ಬ್ಯಾಟಿಂಗ್‌ನಲ್ಲಿ ಮತ್ತೆ ಅಬ್ಬರಿಸಿದ ಹರಿಣಗಳು: ಕಿವೀಸ್‌ಗೆ ಗೆಲ್ಲಲು ಕಠಿಣ ಸವಾಲು
ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಬ್ಯಾಟಿಂಗ್ ಅಬ್ಬರ ಮತ್ತೆ ಮುಂದುವರಿದಿದೆ. ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ದಕ್ಷಿಣ ಆಫ್ರಿಕಾ ತಂಡ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದೆ. ದಕ್ಷಿಣ ಆಫ್ರಿಕಾದ ಅಗ್ರ ಕ್ರಮಾಂಕದ ಆಟಗಾರರಾದ ಕ್ವಿಂಟನ್ ಡಿಕಾಕ್ ಹಾಗೂ ರಾಸ್ಸೀ ವಾನ್ ಡರ್ ಡುಸೆನ್ ಅಮೋಘ ಶತಕ ಸಿಡಿಸಿದ್ದು ಡೇವಿಡ್ ಮಿಲ್ಲರ್ ಭರ್ಜರಿ ಅರ್ಧ ಶತಕ ಸಿಡಿಸಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯದಲ್ಲಿ ಭರ್ಜರಿ 357/4 ರನ್‌ಗಳನ್ನು ಗಳಿಸಿ ಕಠಿಣ ಸವಾಲೊಡ್ಡಿದೆ.
ಈ ಪಂದ್ಯದಲ್ಲಿ ಟಾಸ್ ಸೋತ ದಕ್ಷಿಣ ಆಫ್ರಿಕಾವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಸಿತು ನ್ಯೂಜಿಲೆಂಡ್. ಈ ಸಂದರ್ಭದಲ್ಲಿ ನಾಯಕ ಟೆಂಬಾ ಬವುಮಾ ಅವರನ್ನು ಬೇಗನೆ ಕಳೆದುಕೊಂಡಿದ್ದರೂ ಡಿಕಾಕ್ ಹಾಗೂ ಡುಸೆನ್ ಜೋಡಿ ಅಮೋಘ ಜೊತೆಯಾಟ ಆಡುವ ಮೂಲಕ ಅಬ್ಬರಿಸಿದರು. ಈ ಜೋಡಿ ಎರಡನೇ ವಿಕೆಟ್‌ಗೆ ಭರ್ಜರಿ 200 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಇಬ್ಬರು ಕೂಡ ಅಮೋಘ ಶತಕ ಸಿಡಿಸಿ ಅಬ್ಬರಿಸಿದರು.

ಕ್ವಿಂಟನ್ ಡಿಕಾಕ್ ಈ ವಿಶ್ವಕಪ್‌ನಲ್ಲಿ ನಾಲ್ಕನೇ ಶತಕ ಸಿಡಿಸಿ ತಮ್ಮ ಅಮೋಘ ಫಾರ್ಮ್ ಮುಂದುವರಿಸಿದರೆ ವಾನ್ ಡರ್ ಡುಸೆನ್ ಕೂಡ ಈ ವಿಶ್ವಕಪ್‌ನಲ್ಲಿ ಎರಡನೇ ಶತಕ ಸಿಡಿಸಿದರು. ಡಿಕಾಕ್ 116 ಎಸೆತಗಳಲ್ಲಿ 114 ರನ್‌ಗಳನ್ನು ಗಳಿಸಿದರೆ ಡುಸೆನ್ 118 ಎಸೆತಗಳಲ್ಲಿ ಅಮೋಘ 133 ರನ್‌ಗಳನ್ನು ಗಳಿಸಿದರು.
ನಂತರ ಕಣಕ್ಕಿಳಿದ ಡೇವಿಡ್ ಮಿಲ್ಲರ್ ಕೂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದರು. 30 ಎಸೆತ ಎದುರಿಸಿದ ಅವರು 53 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಕ್ಲಾಸೆನ್ 15 ರನ್ ಹಾಗೂ ಮಾರ್ಕ್ರಮ್ 6 ರನ್‌ಗಳಿಸಿ ಅಜೇಯವಾಗುಳಿದಿದರು. ನ್ಯೂಜಿಲೆಂಡ್ ಪರವಾಗಿ ಟಿಮ್ ಸೌಥಿ ಎರಡು ವಿಕೆಟ್ ಪಡೆದುಕೊಂಡಿದ್ದರೆ ಬೋಲ್ಟ್ ಹಾಗೂ ಜಿಮ್ಮಿ ನೀಶಮ್ ತಲಾ ಒಂದು ವಿಕೆಟ್ ಪಡೆದರು.
ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಮಾರ್ಕ್ ಚಾಪ್ಮನ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಬೆಂಚ್: ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications