ಚಿನ್ನಸ್ವಾಮಿಯಲ್ಲಿ ಪಾಕ್ ಬೌಲರ್‌ಗಳನ್ನು ಚೆಂಡಾಡಿದ ಕಿವೀಸ್: ಬಾಬರ್ ಪಡೆಗೆ ಗೆಲ್ಲಲು ಬೃಹತ್ ಗುರಿ
ವಿಶ್ವಕಪ್ ಟೂರ್ನಿಯ 35ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಾಕಿಸ್ತಾನದ ಬೌಲರ್‌ಗಳ ವಿರುದ್ಧ ಕಿವೀಸ್ ಪಡೆ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದೆ. ನಿಗದಿತ 50 ಓವರ್‌ಗಳಲ್ಲಿ 401 ರನ್‌ಗಳನ್ನು ಗಳಿಸಿರುವ ನ್ಯೂಜಿಲೆಂಡ್ ಪಾಕ್ ತಂಡಕ್ಕೆ ಭಾರೀ ದೊಡ್ಡ ಗುರಿ ನೀಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲಿಗೆ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಆದರೆ ಇದರ ಲಾಭವನ್ನು ಪಡೆದುಕೊಂಡಿದ್ದು ನ್ಯೂಜಿಲಂಡ್. ಮೊದಲ ವಿಕೆಟ್‌ಗೆ 68 ರನ್‌ಗಳ ಉತ್ತಮ ಜೊತೆಯಾಟ ನೀಡಿದ ಕಾನ್ವೆ ಹಾಗೂ ರಚಿನ್ ರವೀಂದ್ರ ಜೋಡಿ ಕಾನ್ವೆ ವಿಕೆಟ್ ಕಳೆದುಕೊಳ್ಳುವ ಮೂಲಕ ಬೇರ್ಪಟ್ಟಿತು. ಆದರೆ ನಂತರ ಕಣಕ್ಕಿಳಿದ ನಾಯಕ ಕೇನ್ ವಿಲಿಯಮ್ಸನ್ ಅಮೋಘ ಜೊತೆಯಾಟದಲ್ಲಿ ಭಾಗಿಯಾದರು.

ರಚಿನ್ ಹಾಗೂ ಕೇನ್ ವಿಲಿಯಮ್ಸನ್ ಅಮೋಘ ಜೊತೆಯಾಟ ನೀಡುವ ಮೂಲಕ ಪಾಕ್ ತಂಡದ ಬೌಲಿಂಗ್ ವಿಭಾಗವನ್ನು ಹಿಮ್ಮೆಟ್ಟಿಸಿದರು. ಈ ವಿಶ್ವಕಪ್‌ನಲ್ಲಿ ಮೂರನೇ ಶತಕವನ್ನು ಸಿಡಿಸಿದ ರಚಿನ್ ರವೀಂದ್ರ 108 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ನಾಯಕ ಕೇನ್ ವಿಲಿಯಮ್ಸನ್ ಅಮೋಘ ಪ್ರದರ್ಶನ ನೀಡಿದ್ದು 79 ಎಸೆತಗಳಲ್ಲಿ 95 ರನ್‌ಗಳಿಸಿ ಶತಕದ ಅಂಚಿನಲ್ಲಿ ಎಡವಿ ವಿಕೆಟ್ ಕಳೆದುಕೊಂಡರು.
ಇನ್ನು ಇದಾದ ಬಳಿಕ ಬಂದ ಆಟಗಾರರು ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡದ ರನ್ ವೇಗವನ್ನು ಮತ್ತಷ್ಟು ಹೆಚ್ಚಿಸಿದರು. ಡ್ಯಾರೆಲ್ ಮಿಚೆಲ್, ಚಾಪ್ಮನ್, ಗ್ಲೆನ್ ಫಿಲಿಪ್ಸ್ ಅದ್ಭುತ ಕ್ಯಾಮಿಯೋ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ 401 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಕೈಲ್ ಜೇಮಿಸನ್, ವಿಲ್ ಯಂಗ್, ಜೇಮ್ಸ್ ನೀಶಮ್
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್
ಬೆಂಚ್: ಉಸಾಮಾ ಮಿರ್, ಶಾದಾಬ್ ಖಾನ್, ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications