ವಿಶ್ವಕಪ್ ಟೂರ್ನಿಯ ಲೀಗ್ ಹಂತ ಕೊನೆಯ ಘಟ್ಟವನ್ನು ತಲುಪುತ್ತಿದೆ. ಭಾನುವಾರ ಈ ಬಾರಿಯ ವಿಶ್ವಕಪ್ ಟೂರ್ನಿಯ ಎರಡು ಬಲಿಷ್ಠ ತಂಡಗಳು ಕಾದಾಟ ನಡೆಸಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಒಂದೆಡೆ ಟೂರ್ನಿಯಲ್ಲಿ ಅಜೇಯವಾಗುಳಿದಿರುವ ಆತಿಥೇಯ ತಂಡ ಟೀಮ್ ಇಂಡಿಯಾ ಹಾಗೂ ಮತ್ತೊಂದೆಡೆ ಅಬ್ಬರದ ಬ್ಯಾಟಿಂಗ್ ಪ್ರದರ್ಶನದ ಮೂಲಕ ಎದುರಾಳಿಗಳನ್ನು ಸದೆಬಡಿತುತ್ತಿರುವ ದಕ್ಷಿಣ ಆಫ್ರಿಕಾ ತಂಡಳು ಈ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ.
ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಈವರೆಗೆ ಟೂರ್ನಿಯಲ್ಲಿ ಆಡಿರುವ ಎಲ್ಲಾ 7 ಪಂದ್ಯಗಳಲ್ಲಿಯೂ ಅದ್ಭುತ ಗೆಲುವು ಸಾಧಿಸಿದೆ. ಭಾರತ ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುತ್ತಿದ್ದು ಎದುರಾಳಿಯಳಿಗೆ ಯಾವ ವಿಭಾಗದಲ್ಲಿಯೂ ಅವಕಾಶ ನೀಡುತ್ತಿಲ್ಲ. ಹೀಗಾಗಿ ತಮಡದ ಆತ್ಮ,ವಿಶ್ವಾಸ ಹೆಚ್ಚಾಗಿದ್ದು ಹರಿಣಗಳ ವಿರುದ್ಧವೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ.

ಇನ್ನು ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿದ್ದು ಹೊರತುಪಡಿಸಿದರೆ ಉಳಿದ ಯಾವ ಪಂದ್ಯದಲ್ಲಿಯೂ ಎದುರಾಳಿಗಳಿಗೆ ಅವಕಾಶ ನೀಡಲೇ ಇಲ್ಲ. ಆಕ್ರಮಣಕಾರಿ ಬ್ಯಾಟಿಂಗ್ ನಡೆಸುತ್ತಿರುವ ಹರಿಣಗಳ ಪಡೆಗೆ ಬೌಲಿಂಗ್ ವಿಭಾಗ ಕೂಡ ಅಷ್ಟೇ ಅದ್ಭುತವಾಗಿ ಸಾಥ್ ನೀಡುತ್ತಿರುವುದು ಗಮನಾರ್ಹ. ಹೀಗಾಗಿ ಈ ಪಂದ್ಯ ತೀವ್ರ ಕುತೂಹಲ ಮೂಡಿಸಿದೆ.
ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ವಿರುದ್ಧದ ಪಂದ್ಯ ಭಾನುವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಪಿಚ್ ರಿಪೋರ್ಟ್
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಮಡಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ. ಇಲ್ಲಿನ ಪಿಚ್ ಸಾಂಪ್ರದಾಯಿಕವಾಗಿ ಬ್ಯಾಟಿಂಗ್ ಸ್ನೇಹಿಯಾಗಿದ್ದು ಭಾನುವಾರದ ಪಂದ್ಯದಲ್ಲಿಯೂ ರನ್ ಮಳೆ ಹರಿದುಬರುವ ನಿರೀಕ್ಷೆಯಿದೆ. ಆದರೆ ಪಂದ್ಯ ಮುಂದುವರಿದಂತೆ ಇಲ್ಲಿ ಸ್ಪಿನ್ನರ್‌ಗಳಿಗೆ ನೆರವು ದೊರೆಯುವ ಸಾಧ್ಯತೆಯಿದ್ದ ಕುತೂಹಲ ಹೆಚ್ಚಿಸಲಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಪ್ರಸಿದ್ಧ್ ಕೃಷ್ಣ
ದಕ್ಷಿಣ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಟ್ಜಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆಂಡಿಲೆ ಫೆಹ್ಲುಕ್ವಾಯೊ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಲಿಜಾದ್ ವಿಲಿಯಮ್ಸ್
ಇತ್ತಂಡಗಳ ಸಂಭಾವ್ಯ ಆಡುವ ಬಳಗ:
ಭಾರತ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ