ಮಹತ್ವದ ಪಂದ್ಯದಲ್ಲಿ ಆಸಿಸ್ vs ಅಫ್ಘನ್ ಸೆಣೆಸಾಟ: ಪಂದ್ಯದ ಸಮಯ ಹಾಗೂ ಸಂಭಾವ್ಯ XI
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮಂಗಳವಾರ ನಿರ್ಣಾಯಕ ಪಂದ್ಯ ಆಯೋಜನೆಯಾಗಲಿದೆ. ಸೆಮಿಫೈನಲ್ ಮೇಲೆ ಕಣ್ಣಿಟ್ಟಿರುವ ಎರಡು ತಂಡಗಳಾದ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಕೆಲ ಬಲಿಷ್ಠ ತಂಡಗಳಿಗೆ ಸೋಲುಣಿಸಿರುವ ಅಫ್ಘಾನಿಸ್ತಾನ ತಂಡ ಈ ಪಂದ್ಯದಲ್ಲಿ ಆಸ್ಟ್ರೇಲಿಯಾಗೂ ತಿರುಗೇಟು ನೀಡುವ ಹುಮ್ಮಸ್ಸಿನಲ್ಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.
ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಗೆದ್ದು ಸೆಮಿ ಫೈನಲ್ ಟಿಕೆಟ್ ಖಚಿತಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ ಅಫ್ಘಾನಿಸ್ತಾನ ತಂಡಕ್ಕೆ ಅಂತಿಮ ಎರಡು ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಸೆಮಿಫೈನಲ್ ಅವಕಾಶ ಖಚಿತವಾಗಲಿದ್ದು ಅದಕ್ಕಾಗಿ ತನ್ನ ಸರ್ವ ಪ್ರಯತ್ನ ನಡೆಸಲಿದೆ. ಹೀಗಾಗಿ ವಾಂಖೆಡೆ ಕ್ರೀಡಾಂಗಣದಲ್ಲಿ ಈ ಎರಡು ತಂಡಗಳ ಮಧ್ಯೆ ಸಾಕಷ್ಟು ಜಿದ್ದಾಜಿದ್ದಿನ ಕದನ ನಡೆಯುವ ನಿರೀಕ್ಷೆಯಿದೆ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳ ವಿರುದ್ಧದ ಪಂದ್ಯ ಮಂಗಳವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಇತ್ತಂಡಗಳ ಸಂಪೂರ್ಣ ಸ್ಕ್ವಾಡ್
ಅಫ್ಘಾನಿಸ್ತಾನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಷಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಜಾಯ್, ರಶೀದ್ ಖಾನ್, ಮುಜೀಬ್ ಉರ್ ರಹಮಾನ್, ನೂರ್ ಅಹ್ಮದ್, ಫಜಲ್ಹಕ್ ಫಾರೂಕಿ, ಅಬ್ದುಲ್ ರಹಮಾನ್, ನವೀನ್ ಉಲ್ ಹಕ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ XI: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಅಫ್ಘಾನಿಸ್ತಾನ XI: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಜದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಮೊಹಮ್ಮದ್ ನಬಿ,
ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್, ಫಜಲ್ಹಕ್ ಫಾರೂಕಿ, ನೂರ್ ಅಹ್ಮದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications