Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸೆಮಿಫೈನಲ್‌ಗೆ ಕಣ್ಣಿಟ್ಟ ಕಿವೀಸ್‌ಗೆ ಲಂಕಾದ ಅಗ್ನಿಪರೀಕ್ಷೆ : ಪಂದ್ಯದ ಸಮಯ ಹಾಗೂ ಸಂಭಾವ್ಯ XI

ಗುರುವಾರ ಬೆಂಗಳೂರಿನ ಚಿನ್ನ ಸ್ವಾಮಿ ಕ್ರೀಡಾಂಗಣ ಪ್ರಮುಖ ಪಂದ್ಯವೊಂದಕ್ಕೆ ಸಾಕ್ಷಿಯಾಗಲಿದೆ. ಟೂರ್ನಿಯ 41ನೇ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿದ್ದು ಕಿವೀಸ್ ಪಡೆಗೆ ಈ ಪಂದ್ಯ ಅತ್ಯಂತ ನಿರ್ಣಾಯಕವೆನಿಸಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿರುವ ನ್ಯೂಜಿಲೆಂಡ್ ತಂಡ ಈ ಪಂದ್ಯವನ್ನು ದೊಡ್ಡ ಅಂತರದಿಂದ ಗೆದ್ದು ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ.

ಇನ್ನು ಮತ್ತೊಂದೆಡೆ ಶ್ರೀಲಂಕಾ ತಂಡ ಈಗಾಗಲೇ ಸೆಮಿಫೈನಲ್ ಸ್ಪರ್ಧೆಯಿಂದ ಹೊರಬಿದ್ದಿದೆ. ಆದರೆ ಸಾಲು ಸಾಲು ಸೋಲು ಅನುಭವಿಸಿರುವ ಲಂಕಾ ತಂಡ ಕೊನೆಯ ಪಂದ್ಯದಲ್ಲಿ ಗೆದ್ದು ಗೌರವಯುತವಾಗಿ ಟೂರ್ನಿಯನ್ನು ಮುಗಿಸುವ ಲೆಕ್ಕಾಚಾರದಲ್ಲಿದೆ. ಜೊತೆಗೆ ಸೆಮಿಫೈನಲ್ ಕನಸು ಕಾಣುವ ಕಿವೀಸ್‌ ಲೆಕ್ಕಾಚಾರವನ್ನು ಬುಡಮೇಲುಗೊಳಿಸಲು ರಣತಂತ್ರ ಹೆಣೆಯುತ್ತಿದೆ.

World cup, match 41st: New Zealand vs Sri Lanka; Probable XIs Pitch Report and Live details

ಪಂದ್ಯ ಸಮಯ ಹಾಗೂ ನೇರಪ್ರಸಾರದ ಮಾಹಿತಿ

ನ್ಯೂಜಿಲೆಂಡ್ ಹಾಗೂ ಶ್ರೀಲಂಕಾ ತಂಡಗಳ ವಿರುದ್ಧದ ಪಂದ್ಯ ಬುಧವಾರ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು 1:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಪಂದ್ಯದ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಇರಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸಬಹುದಾಗಿದೆ.

ಇತ್ತಂಡಗಳ ಸಂಪೂರ್ಣ ಸ್ಕ್ವಾಡ್

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಕೈಲ್ ಜೇಮಿಸನ್, ಜೇಮ್ಸ್ ನೀಶಮ್, ವಿಲ್ ಯಂಗ್

ಶ್ರೀಲಂಕಾ: ಕುಸಾಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ಕಸುನ್ ರಜಿತ, ದಿಲ್ಶನ್ ಮಧುಶಂಕ, ದಿಮುತ್ ಕರುಣಾರತ್ನೆ, ದುಶನ್ ಹೇಮಂತ, ಚಾಮಿಕ ಕರುಣಾರತ್ನೆ, ಲಹಿರು ಕುಮಾರ, ದುನಿತ್ ವೆಲ್ಲಲಾಗೆ

ಇತ್ತಂಡಗಳ ಸಂಭಾವ್ಯ ಆಡುವ ಬಳಗ

ನ್ಯೂಜಿಲೆಂಡ್: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್/ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್

ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಕುಸಲ್ ಮೆಂಡಿಸ್ (ನಾಯಕ & ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಮಹೇಶ್ ತೀಕ್ಷಣ, ದುಷ್ಮಂತ ಚಮೀರ, ಕಸುನ್ ರಜಿತ, ದಿಲ್ಶನ್ ಮಧುಶಂಕ

Story first published: Wednesday, November 8, 2023, 20:28 [IST]
Other articles published on Nov 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+