ನ್ಯೂಜಿಲೆಂಡ್ vs ಪಾಕಿಸ್ತಾನ; ಮಹತ್ವದ ಪಂದ್ಯಕ್ಕೆ ಬೆಂಗಳೂರು ಆತಿಥ್ಯ: ಪಂದ್ಯದ ಸಮಯ ಹಾಗೂ ಸಂಭಾವ್ಯ XI
ಈ ವಿಶ್ವಕಪ್ ಟೂರ್ನಿಯ 35ನೇ ಪಂದ್ಯ ಶನಿವಾರ ನಡೆಯಲಿದ್ದು ಹೈವೋಲ್ಟೇಜ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ಗೆಲುವು ಎರಡು ತಂಡಗಳಿಗೂ ಮಹತ್ವದ್ದಾಗಲಿದೆ. ಸೆಮಿಫೈನಲ್ಗೇರುವ ಸ್ಪರ್ಧೆಯಲ್ಲಿ ಪಾಕಿಸ್ತಾನ ತಂಡ ಮುಂದುವರಿಯಬೇಕಿದ್ದರೆ ಈ ಪಂದ್ಯದ ಗೆಲುವು ನಿರ್ಣಾಯಕವಾಗಿದ್ದು ನ್ಯೂಜಿಲೆಂಡ್‌ಗೂ ಈ ಗೆಲುವು ನಿರ್ಣಾಯಕವೆನಿಸಿದೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡ ನಾಲ್ಕನೇ ಸ್ಥಾನದಲ್ಲಿದೆ. ಈ ಸ್ಥಾನವನ್ನು ಭದ್ರಗೊಳಿಸಬೇಕಿದ್ದರೆ ಪಾಕಿಸ್ತಾನದ ವಿರುದ್ಧದ ಈ ಪಂದ್ಯದಲ್ಲಿ ಕಿವಿಸ್ ಪಡೆಗೆ ಗೆಲುವು ಅಗತ್ಯ. ಆರಂಭಿಕ ನಾಲ್ಕು ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿದ್ದ ನ್ಯೂಜಿಲೆಂಡ್ ತಮಡ ಬಳಿಕ ಮೂರು ಪಂದ್ಯಗಳಲ್ಲಿ ಸತತವಾಗಿ ಸೋಲು ಅನುಭವಿಸಿದೆ.ಹೀಗಾಗಿ ಈ ಸೋಲಿನ ಸರಪಳಿ ಕಡಿದುಕೊಳಳಬೇಕಿದ್ದು ಸೆಮಿಫೈನಲ್ ಕನಸು ಜೀವಂತವಾಗಿರಿಸಲು ಗೆಲುವಿಗಾಗಿ ಸರ್ವ ಪ್ರಯತ್ನ ನಡೆಸಲಿದೆ.

ಪಾಕಿಸ್ತಾನ ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡದ ಕಳೆದ ಮೂರು ಪಂದ್ಯಗಳ ಸೋಲು ಪಾಕ್ ತಂಡಕ್ಕೆ ಸೆಮಿಫೈನಲ್ ಸ್ಪರ್ಧೆಯಲ್ಲಿ ಇನ್ನೂ ಉಳಿದುಕೊಳ್ಳುವಂತೆ ಮಾಡಿದೆ. ಇನ್ನು ಕಳೆದ ಪಂದ್ಯದಲ್ಲಿ ಪಾಕ್ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಸತತ ನಾಲ್ಕು ಪಂದ್ಯಗಳ ಸೋಲಿನ ಸರಪಳಿಯನ್ನು ಕಡಿದುಕೊಂಡಿದೆ. ಪಾಕಿಸ್ತಾನಕ್ಕೆ ಉಳಿದುಕೊಂಡಿರುವ ಕೊನೆಯ ಎರಡು ಪಂದ್ಯಗಳಲ್ಲಿಯೂ ಗೆದ್ದರೆ ಮಾತ್ರವೇ ಸೆಮಿ ಫೈನಲ್ ಕನಸು ಜೀವಂತವಾಗುಳಿಯಲಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ವಿರುದ್ಧದ ಪಂದ್ಯ ಶನಿವಾರ ಭಾರತೀಯ ಕಾಲಮಾನ ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದ್ದು 10:00 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್, ಶಾದಾಬ್ ಖಾನ್, ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್, ಹಸನ್ ಅಲಿ
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಇಶ್ ಸೋಧಿ, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಕೇನ್ ವಿಲಿಯಮ್ಸನ್
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ರಿಪೋರ್ಟ್
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿ ಎನ್ನುವುದರಲ್ಲಿ ಅನುಮಾನವಿಲ್ಲ. ಇಲ್ಲಿ ಬೌಲರ್‌ಗಳಿಗೆ ನೆರವು ಬಹಳ ಕಷ್ಟ. ಆದರೆ ಕಳೆದ ಪಂದ್ಯದಲ್ಲಿ ಇಲ್ಲಿ ಪಾಕಿಸ್ತಾನ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ನಿರೀಕ್ಷಿತ ಮಟ್ಟದ ಬ್ಯಾಟಿಂಗ್ ಪ್ರದರ್ಶಿಸಲು ವಿಫಲವಾಗಿತ್ತು. 47ನೇ ಓವರ್‌ನಲ್ಲಿಯೇ ಪಾಕಿಸ್ತಾನ ತಂಡ ಆಲೌಟ್ ಆಗಿತ್ತು. ಹೀಗಾಗಾಗಿ ಬೌಲಿಂಗ್ ವಿಭಾಗ ಚಾಣಾಕ್ಷತನದ ಪ್ರದರ್ಶನ ನೀಡಿದರೆ ಇಲ್ಲಿ ಬ್ಯಾಟರ್‌ಗಳನ್ನು ಕಂಗೆಡಿಸುವ ಅವಕಾಶ ದೊರೆಯಲಿದೆ.
ಸಂಭಾವ್ಯ ಆಡುವ ಬಳಗ
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಶಾದಾಬ್ ಖಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ಹ್ಯಾರಿಸ್ ರೌಫ್
ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ & ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಕೈಲಿ ಜೇಮಿಸನ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications