Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ: ವಿಶ್ವಕಪ್‌ನಲ್ಲಿ ಇಂದು ಬಲಿಷ್ಠರ ಮುಖಾಮುಖಿ: Live ಸ್ಕೋರ್

ವಿಶ್ವಕಪ್‌ನಲ್ಲಿ ಇಂದು 32ನೇ ಪಂದ್ಯ ನಡೆಯುತ್ತಿದ್ದು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್(ಎಂಸಿಎ) ಕ್ರೀಡಾಂಗಣದಲ್ಲಿ ಆಯೋಜನೆಯಾಗಿರುವ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಆರಂಭದಲ್ಲಿ ಬ್ಯಾಟಿಂಗ್ ನಡೆಸುವ ಸವಾಲು ಪಡೆದುಕೊಂಡಿದೆ.

ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಒಂದು ಬದಲಾವಣೆ ಮಾಡಿಕೊಂಡಿದೆ. ಟಿಮ್ ಸೌಥಿ ಆಡಲು ಫಿಟ್ ಆಗಿದ್ದು ಆಡುವ ಬಳಗದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಲೂಕಿ ಫರ್ಗ್ಯೂಸನ್ ಆಡುವ ಬಳಗದಿಂದ ಹೊರಬಿದ್ದಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿಯೂ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು ತಬ್ರೇಜ್ ಶಂಸಿ ಬದಲಿಗೆ ಕಗಿಸೋ ರಬಡಾ ಆಡುವ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ

World cup, match 32, New Zealand vs South Africa, Toss report, playing XI and Live score

Live ಸ್ಕೋರ್ ಹೀಗಿದೆ

1
57796

ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಅತ್ಯಂತ ಆಕ್ರಮಣಕಾರಿಯಾದ ಪ್ರದರ್ಶನ ನೀಡುತ್ತಿದೆ. ನೆದರ್ಲೆಂಡ್ಸ್ ವಿರುದ್ಧ ಆಘಾತ ಅನುಭವಿಸಿದ್ದು ಹೊರತುಪಡಿಸಿದರೆ ಉಳಿದೆಲ್ಲಾ ಪಂದ್ಯಗಳಲ್ಲಿಯೂ ಅಧಿಕಾರಿಯುತವಾದ ಗೆಲುವು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲಿನ ಸನಿಹಕ್ಕೆ ತಲುಪಿದ್ದರೂ ಅಂತಿಮವಾಗಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿರುವುದು ಗಮನಾರ್ಹ.

ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಅಬ್ಬರಿಸಿತ್ತು. ಕೊವೀಸ್ ತಂಡದ ಗೆಲುವಿನ ಸರಪಳಿಯನ್ನು ಭಾರತ ಮುರಿದ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದಲ್ಲಿಯೂ ಕಿವೀಸ್ ತಂಡ ಸೋಲು ಅನುಭವಿಸಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಘಟ್ಟದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ಒತ್ತಡದಲ್ಲಿದೆ.

ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್

ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಮಾರ್ಕ್ ಚಾಪ್ಮನ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಬೆಂಚ್: ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್

Story first published: Wednesday, November 1, 2023, 14:01 [IST]
Other articles published on Nov 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+