World cup 2023: ಆಸ್ಟ್ರೇಲಿಯಾಗೆ ಇಂಗ್ಲೆಂಡ್ ಸವಾಲು: Live ಸ್ಕೋರ್
ವಿಶ್ವಕಪ್‌ನಲ್ಲಿ ಇಂದು ಬದ್ಧ ಎದುರಾಳಿಗಳು ಎನಿಸಿಕೊಂಡಿರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದುಕೊಂಡಿದ್ದು ಆರಂಭದಲ್ಲಿ ಬೌಲಿಂಗ್ ನಡೆಸುವ ನಿರ್ಧಾರ ತೆಗೆದುಕೊಂಡಿದೆ. ಹೀಗಾಗಿ ಆಸ್ಟ್ರೇಲಿಯಾ ಆರಂಭದಲ್ಲಿ ಬ್ಯಾಟಿಂಗ್ ನಡೆಸಲಿದೆ.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾದಲ್ಲಿ ಎರಡು ಬದಲಾವಣೆಗಳು ಆಗಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಮಿಚೆಲ್ ಮಾರ್ಶ್ ಹೊರಬಿದ್ದಿದ್ದು ಸ್ಟೋಯ್ನಿಸ್ ಹಾಗೂ ಕ್ಯಾಮರೂನ್ ಗ್ರೀನ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಇಂಗ್ಲೆಂಡ್ ತಂಡ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ.

ಸೆಮಿಫೈನಲ್ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಅಂಕಪಟ್ಟಿಯಲ್ಲಿ ಕೊನೆಯಲ್ಲಿರುವ ಇಂಗ್ಲೆಂಡ್ ಸವಾಲೊಡ್ಡಿದೆ. ಆಸ್ಟ್ರೇಲಿಯಾ ತಂಡ ಈವರೆಗೆ ಆಡಿರುವ 6 ಪಂದ್ಯಗಳಲ್ಲಿ ನಾಲ್ಕು ಗೆಲುವು ಸಾಧಿಸಿದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ ಹಾಲಿ ಚಾಂಪಿಯನ್ ಆಗಿರುವ ಇಂಗ್ಲೆಂಡ್ ತಂಡ ಆಡಿರುವ 6 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಹೀಗಾಗಿ ತೀವ್ರ ಟೀಕೆಗೆ ಇಂಗ್ಲೆಂಡ್ ಗುರಿಯಾಗಿದೆ. ಈ ಪಂದ್ಯದಲ್ಲಿ ಸೋಲು ಅನುಭವಿಸಿದರೆ ಇಂಗ್ಲೆಂಡ್ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.
ಇಂಗ್ಲೆಂಡ್ ಆಡುವ ಬಳಗ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಸ್ಯಾಮ್ ಕರ್ರಾನ್, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸೆ
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (c), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಅಲೆಕ್ಸ್ ಕ್ಯಾರಿ, ಸೀನ್ ಅಬಾಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications