For Quick Alerts
ALLOW NOTIFICATIONS  
For Daily Alerts
 

World cup 2023: ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ ಮುಖಾಮುಖಿ: ಸಮಯ, ಪಿಚ್ ರಿಪೋರ್ಟ್, ಸಂಭಾವ್ಯ ‍‍‍XI

ವಿಶ್ವಕಪ್ ಟೂರ್ನಿಯ 32 ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೊಸಿಯೇಶನ್ (ಎಂಸಿಎ)ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದ್ದು ಪೈಪೋಟಿಯ ಪ್ರದರ್ಶನವನ್ನು ಕ್ರಿಕೆಟ್ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಎರಡು ತಂಡಗಳು ಕೂಡ ಸೆಮಿಫೈನಲ್ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದು ಹೀಗಾಗಿ ಈ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಅತ್ಯಂತ ಆಕ್ರಮಣಕಾರಿಯಾದ ಪ್ರದರ್ಶನ ನೀಡುತ್ತಿದೆ. ನೆದರ್ಲೆಂಡ್ಸ್ ವಿರುದ್ಧ ಆಘಾತ ಅನುಭವಿಸಿದ್ದು ಹೊರತುಪಡಿಸಿದರೆ ಉಳಿದೆಲ್ಲಾ ಪಂದ್ಯಗಳಲ್ಲಿಯೂ ಅಧಿಕಾರಿಯುತವಾದ ಗೆಲುವು ಸಾಧಿಸಿದೆ. ಅಂತಿಮ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲಿನ ಸನಿಹಕ್ಕೆ ತಲುಪಿದ್ದರೂ ಅಂತಿಮವಾಗಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿರುವುದು ಗಮನಾರ್ಹ.

World cup, match 32nd: New Zealand vs South Africa; Probable XIs Pitch Report and Live details

ಮತ್ತೊಂದೆಡೆ ನ್ಯೂಜಿಲೆಂಡ್ ತಂಡ ಆರಂಭಿಕ ನಾಲ್ಕು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಅಬ್ಬರಿಸಿತ್ತು. ಕೊವೀಸ್ ತಂಡದ ಗೆಲುವಿನ ಸರಪಳಿಯನ್ನು ಭಾರತ ಮುರಿದ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದಲ್ಲಿಯೂ ಕಿವೀಸ್ ತಂಡ ಸೋಲು ಅನುಭವಿಸಿದೆ. ಹೀಗಾಗಿ ಲೀಗ್ ಹಂತದ ಕೊನೆಯ ಘಟ್ಟದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ಒತ್ತಡದಲ್ಲಿದೆ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಇಶ್ ಸೋಧಿ, ಮಾರ್ಕ್ ಚಾಪ್ಮನ್
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಕಗಿಸೊ ರಬಾಡಾ, ಆಂಡಿಲೆ ಫೆಹ್ಲುಕ್ವಾಯೊ, ಲಿಜಾಡ್ ವಿಲಿಯಮ್ಸ್

ಸಂಭಾವ್ಯ ಆಡುವ ಬಳಗ

ನ್ಯೂಜಿಲೆಂಡ್ XI: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್

ದಕ್ಷಿಣ ಆಫ್ರಿಕಾ XI: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ

Story first published: Tuesday, October 31, 2023, 23:47 [IST]
Other articles published on Oct 31, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+