ಫಖರ್ ಜಮಾನ್ ಸ್ಪೋಟಕ ಶತಕ: ಡಿಎಲ್ ನಿಯಮದಲ್ಲಿ ನ್ಯೂಜಿಲೆಂಡ್‌ಗೆ ಆಘಾತಕಾರಿ ಸೋಲುಣಿಸಿದ ಪಾಕ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಪಾಕಿಸ್ತಾನ ರೋಚಕ ಗೆಲುವು ಸಾಧಿಸಿದೆ. ಮಳೆಯಿಂದಾಗಿ ಅಡ್ಡಿಯಾದ ಈ ಪಂದ್ಯದಲ್ಲಿ ಡಕ್ವರ್ತ್ ಲೂಯಿಸ್ ನಿಯಮದ ಆಧಾರದಲ್ಲಿ ಫಲಿತಾಂಶ ನಿರ್ಧರಿಸಲಾಗಿದ್ದು ಪಂದ್ಯ ಸ್ಥಗಿತವಾದಾಗ ಡಿಎಲ್ ಅಧಾರದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್‌ಗಿಂತ 21 ರನ್‌ಗಳಷ್ಟು ಮುಂದಿತ್ತು. ಇದರಿಂದಾಗಿ ಈ ಪಂದ್ಯವನ್ನು ಪಾಕಿಸ್ತಾನ ತಂಡ ರೋಚಕವಾಗಿ ಗೆದ್ದುಕೊಂಡಿದೆ.
ನ್ಯೂಜಿಲೆಂಡ್ ತಂಡ ನೀಡಿದ 402 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಪಾಕಿಸ್ತಾನ ತಂಡಕ್ಕೆ ಆರಂಭಿಕ ಆಘಾತ ಉಂಟಾಯಿತು. ಅಬ್ದುಲ್ಲಾ ಶಫೀಕ್ 4 ರನ್‌ಗಳಿಸಿ ವಿಕೆಟ್ ಕಲೆದುಕೊಳ್ಳುವ ಮೂಲಕ ನಿರಾಸೆ ಅನುಭವಿಸಿದರು. ಆದರೆ ಅದಾದ ಬಳಿಕ ನ್ಯೂಜಿಲೆಂಡ್ ಬೌಲರ್‌ಗಳನ್ನು ಧ್ವಂಸಗೊಳಿಸಿದ್ದು ಫಕರ್ ಜಮಾನ್. ನಾಯಕ ಬಾಬರ್ ಅಜಂ ಜೊತೆಗೆ ಸೇರಿಕೊಂಡು ಕಿವೀಸ್ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿದರು.

ಫಖರ್ ಜಮಾನ್ ಈ ಪಂದ್ಯದಲ್ಲಿ ಕೇವಲ 81 ಎಸೆತಗಳಲ್ಲಿ 126 ರನ್‌ಗಳನ್ನು ಗಳಿಸಿದ್ದು ಅಓಘ ಶತಕ ಸಿಡಿಸಿ ಅಬ್ಬರಿಸಿದರು. ಇವರಿಗೆ ಅದ್ಭುತವಾಗಿ ಸಾಥ್ ನೀಡಿದ ಬಾಬರ್ ಅಜಂ 63 ಎಸೆತಗಳಲ್ಲಿ 66 ರನ್‌ಗಳಿಸಿ ಅಜೇಯವಾಗುಳಿದರು. ಮಳೆಯಿಂದಾಗಿ ಪಂದ್ಯ ಸ್ಥಗಿತಗೊಳ್ಳುವ ವೇಳೆಗೆ ಪಾಕಿಸ್ತಾನ ಕೇವಲ ಒಂದು ವಿಕೆಟ್ ಕಳೆದುಕೊಂಡು 200 ರನ್‌ಗಳನ್ನು ಗಳಿಸಿತ್ತು. ಈ ಮೂಲಕ ಡಿಎಲ್ ನಿಯಮದ ಆಧಾರದಲ್ಲಿ ಕಿವೀಸ್ ಪಡೆಗಿಂತ ಮುಂದಿತ್ತು. ಹೀಗಾಗಿ ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದಂತಾಗಿದೆ.
ಈ ಗೆಲುವಿನಿಂದಾಗಿ ಪಾಕಿಸ್ತಾನ ತಂಡ ಅತ್ಯಂತ ಮೌಲ್ಯಯುತ ಎರಡು ಅಂಕಗಳನ್ನು ತನ್ನದಾಗಿಸಿಕೊಂಡಿದೆ. ಈ ಸೋಲು ನ್ಯೂಜಿಲೆಂಡ್ ತಂಡಕ್ಕೆ ಭಾರೀ ಹಿನ್ನಡೆಯುಂಟು ಮಾಡಿರುವುದರಲ್ಲಿ ಅನುಮಾನವಿಲ್ಲ. ಈ ಗೆಲುವಿನೊಂದಿಗೆ ಪಾಕಿಸ್ತಾನ 8 ಪಂದ್ಯಗಳಿಂದ 8 ಅಂಕಗಳನ್ನು ಗಳಿಸಿ 5ನೇ ಸ್ಥಾನಕ್ಕೇರಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲಿಗೆ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿತು. ಆದರೆ ಇದರ ಲಾಭವನ್ನು ಪಡೆದುಕೊಂಡಿದ್ದು ನ್ಯೂಜಿಲಂಡ್. ಮೊದಲ ವಿಕೆಟ್‌ಗೆ 68 ರನ್‌ಗಳ ಉತ್ತಮ ಜೊತೆಯಾಟ ನೀಡಿದ ಕಾನ್ವೆ ಹಾಗೂ ರಚಿನ್ ರವೀಂದ್ರ ಜೋಡಿ ಕಾನ್ವೆ ವಿಕೆಟ್ ಕಳೆದುಕೊಳ್ಳುವ ಮೂಲಕ ಬೇರ್ಪಟ್ಟಿತು. ಆದರೆ ನಂತರ ಕಣಕ್ಕಿಳಿದ ನಾಯಕ ಕೇನ್ ವಿಲಿಯಮ್ಸನ್ ಅಮೋಘ ಜೊತೆಯಾಟದಲ್ಲಿ ಭಾಗಿಯಾದರು.
ರಚಿನ್ ಹಾಗೂ ಕೇನ್ ವಿಲಿಯಮ್ಸನ್ ಅಮೋಘ ಜೊತೆಯಾಟ ನೀಡುವ ಮೂಲಕ ಪಾಕ್ ತಂಡದ ಬೌಲಿಂಗ್ ವಿಭಾಗವನ್ನು ಹಿಮ್ಮೆಟ್ಟಿಸಿದರು. ಈ ವಿಶ್ವಕಪ್‌ನಲ್ಲಿ ಮೂರನೇ ಶತಕವನ್ನು ಸಿಡಿಸಿದ ರಚಿನ್ ರವೀಂದ್ರ 108 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ನಾಯಕ ಕೇನ್ ವಿಲಿಯಮ್ಸನ್ ಅಮೋಘ ಪ್ರದರ್ಶನ ನೀಡಿದ್ದು 79 ಎಸೆತಗಳಲ್ಲಿ 95 ರನ್‌ಗಳಿಸಿ ಶತಕದ ಅಂಚಿನಲ್ಲಿ ಎಡವಿ ವಿಕೆಟ್ ಕಳೆದುಕೊಂಡರು.
ಇನ್ನು ಇದಾದ ಬಳಿಕ ಬಂದ ಆಟಗಾರರು ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡದ ರನ್ ವೇಗವನ್ನು ಮತ್ತಷ್ಟು ಹೆಚ್ಚಿಸಿದರು. ಡ್ಯಾರೆಲ್ ಮಿಚೆಲ್, ಚಾಪ್ಮನ್, ಗ್ಲೆನ್ ಫಿಲಿಪ್ಸ್ ಅದ್ಭುತ ಕ್ಯಾಮಿಯೋ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ 401 ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಲಾಕಿ ಫರ್ಗುಸನ್, ಕೈಲ್ ಜೇಮಿಸನ್, ವಿಲ್ ಯಂಗ್, ಜೇಮ್ಸ್ ನೀಶಮ್
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್
ಬೆಂಚ್: ಉಸಾಮಾ ಮಿರ್, ಶಾದಾಬ್ ಖಾನ್, ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications