರ್ಶನ ಬಾರಲೇ ಇಲ್ಲ. ಕೇವಲ 23 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು ಬಾಂಗ್ಲಾದೇಶ. ಈ ಸಂದರ್ಭದಲ್ಲಿ ಲಿಟನ್ ದಾಸ್ ಜೊತೆಗೂಡಿ ಅನುಭವಿ ಮಹ್ಮದುಲ್ಲಾ ಉತ್ತಮ ಜೊತೆಯಾಟವೊಂದರಲ್ಲಿ ಭಾಗಿಯಾದರು.

79 ರನ್‌ಗಳ ಜೊತೆಯಾಟದ ಸಂದರ್ಭದಲ್ಲಿ 45 ರನ್‌ಗಳಿಸಿದ್ದ ಲಿಟನ್ ದಾಸ್ ವಿಕೆಟ್ ಕಳೆದುಕೊಳ್ಳುವ ಮೂಲಕ ಜೊತೆಯಾಟ ಬೇರ್ಪಟ್ಟಿತು. ನಂತರ ಮಹ್ಮದುಲ್ಲಾ ಜೊತೆಗೆ ಸೇರಿಕೊಂಡ ಶಕೀಬ್ ಅಲ್ ಹಸನ್ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಸಿದರು. ಆದರೆ ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಮಹ್ಮದುಲ್ಲಾ 56 ರನ್‌ಗಳಿದ್ದಾಗ ಶಾಹೀನ್ ಅಫ್ರಿದಿ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು.
ಬಳಿಕ ಮೆಹಿದಿ ಹಸನ್ 25 ರನ್‌ಗಳ ಕೊಡುಗೆ ನಿಡಿದ್ದು ಹೊರತುಪಡಿಸಿದರೆ ಉಳಿದ ಆಟಗಾರರಿಂದ ಕೊಡುಗೆ ಬಾರಲಿಲ್ಲ. ಹೀಗಾಗಿ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಪ್ರಯಾಸದಿಂದ ಇನ್ನೂರರ ಗಡಿ ದಾಟುವಲ್ಲಿ ಮಾತ್ರವೇ ಯಶಸ್ವಿಯಾಯಿತು.
ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿದೆ. ಶಾಹೀನ್ ಅಫ್ರಿದಿ ಮೂರು ವಿಕೆಟ್ ಕಬಳಿಸಿ ಅಬ್ಬರಿಸಿದ್ದು ಮೊಹಮ್ಮದ್ ವಾಸಿಮ್ ಜೂನಿಯರ್ ಕೂಡ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಇನ್ನು ಹ್ಯಾರಿಸ್ ರೌಫ್ ಎರಡು ಹಾಗೂ ಇಫ್ತಿಕಾರ್ ಅಹ್ಮದ್ ಹಾಗೂ ಉಸಮ ಮಿರ್ ತಲಾ ಒಂದು ವಿಕೆಟ್ ಪಡೆದರು.
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹಾರಿಸ್ ರೌಫ್
ಬೆಂಚ್: ಇಮಾಮ್-ಉಲ್-ಹಕ್, ಹಸನ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್
ಬಾಂಗ್ಲಾದೇಶ: ಲಿಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ತೌಹಿದ್ ಹೃದಯೋಯ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಬೆಂಚ್: ನಸುಮ್ ಅಹ್ಮದ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್, ಮಹೇದಿ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications