Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟೀಮ್ ಇಂಡಿಯಾಗೆ ಸವಾಲೊಡ್ಡಲು ಸಜ್ಜಾದ ಶ್ರೀಲಂಕಾ: ಪಂದ್ಯದ ಸಮಯ ಹಾಗೂ ಸಂಭಾವ್ಯ XI

ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ 7ನೇ ಪಂದ್ಯವನ್ನಾಡಲು ಸಜ್ಜಾಗಿದೆ. ಈ ಬಾರಿ ಟೀಮ್ ಇಂಡಿಯಾಗೆ ಎದುರಾಳಿಯಾಗಿರುವುದು ಶ್ರೀಲಂಕಾ. ಟೀಮ್ ಇಂಡಿಯಾ ಈ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಾ ಅಬ್ಬರಿಸಿದ್ದರೆ ಶ್ರೀಲಂಕಾ ತಂಡ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದು ಸೆಮಿಫೈನಲ್ ಸ್ಪರ್ಧೆಯಿಂದ ಹೊರಬೀಳುವ ಹಂತದಲ್ಲಿದೆ. ಹೀಗಾಗಿ ಕೊನೆಯ ಹಂತದಲ್ಲಿ ಲಂಕಾ ತಂಡ ತನ್ನೆಲ್ಲಾ ಶಕ್ತಿಯನ್ನು ಒಗ್ಗೂಡಿಸಿ ಹೋರಾಟ ನಡೆಸುವ ನಿರೀಕ್ಷೆಯಲ್ಲಿದ್ದು ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಆಡಿದ ಎಲ್ಲಾ ಆರು ಪಂದ್ಯಗಳಲ್ಲಿಯೂ ಭರ್ಜರಿ ಗೆಲುವು ಸಾಧಿಸಿದ್ದು ಟೂರ್ನಿಯ ಅಜೇಯ ತಂಡವಾಗಿ ಉಳಿದುಕೊಂಡಿದೆ. ಈ ಮೂಲಕ ಬಹುತೇಕ ಸೆಮಿಫೈನಲ್‌ಗೆ ಕಾಲಿಟ್ಟಿದ್ದು ಅಧಿಕೃತವಾಗಬೇಕಿದೆ. ಕಳೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಕೇವಲ 230 ರನ್‌ಗಳನ್ನು ಕಲೆಹಾಕಿದ್ದರೂ ಭರ್ಜರಿ 100 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಇತ್ತ ಶ್ರೀಲಂಕಾ ತಂಡ ಆಡಿದ 6 ಪಂದ್ಯಗಳಲ್ಲಿ ಕೇವಲ 2 ಗೆಲುವು ಸಾಧಿಸಿದ್ದು 7ನೇ ಸ್ಥಾನದಲ್ಲಿದೆ.

World cup, match 33rd: India vs Sri Lanka; Probable XIs Pitch Report and Live details

ಇನ್ನು ಭಾರತ ಹಾಗೂ ಶ್ರೀಲಂಕಾ ತಂಡಗಳು 2011ರ ವಿಶ್ವಕಪ್‌ನ ಫೈನಲ್ ಪಂದ್ಯ ನಡೆದ ವಾಂಖೆಡೆ ಕ್ರೀಡಾಂಗಣದಲ್ಲಿಯೇ ಮುಖಾಮುಖಿಯಾಗುತ್ತಿರುವುದು ಕುತೂಹಲ ಕೆರಳಿಸಿದೆ. ಅಂದು ಭಾರತ ಶ್ರೀಲಂಕಾವನ್ನು ಮಣಿಸಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದ ಸಾಧನೆ ಮಾಡಿತ್ತು.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧದ ಪಂದ್ಯ ಗುರುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್(ವಿಕೆಟ್ ಕೀಪರ್/ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ದುಷ್ಮಂತ ಚಮೀರ, ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ, ಚಾಮಿಕಾ ಕರುಣಾರತ್ನ, ದುನಿತ್ ವೆಲ್ಲಲಗೆ, ದುಶನ್ ಹೇಮಂತ, ಕುಸಲ್ ಪೆರೇರಾ

ವಾಂಖೆಡೆ ಪಿಚ್ ರಿಪೋರ್ಟ್

ಮುಂಬೈನ ವಾಂಖೆಡೆ ಕ್ರೀಡಾಂಗಣ ಬ್ಯಾಟಿಂಗ್‌ಗೆ ಸ್ವರ್ಗ ಎಂದೇ ಖ್ಯಾತವಾಗಿರುವ ಕ್ರೀಡಾಂಗಣ. ಗುರುವಾರ ನಡೆಯಲಿರುವ ಪಂದ್ಯದಲ್ಲಿಯೂ ಬ್ಯಾಟರ್‌ಗಳು ಅಬ್ಬರಿಸುವ ನಿರೀಕ್ಷೆಯಿದೆ. ಹೊಸ ಚೆಂಡಿನಲ್ಲಿ ವೇಗಿಗಳಿಗೆ ಇಲ್ಲಿ ಉತ್ತಮ ನೆರವು ದೊರೆಯುವ ಸಾಧ್ಯತೆಯಿದೆ. ಇಲ್ಲಿ ಆಡಿರುವ 25 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 255 ಆಗಿದೆ. ಇನ್ನು ಕಳೆದ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ರನ್ ಬೆನ್ನಟ್ಟಿದ ತಂಡಗಳು ಗೆಲುವು ಸಾಧಿಸಿದೆ. ಆದರೆ 350ಕ್ಕೂ ಅಧಿಕ ರನ್ ಬಾರಿಸಿದ ತಂಡಗಳು ಸ್ಕೋರ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವ, ಏಂಜೆಲೊ ಮ್ಯಾಥ್ಯೂಸ್, ಮಹೇಶ್ ತೀಕ್ಷಣ, ಕಸುನ್ ರಜಿತ, ದುಷ್ಮಂತ ಚಮೀರ, ದಿಲ್ಶನ್ ಮಧುಶಂಕ

Story first published: Wednesday, November 1, 2023, 20:46 [IST]
Other articles published on Nov 1, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+