Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್‌ಗೆ ಸವಾಲೊಡ್ಡಿದ ನೆದರ್ಲೆಂಡ್ಸ್ : ಪಂದ್ಯದ ಸಮಯ ಹಾಗೂ ಸಂಭಾವ್ಯ XI

ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಸ್ಪರ್ಧೆಯಿಂದ ಈಗಾಗಲೇ ಅಧಿಕೃತವಾಗಿ ಹೊರಬಿದ್ದಿರುವ ಇಂಗ್ಲೆಂಡ್ ತಂಡ ನೆದರ್ಲೆಂಡ್ಸ್ ತಂಡವನ್ನು ಬುಧವಾರ ಎದುರಿಸಲಿದೆ. ಹಾಲಿ ಚಾಂಪಿಯನ್ ಆಗಿ ಟೂರ್ನಿಯಲ್ಲಿ ಕಣಕ್ಕಿಳಿದ ಇಂಗ್ಲೆಂಡ್ ತಂಡ ಅತ್ಯಂತ ಹೀನಾಯ ಪ್ರದರ್ಶನ ನೀಡಿ ತೀವ್ರ ಟೀಕೆಗೆ ಗುರಿಯಾಗಿದೆ. ಆಡಿರುವ 7 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು ಮಾತ್ರವೇ ಸಾಧಿಸಿರುವ ಇಂಗ್ಲೆಂಡ್ ಎರಡನೇ ಗೆಲುವಿಗಾಗಿ ಹಪಹಪಿಸುತ್ತಿದೆ.

ಇಂಗ್ಲೆಂಡ್ ತಂಡ ಪ್ರಸ್ತುತ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಕಳೆದುಕೊಳ್ಳುವ ಸಾಧ್ಯತೆಯಿದೆ. ಉಳಿದಿರುವ ಕೊನೆಯ ಎರಡು ಪಂದ್ಯಗಳಲ್ಲಿ ಗೆದ್ದು ಆ ಅವಕಾಶ ಗಿಟ್ಟಿಸಿಕೊಳ್ಳುವುದು ಇಂಗ್ಲೆಂಡ್ ಮುಂದಿರುವ ಗುರಿ. ಹೀಗಾಗಿ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದೆ ಇಂಗ್ಲೆಂಡ್.

World cup, match 40th: England vs Netherlands; Probable XIs Pitch Report and Live details

ಇನ್ನು ನೆದರ್ಲೆಂಡ್ಸ್ ತಂಡ ಅಂಕಪಟ್ಟಿಯಲ್ಲಿ ಸದ್ಯ ಇಂಗ್ಲೆಂಡ್ ತಂಡಕ್ಕಿಂತ ಉತ್ತಮ ಸ್ಥಾನದಲ್ಲಿದೆ ಎನ್ನುವುದು ಗಮನಾರ್ಹ. ಇಂಗ್ಲೆಂಡ್ 10ನೇ ಸ್ಥಾನದಲ್ಲಿದ್ದರೆ ನೆದರ್ಲೆಂಡ್ಸ್ 9ನೇ ಸ್ಥಾನದಲ್ಲಿದೆ.

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಇಂಗ್ಲೆಂಡ್ ಹಾಗೂ ನೆದರ್ಲೆಂಡ್ಸ್ ತಂಡಗಳ ವಿರುದ್ಧದ ಪಂದ್ಯ ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‌ಸ್ಟೋ, ಸ್ಯಾಮ್ ಕರ್ರಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲನ್, ಆದಿಲ್ ರಶೀದ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್, ಬ್ರೈಡನ್ ಕಾರ್ಸೆ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸ್

ನೆದರ್ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒ'ಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‌ಬ್ರೆಕ್ಟ್

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ಇತ್ತಂಡಗಳ ಸಂಭಾವ್ಯ ‍XI

ಇಂಗ್ಲೆಂಡ್: ಹ್ಯಾರಿ ಬ್ರೂಕ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಬ್ರೈಡನ್ ಕಾರ್ಸೆ

ನೆದರ್ಲ್ಯಾಂಡ್ಸ್: ವೆಸ್ಲಿ ಬ್ಯಾರೆಸಿ, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಸೈಬ್ರಾಂಡ್ ಎಂಗಲ್ಬ್ರೆಕ್ಟ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಬಾಸ್ ಡಿ ಲೀಡೆ, ಸಾಕಿಬ್ ಜುಲ್ಫಿಕರ್, ಲೋಗನ್ ವ್ಯಾನ್ ಬೀಕ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಆರ್ಯನ್ ದತ್, ಪಾಲ್ ವ್ಯಾನ್ ಮೀಕೆರೆನ್

Story first published: Tuesday, November 7, 2023, 19:54 [IST]
Other articles published on Nov 7, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+