ವಿಶ್ವಕಪ್‌ನ ನಾಲ್ಕನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ತಮಡ ಮೊದಲಿಗೆ ಬ್ಯಾಟಿಂಗ್ ಮಾಡಿದ್ದು ಅಬ್ಬರದ ಪ್ರದರ್ಶನ ನೀಡಿದೆ. ಶ್ರೀಲಂಕಾ ಬೌಲಿಂಗ್ ವಿಭಾಗವನ್ನು ಅಕ್ಷರಶಃ ಪುಡಿಗಟ್ಟಿದ ಆಫ್ರಿಕಾ ಬ್ಯಾಟರ್‌ಗಳು ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯ ಮೊತ್ತದ ಗುರಿ ನಿಗದಿಪಡಿಸಿದ್ದಾರೆ.
ಈ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ತಮಡದ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿ ಅಬ್ಬರಿಸಿರುವುದು ವಿಶೇಷ. ಅನುಭವಿ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್, ರಾಸ್ಸಿ ವಾಂಡರ್ ಡುಸೆನ್ ಹಾಗೂ ಐಡೆನ್ ಮಾರ್ಕ್ರಮ್ ಅಬ್ಬರದ ಶತಕ ಸಿಡಿಸಿದ್ದು ದಕ್ಷಿಣ ಆಫ್ರಿಕಾ ತಂಡ ಈ ಪಂದ್ಯದಲ್ಲಿ ಬರೊಬ್ಬರಿ 428 ರನ್‌ಗಳನ್ನು ಗಳಿಸಲು ಕಾರಣವಾದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಆರಂಭದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದೆ. ಆದರೆ ಆರಂಭಿಕ ಆಟಗಾರ ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾ ಅವರನ್ನು 10 ರನ್‌ಗಳಾಗುವಷ್ಟರಲ್ಲಿ ಔಟ್ ಮಾಡುವಲ್ಲಿ ಯಶಸ್ವಿಯಾಯಿತು. ಆದರೆ ಅದಾದ ಬಳಿಕ ಲಂಕಾ ಬೌಲರ್‌ಗಳಿಗೆ ಆಘಾತದ ಮೇಲೆ ಆಘಾತ ಎದುರಾಗಿತ್ತು.
ಕ್ವಿಂಟನ್ ಡಿಕಾಕ್ ಜೊತೆ ಸೇರಿಕೊಂಡ ವಾನ್ ಡರ್ ಡುಸೆನ್ ಬರೊಬ್ಬರಿ 204 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. 100 ರನ್ ಗಳಿಸಿ ವಿಕೆಟ್ ಕಳೆದುಕೊಂಡ ಬಳಿಕ ಡುಸೆನ್‌ಗೆ ಸಾಥ್ ನೀಡಿದ್ದು ಮಾರ್ಕ್ರಮ್. ವಾಡರ್ ಡುಸೆನ್ ಕೂಡ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಇನ್ನು ಮತ್ತೊಂದೆಡೆ ಐಡೆನ್ ಮಾರ್ಕ್ರಮ್ ಮತ್ತಷ್ಟು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ನಡೆಸಿದರು. ಕ್ಲಾಸೆನ್ ಹಾಗೂ ಮಿಲ್ಲರ್ ಜೊತೆಗೆ ಸೇರಿಕೊಂಡು ಅಬ್ಬರದ ಬ್ಯಾಟಿಂಗ್ ನಡೆಸಿದರು. ಕೇವಲ 54 ಎಸೆತಗಳಲ್ಲಿ 106 ರನ್‌ಗಳನ್ನು ಸಿಡಿಸಿ ಈ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಪ್ರಿಕಾ ಪರವಾಗಿ ಶತಕ ಸಿಡಿಸಿದ ಮೂರಬೇ ಆಟಗಾರ ಎನಿಸಿಕೊಂಡರು. ಈ ಭರ್ಜರಿ ಪ್ರದರ್ಶನದೊಂದಿಗೆ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ಕಳೆದುಕೊಂಡು 428 ರನ್‌ಗಳನ್ನು ಕಲೆಹಾಕಿದೆ.
ದಕ್ಷಿಣ ಆಫ್ರಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೋಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ
ಬೆಂಚ್: ಆಂಡಿಲ್ ಫೆಹ್ಲುಕ್ವಾಯೊ, ಲಿಜಾದ್ ವಿಲಿಯಮ್ಸ್, ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್
ಶ್ರೀಲಂಕಾ: ಕುಸಾಲ್ ಪೆರೇರಾ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ದಸುನ್ ಶನಕ (ಸಿ), ದುನಿತ್ ವೆಲ್ಲಲಗೆ, ಮಥೀಶ ಪತಿರಣ, ದಿಲ್ಶನ್ ಮಧುಶಂಕ, ಕಸುನ್ ರಜಿತ
ಬೆಂಚ್: ದಿಮುತ್ ಕರುಣಾರತ್ನ, ಲಹಿರು ಕುಮಾರ, ದುಶನ್ ಹೇಮಂತ, ಮಹೇಶ್ ತೀಕ್ಷಣ