ವಿಶ್ವಕಪ್‌ನಲ್ಲಿ ಇಂದು ಪಾಕಿಸ್ತಾನ vs ಬಾಂಗ್ಲಾದೇಶ ಮುಖಾಮುಖಿ: Live ಸ್ಕೋರ್
ವಿಶ್ವಕಪ್‌ನಲ್ಲಿ ಇಂದು 31ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಪಾಕಿಸ್ತಾನ ತಂಡ ಆರಂಭದಲ್ಲಿ ಬೌಲಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.
ಇನ್ನು ಈ ಪಂದ್ಯಕ್ಕಾಗಿ ಪಾಕಿಸ್ತಾನ ತಂಡದಲ್ಲಿ ಮೂರು ಬದಲಾವಣೆ ಮಾಡಿಕೊಳ್ಳಲಾಗಿದೆ. ಇಮಾಮ್ ಉಲ್ ಹಕ್, ಮೊಹಮ್ಮದ್ ನವಾಜ್ ಹಾಗೂ ಶದಬ್ ಖಾನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಫಖರ್ ಜಮಾನ್, ಅಘಾ ಸಲ್ಮಾನ್ ಮತ್ತು ಉಸಮ ಮಿರ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Live ಸ್ಕೋರ್ ಹೀಗಿದೆ
ಈ ಬಾರಿಯ ವಿಶ್ವಕಪ್‌ನಲ್ಲಿ ಆರಂಭಿಕ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಪಾಕಿಸ್ತಾನ ತಂಡ ಬಳಿಕ ಸತತವಾಗಿ ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಮೂಲಕ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸ್ಪರ್ಧೆಯಿಂದ ಬಹುತೇಕ ಹೊರಬಿದ್ದಂತಾಗಿದೆ. ಹಾಗಿದ್ದರೂ ಪಾಕ್ ಪಡೆ ತನ್ನ ಕೊನೆಯ ಪ್ರಯತ್ನವನ್ನು ಮುಂದುವರಿಸಲಿದೆ. ಮತ್ತೊಂದೆಡೆ ಬಾಂಗ್ಲಾದೇಶ ಟೂರ್ನಿಯಲ್ಲಿ ಆಡಿದ ಆರು ಪಂದ್ಯಗಳ ಪೈಕಿ ಗೆಲುವು ಸಾಧಿಸಿದ್ದು ಕೇವಲ ಒಂದು. ಹೀಗಾಗಿ ಮತ್ತೊಂದು ಗೆಲುವಿಗಾಗಿ ಈ ಪಂದ್ಯದಲ್ಲಿ ಸರ್ವ ಪ್ರಯತ್ನ ನಡೆಸಲಿದೆ.
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹಾರಿಸ್ ರೌಫ್
ಬೆಂಚ್: ಇಮಾಮ್-ಉಲ್-ಹಕ್, ಹಸನ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್
ಬಾಂಗ್ಲಾದೇಶ: ಲಿಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ತೌಹಿದ್ ಹೃದಯೋಯ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಬೆಂಚ್: ನಸುಮ್ ಅಹ್ಮದ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್, ಮಹೇದಿ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications