For Quick Alerts
ALLOW NOTIFICATIONS  
For Daily Alerts
 

World cup: ಬೆಂಗಳೂರಿನಲ್ಲಿ ಭರ್ಜರಿ ಮಳೆ: ಪಾಕ್ vs ನ್ಯೂಜಿಲೆಂಡ್ ನಿರ್ಣಾಯಕ ಪಂದ್ಯ ನಡೆಯುತ್ತಾ?

ಶನಿವಾರ ವಿಶ್ವಕಪ್‌ ಟೂರ್ನಿಯ 35ನೇ ಪಂದ್ಯ ನಡೆಯಲಿದ್ದು ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಸೆಮಿಫೈನಲ್‌ಗೆ ಪ್ರವೇಶಿಸುವ ದೃಷ್ಟಿಯಿಂದ ಎರಡ ತಮಡಗಳಿಗೂ ಈ ಪಂದ್ಯದಲ್ಲಿನ ಗೆಲುವು ಮಹತ್ವದ್ದಾಗಿರಲಿದ್ದು ತೀವ್ರ ಪೈಪೋಟಿಯನ್ನು ನಿರೀಕ್ಷಿಸಲಾಗುತ್ತಿದೆ. ಆದರೆ ಈ ಪಂದ್ಯಕ್ಕೆ ಈಗ ಮಳೆಯ ಆತಂಕವುಂಟಾಗಿದ್ದು ಶನಿವಾರ ಪಂದ್ಯದ ನಡೆಯಲು ವರುಣ ಅವಕಾಶ ನೀಡಲಿದ್ದಾನಾ ಎನ್ನುವುದು ಪ್ರಶ್ನೆಯಾಗಿದೆ.

ಅಂದಹಾಗೆ ಶುಕ್ರವಾರ ಬೆಂಗಳೂರು ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಸಂಜೆ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಸಂಪೂರ್ಣವಾಗಿ ಕವರ್‌ನಿಂದ ಮುಚ್ಚಲಾಗಿತ್ತು. ಹೀಗಾಗಿ ಪಂದ್ಯದ ದಿನವಾದ ಶನಿವಾರವೂ ಮಳೆ ಸುರಿಯುವ ಆತಂಕವಿದ್ದು ಪಂದ್ಯಕ್ಕೆ ಅಡ್ಡಿಯಾಗಲಿದೆಯಾ ಎನ್ನುವ ಪ್ರಶ್ನೆ ಉಂಟಾಗಿದೆ.

World cup, match 35th: New Zealand vs Pakistan; rain threat for crucial match

ಅಕ್ಯುವೆದರ್ ಮಾಹಿತಿಯ ಪ್ರಕಾರ ಶನಿವಾರ ಹಗಲಿನ ವೇಳೆ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಶೇಕಡಾ 68ರಷ್ಟಿದೆ. ಈ ಪಂದ್ಯ ಸಂಪೂರ್ಣವಾಗಿ ದಿನದ ಪಂದ್ಯವಾಗಿದ್ದು ಪಂದ್ಯಕ್ಕೆ ಮಳೆ ಅಡ್ಡಿಯುಂಟು ಮಾಡುವ ಸಾಧ್ಯತೆ ಹೆಚ್ಚಾಗಿದೆ. ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಶೇಕಡಾ 27ರಷ್ಟಿದೆ. ಇನ್ನು ಸಮಯ ಕಳೆದಂತೆ ಉತ್ತಮ ವಾತಾವರಣವಿರಲಿದ್ದು ಸಂಜೆಯ ವೇಳೆಗೆ ಮಳೆಯಾಗುವ ಸಾಧ್ಯತೆ 25 ಮಾತ್ರವೇ ಇದೆ ಎಂದು ಹವಾಮಾನ ವರದಿ ಹೇಳುತ್ತಿದೆ.

ಮಳೆಗೆ ಪಂದ್ಯ ಆಹುತಿಯಾದರೆ ಕಥೆಯೇನು?
ಮಳೆಯಿಂದಾಗಿ ಈ ಪಂದ್ಯ ಸಂಪೂರ್ಣವಾಗಿ ರದ್ದಾರೆ ಎರಡು ತಂಡಗಳು ಕೂಡ ಸಮವಾಗಿ ಅಂಕಗಳನ್ನು ಹಂಚಿಕೊಳ್ಳಲಿದೆ. ಲೀಗ್ ಪಂದ್ಯಗಳಿಗೆ ಮೀಸಲು ದಿನ ಇರುವುದಿಲ್ಲ. ಇನ್ನು ಮಳೆಯಿಮದ ಪಂದ್ಯ ರದ್ದಾರೆ ನ್ಯೂಜಿಲೆಂಡ್ ತಂಡಕ್ಕೆ ಅನುಕೂಲವಾಗಲಿದ್ದು ಪಾಕಿಸ್ತಾನ ತಂಡದ ಸೆಮಿಫೈನಲ್ ಕನಸಿಗೆ ದೊಡ್ಡ ಹಿನ್ನಡೆಯಾಗಲಿದೆ. ನ್ಯೂಜಿಲೆಂಡ್ 8 ಪಂದ್ಯಗಳಿಂದ 9 ಅಂಕಗಹಳನ್ನು ಪಡೆದುಕೊಂಡರೆ ಪಾಕಿಸ್ತಾನ 8 ಪಂದ್ಯಗಳಿಂದ 7 ಅಂಕಗಳನ್ನು ಗಳಿಸಲಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಫಖರ್ ಜಮಾನ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಇಫ್ತಿಕರ್ ಅಹ್ಮದ್, ಸೌದ್ ಶಕೀಲ್, ಅಘಾ ಸಲ್ಮಾನ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಮೊಹಮ್ಮದ್ ವಾಸಿಂ ಜೂನಿಯರ್, ಹ್ಯಾರಿಸ್ ರೌಫ್, ಶಾದಾಬ್ ಖಾನ್, ಇಮಾಮ್-ಉಲ್-ಹಕ್, ಮೊಹಮ್ಮದ್ ನವಾಜ್, ಹಸನ್ ಅಲಿ

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ/ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಜೇಮ್ಸ್ ನೀಶಮ್, ಟ್ರೆಂಟ್ ಬೌಲ್ಟ್, ಕೈಲ್ ಜೇಮಿಸನ್, ಇಶ್ ಸೋಧಿ, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಕೇನ್ ವಿಲಿಯಮ್ಸನ್

Story first published: Friday, November 3, 2023, 21:29 [IST]
Other articles published on Nov 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+