World cup: ಕಡೆಗೂ ಸೋಲಿನ ಸರಪಳಿ ಮುರಿದುಕೊಂಡ ಪಾಕಿಸ್ತಾನ: ಬಾಂಗ್ಲಾದೇಶ ವಿರುದ್ಧ ಭರ್ಜರಿ ಗೆಲುವು
ಸತತ ನಾಲ್ಕು ಸೋಲು ಅನುಭವಿಸಿದ್ದ ಪಾಕಿಸ್ತಾನ ಕಡೆಗೂ ಸೋಲಿನ ಸರಪಳಿ ಮುರಿದುಕೊಂಡಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡಿದ ಪಾಕಿಸ್ತಾನ ತಂಡ ಭರ್ಜರಿ 7 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ. ಈ ಮೂಲಕ ಏಳನೇ ಪಂದ್ಯದಲ್ಲಿ ಪಾಕ್ ಪಡೆ 3ನೇ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಮತ್ತೊಂದೆಡೆ ಬಾಂಗ್ಲಾದೇಶದ ಸೋಲಿನ ಸರಪಳಿ ಮುಂದುವರಿದಿದೆ.
ಈ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ ಬಾಂಗ್ಲಾದೇಶ ತಂಡ 205 ರನ್‌ಗಳ ಸುಲಭ ಗುರಿಯನ್ನು ನಿಗದಿಪಡಿಸಿತ್ತು. ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ತಾನ ನಿರಾಯಾಸವಾಗಿ ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾಗಿದೆ. ಪಾಕ್ ತಂಡದ ಆರಂಭಿಕರಾದ ಅಬ್ದುಲ್ಲಾ ಶಫೀಕ್ ಹಾಗೂ ಫಖರ್ ಜಮಾನ್ ಅದ್ಭುತ ಜೊತೆಯಾಟ ನೀಡುವ ಮೂಲಕ ಪಾಕ್ ತಂಡದ ಸುಲಭ ಗೆಲುವಿಗೆ ಕಾರಣವಾದರು.

ಮೊದಲ ವಿಕೆಟ್‌ಗೆ ಪಾಕ್ ಆರಂಭಿಕ ಜೋಡಿ 128 ರನ್‌ಗಳ ಭರ್ಜರಿ ಜೊತೆಯಾಟ ಪಡೆದುಕೊಂಡಿತು. ಇಬ್ಬರು ಆರಂಭಿಕ ಆಟಗಾರರು ಕೂಡ ಅರ್ಧ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಅಬ್ದುಲ್ಲಾ ಶಫೀಕ್ 68 ರನ್‌ಗ:ಇಸುವ ಮೂಲಕ ಈ ಜೋಡಿ ಬೇರ್ಪಟ್ಟಿತು. ನಂತರ ನಾಯಕ ಬಾಬರ್ ಅಜಂ ಕೇವಲ 9 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಳ್ಳುವ ಮೂಲಕ ಮತ್ತೊಮ್ಮೆ ನಿರಾಸೆ ಅನುಭವಿಸಿದ್ದಾರೆ. ಇನ್ನು ಫಖರ್ ಜಮಾನ್ ಈ ಪಂದ್ಯದಲ್ಲಿ ಭರ್ಜರಿ 81 ರನ್‌ಗಳ ಕೊಡುಗೆ ನೀಡಿ ಮಿಂಚಿದ್ದಾರೆ.
ಇನ್ನು ಅಂತಿಮವಾಗಿ ರಿಜ್ವಾನ್ ಹಾಗೂ ಇಫ್ತಿಕಾರ್ ಅಹ್ಮದ್ ತಂಡದ ಗೆಲುವಿನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಬಾಂಗ್ಲಾದೇಶ ನಿಡಿದ 205 ರನ್‌ಗಳ ಗುರಿಯನ್ನು ಪಾಕಿಸ್ತಾನ ತಂಡ ಕೇವಲ 3 ವಿಕೆಟ್ ಕಳೆದುಕೊಂಡು 32.3 ಓವರ್‌ಗಳಲ್ಲಿಯೇ ತಲುಪಿ ಭರ್ಜರಿ ಗೆಲುವು ಸಾಧಿಸಿದೆ.
ಇನ್ನು ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಆರಂಭದಲ್ಲಿ ಬ್ಯಾಟಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಆದರೆ ಈ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂಥಾ ಪ್ರದರ್ಶನ ಬಾರಲೇ ಇಲ್ಲ. ಕೇವಲ 23 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು ಬಾಂಗ್ಲಾದೇಶ. ಈ ಸಂದರ್ಭದಲ್ಲಿ ಲಿಟನ್ ದಾಸ್ ಜೊತೆಗೂಡಿ ಅನುಭವಿ ಮಹ್ಮದುಲ್ಲಾ ಉತ್ತಮ ಜೊತೆಯಾಟವೊಂದರಲ್ಲಿ ಭಾಗಿಯಾದರು.
79 ರನ್‌ಗಳ ಜೊತೆಯಾಟದ ಸಂದರ್ಭದಲ್ಲಿ 45 ರನ್‌ಗಳಿಸಿದ್ದ ಲಿಟನ್ ದಾಸ್ ವಿಕೆಟ್ ಕಳೆದುಕೊಳ್ಳುವ ಮೂಲಕ ಜೊತೆಯಾಟ ಬೇರ್ಪಟ್ಟಿತು. ನಂತರ ಮಹ್ಮದುಲ್ಲಾ ಜೊತೆಗೆ ಸೇರಿಕೊಂಡ ಶಕೀಬ್ ಅಲ್ ಹಸನ್ ತಂಡವನ್ನು ಮೇಲಕ್ಕೆತ್ತುವ ಪ್ರಯತ್ನ ನಡೆಸಿದರು. ಆದರೆ ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಮಹ್ಮದುಲ್ಲಾ 56 ರನ್‌ಗಳಿದ್ದಾಗ ಶಾಹೀನ್ ಅಫ್ರಿದಿ ಎಸೆತದಲ್ಲಿ ಬೌಲ್ಡ್ ಆಗುವ ಮೂಲಕ ತಮ್ಮ ಇನ್ನಿಂಗ್ಸ್ ಅಂತ್ಯಗೊಳಿಸಿದರು.
ಬಳಿಕ ಮೆಹಿದಿ ಹಸನ್ 25 ರನ್‌ಗಳ ಕೊಡುಗೆ ನಿಡಿದ್ದು ಹೊರತುಪಡಿಸಿದರೆ ಉಳಿದ ಆಟಗಾರರಿಂದ ಕೊಡುಗೆ ಬಾರಲಿಲ್ಲ. ಹೀಗಾಗಿ ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ ಪ್ರಯಾಸದಿಂದ ಇನ್ನೂರರ ಗಡಿ ದಾಟುವಲ್ಲಿ ಮಾತ್ರವೇ ಯಶಸ್ವಿಯಾಯಿತು.
ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡಿದೆ. ಶಾಹೀನ್ ಅಫ್ರಿದಿ ಮೂರು ವಿಕೆಟ್ ಕಬಳಿಸಿ ಅಬ್ಬರಿಸಿದ್ದು ಮೊಹಮ್ಮದ್ ವಾಸಿಮ್ ಜೂನಿಯರ್ ಕೂಡ ಮೂರು ವಿಕೆಟ್ ಪಡೆದುಕೊಂಡಿದ್ದಾರೆ. ಇನ್ನು ಹ್ಯಾರಿಸ್ ರೌಫ್ ಎರಡು ಹಾಗೂ ಇಫ್ತಿಕಾರ್ ಅಹ್ಮದ್ ಹಾಗೂ ಉಸಮ ಮಿರ್ ತಲಾ ಒಂದು ವಿಕೆಟ್ ಪಡೆದರು.
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹಾರಿಸ್ ರೌಫ್
ಬೆಂಚ್: ಇಮಾಮ್-ಉಲ್-ಹಕ್, ಹಸನ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್
ಬಾಂಗ್ಲಾದೇಶ: ಲಿಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಶಕೀಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ತೌಹಿದ್ ಹೃದಯೋಯ್, ಮೆಹಿದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಶೋರಿಫುಲ್ ಇಸ್ಲಾಂ
ಬೆಂಚ್: ನಸುಮ್ ಅಹ್ಮದ್, ಹಸನ್ ಮಹಮೂದ್, ತಂಝಿಮ್ ಹಸನ್ ಸಾಕಿಬ್, ಮಹೇದಿ ಹಸನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications