For Quick Alerts
ALLOW NOTIFICATIONS  
For Daily Alerts
 

ಪ್ರೊಟೀಸ್‌ಗೆ ಮತ್ತೊಂದು ಗೆಲುವಿನ ಬಲ: ಕಿವೀಸ್ ಪಡೆ ವಿಲವಿಲ

ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ಗೆಲುವಿನ ಓಟ ಮುಂದುವರಿದಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿರುವ ಎರಡು ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿತ್ತು. ಆದರೆ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಕಿವೀಸ್ ಪಡೆಯನ್ನು ಸಂಪೂರ್ಣವಾಗಿ ಮಂಡಿಯೂರುವಂತೆ ಮಾಡಿದೆ. ಆರಂಭದಲ್ಲಿ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ್ದ ದಕ್ಷಿಣ ಆಫ್ರಿಕಾ ಬಳಿಕ ಬೌಲಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಬರೊಬ್ಬರಿ 190 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ.

ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ನ್ಯೂಜಿಲೆಂಡ್ ಗೆಲುವಿಗೆ 358 ರನ್‌ಗಳ ಬೃಹತ್ ಗುರಿಯನ್ನು ನಿಗದಿಪಡಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಲು ಆರಂಭಿಸಿದ ನ್ಯೂಜಿಲೆಂಡ್ ತಂಡ ಆರಂಭದಲ್ಲಿಯೇ ಹಿನ್ನಡೆ ಅನುಭವಿಸಿತು. ಅನುಭವಿ ಆರಂಭಿಕ ಆಟಗಾರ ಡೆವೋನ್ ಕಾನ್ವೆ 2 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡಿದ್ದರು. ನಂತರ ಕಿವಿಸ್ ಪರವಾಗಿ ಭರವಸೆಯ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ರಚಿನ್ ರವೀಂದ್ರ ಕೂಡ ಒಂದಖಿಗೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದರು.

World cup, match 32, South Africa won by 190 runs against New Zealand, Highlights

ಈ ಸಂದರ್ಭದಲ್ಲಿ 33 ರನ್‌ಗಳಿಸಿದ್ದ ವಿಲ್ ಯಂಗ್ ಕೂಡ ವಿಕೆಟ್ ಕಳೆದುಕೊಂಡಾಗ ತಂಡ 56 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಹೀಗೆ ನ್ಯೂಜಿಲೆಂಡ್ ಬ್ಯಾಟರ್‌ಗಳ ವಿರುದ್ಧ ದಕ್ಷಿಣ ಆಫ್ರಿಕಾ ಬೌಲರ್‌ಗಳು ಮೇಲುಗೈ ಸಾಧಿಸುತ್ತಲೇ ಸಾಗಿದರು. ಗ್ಲೆನ್ ಫಿಲಿಪ್ಸ್ 60 ರನ್‌ಗಳೆ ಕೊಡುಗೆ ಹೊರತುಪಡಿಸಿ ಉಳಿದ ಯಾವ ಬ್ಯಾಟರ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲೇ ಇಲ್ಲ.

ಹೀಗಾಗಿ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಕೇವಲ 167 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ 190 ರನ್‌ಗಳ ಬೃಹತ್ ಅಂತರದಿಂದ ಸೋಲು ಅನುಭವಿಸಿದೆ. ದಕ್ಷಿಣ ಆಫ್ರಿಕಾ ತಂಡದ ಪರವಾಗಿ ಕೇಶವ್ ಮಹಾರಾಜ್ ನಾಲ್ಕು ವಿಕೆಟ್ ಕಬಳಿಸಿದ್ದರೆ ಮಾರ್ಕೋ ಜಾನ್ಸನ್ ಮೂರು ಗೆರಾಲ್ಡ್ ಕೊಯೆಟ್ಜೀ ಎರಡು ಹಾಗೂ ಕಗಿಸೋ ರಬಡಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ.

ಇನ್ನು ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಸೋತ ದಕ್ಷಿಣ ಆಫ್ರಿಕಾವನ್ನು ಮೊದಲಿಗೆ ಬ್ಯಾಟಿಂಗ್‌ಗೆ ಇಳಿಸಿತು ನ್ಯೂಜಿಲೆಂಡ್. ಈ ಸಂದರ್ಭದಲ್ಲಿ ನಾಯಕ ಟೆಂಬಾ ಬವುಮಾ ಅವರನ್ನು ಬೇಗನೆ ಕಳೆದುಕೊಂಡಿದ್ದರೂ ಡಿಕಾಕ್ ಹಾಗೂ ಡುಸೆನ್ ಜೋಡಿ ಅಮೋಘ ಜೊತೆಯಾಟ ಆಡುವ ಮೂಲಕ ಅಬ್ಬರಿಸಿದರು. ಈ ಜೋಡಿ ಎರಡನೇ ವಿಕೆಟ್‌ಗೆ ಭರ್ಜರಿ 200 ರನ್‌ಗಳ ಜೊತೆಯಾಟ ನೀಡಿ ಬೇರ್ಪಟ್ಟಿತು. ಇಬ್ಬರು ಕೂಡ ಅಮೋಘ ಶತಕ ಸಿಡಿಸಿ ಅಬ್ಬರಿಸಿದರು.

ಕ್ವಿಂಟನ್ ಡಿಕಾಕ್ ಈ ವಿಶ್ವಕಪ್‌ನಲ್ಲಿ ನಾಲ್ಕನೇ ಶತಕ ಸಿಡಿಸಿ ತಮ್ಮ ಅಮೋಘ ಫಾರ್ಮ್ ಮುಂದುವರಿಸಿದರೆ ವಾನ್‌ ಡರ್ ಡುಸೆನ್ ಕೂಡ ಈ ವಿಶ್ವಕಪ್‌ನಲ್ಲಿ ಎರಡನೇ ಶತಕ ಸಿಡಿಸಿದರು. ಡಿಕಾಕ್ 116 ಎಸೆತಗಳಲ್ಲಿ 114 ರನ್‌ಗಳನ್ನು ಗಳಿಸಿದರೆ ಡುಸೆನ್ 118 ಎಸೆತಗಳಲ್ಲಿ ಅಮೋಘ 133 ರನ್‌ಗಳನ್ನು ಗಳಿಸಿದರು.

ನಂತರ ಕಣಕ್ಕಿಳಿದ ಡೇವಿಡ್ ಮಿಲ್ಲರ್ ಕೂಡ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದರು. 30 ಎಸೆತ ಎದುರಿಸಿದ ಅವರು 53 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಕ್ಲಾಸೆನ್ 15 ರನ್‌ ಹಾಗೂ ಮಾರ್ಕ್ರಮ್ 6 ರನ್‌ಗಳಿಸಿ ಅಜೇಯವಾಗುಳಿದಿದರು. ನ್ಯೂಜಿಲೆಂಡ್ ಪರವಾಗಿ ಟಿಮ್ ಸೌಥಿ ಎರಡು ವಿಕೆಟ್ ಪಡೆದುಕೊಂಡಿದ್ದರೆ ಬೋಲ್ಟ್ ಹಾಗೂ ಜಿಮ್ಮಿ ನೀಶಮ್ ತಲಾ ಒಂದು ವಿಕೆಟ್ ಪಡೆದರು.

ನ್ಯೂಜಿಲೆಂಡ್ ಆಡುವ ಬಳಗ: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಇಶ್ ಸೋಧಿ, ಮಾರ್ಕ್ ಚಾಪ್ಮನ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ
ಬೆಂಚ್: ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್

Story first published: Wednesday, November 1, 2023, 21:34 [IST]
Other articles published on Nov 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+