Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ vs ಆಸ್ಟ್ರೇಲಿಯಾ ಮುಖಾಮುಖಿ: ಪಂದ್ಯದ ಸಮಯ ಹಾಗೂ ಸಂಭಾವ್ಯ XI

ವಿಶ್ವಕಪ್‌ನಲ್ಲಿ ಶನಿವಾರ ಡಬಲ್ ಹೆಡ್ಡರ್ ಪಂದ್ಯಗಳು ನಡೆಯಲಿದ್ದು ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು ಟೂರ್ನಿಯ 36ನೇ ಪಂದ್ಯ ಇದಾಗಿರಲಿದೆ. ಸೆಮಿಫೈನಲ್ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆಸ್ಟ್ರೇಲಿಯಾ ತಂಡಕ್ಕೆ ಅಂಕಪಟ್ಟೊಯಲ್ಲಿ ಕೊನೆಯಲ್ಲಿರುವ ಇಂಗ್ಲೆಂಡ್ ಸವಾಲೊಡ್ಡಲಿದೆ.

ಆಸ್ಟ್ರೇಲಿಯಾ ತಂಡ ಈವರೆಗೆ ಆಡಿರುವ 6 ಪಂದ್ಯಗಳಲ್ಲಿ ನಾಲ್ಕು ಗೆಲುವು ಸಾಧಿಸಿದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಆದರೆ ಹಾಲಿ ಚಾಂಪಿಯನ್ ಆಗಿರುವ ಇಂಗ್ಲೆಂಡ್ ತಂಡ ಆಡಿರುವ 6 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ ಒಂದು ಪಂದ್ಯದಲ್ಲಿ ಮಾತ್ರ. ಹೀಗಾಗಿ ತೀವ್ರ ಟೀಕೆಗೆ ಇಂಗ್ಲೆಂಡ್ ಗುರಿಯಾಗಿದೆ. ಶನಿವಾರದ ಪಂದ್ಯದಲ್ಲಿ ಸೋಲು ಅನುಭವಿಸಿದರೆ ಇಂಗ್ಲೆಂಡ್ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

World cup, match 36th: England vs Australia; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳ ವಿರುದ್ಧದ ಪಂದ್ಯ ಶನಿವಾರ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಕ್ಕೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಆಸ್ಟ್ರೇಲಿಯಾ: ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಸೀನ್ ಅಬಾಟ್, ಮಿಚೆಲ್ ಮಾರ್ಷ್

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್, ಸ್ಯಾಮ್ ಕರನ್, ಹ್ಯಾರಿ ಬ್ರೂಕ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸೆ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಕ್ಯಾಮೆರಾನ್ ಗ್ರೀನ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಇಂಗ್ಲಂಡ್: ಹ್ಯಾರಿ ಬ್ರೂಕ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (c & wk), ಲಿಯಾಮ್ ಲಿವಿಂಗ್ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಸ್ಯಾಮ್ ಕರ್ರಾನ್, ಆದಿಲ್ ರಶೀದ್, ಮಾರ್ಕ್ ವುಡ್

Story first published: Friday, November 3, 2023, 23:35 [IST]
Other articles published on Nov 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+